ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಹೈಟೆಕ್‌ ಆಸ್ಪತ್ರೆ

ಈ ವರ್ಷವೇ ನಿರ್ಮಾಣ ಕಾರ್ಯ: ಸಿಎಂ

Team Udayavani, May 31, 2019, 1:00 PM IST

bengaluru-tdy-5..

ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ತಲಾ ಒಂದೊಂದು ಹೈಟೆಕ್‌ ಆಸ್ಪತ್ರೆ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು.

ಸಂಜಯಗಾಂಧಿ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನೂತನ ಎಂ.ಆರ್‌.ವಿ. ಯಂತ್ರೋಪಕರಣ ಘಟಕ ಹಾಗೂ ಮಾಡ್ಯೂಲರ್‌ ಶಸ್ತ್ರ ಚಿಕಿತ್ಸಾ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಗಳು ನಡೆದ ವೇಳೆ, ಸಕಾಲಕ್ಕೆ ಸರಿಯಾಗಿ ನಗರದ ಹೃದಯ ಭಾಗದಲ್ಲಿರುವ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ಕರೆತರಲು ಆಗುವುದಿಲ್ಲ ಎಂದರು.

ಹೈಟೆಕ್‌ ಆಸ್ಪತ್ರೆಗಳ ನಿರ್ಮಾಣದ ಸಂಬಂಧ ಯೋಜನೆ ಸಿದ್ಧವಾಗುತ್ತಿದೆ. ಇದಕ್ಕಾಗಿ ಸರ್ಕಾರ 100 ರಿಂದ 150 ಕೋಟಿ ರೂ.ಮೀಸಲಿಡಲಿದೆ. ಆಸ್ಪತ್ರೆ ನಿರ್ಮಾಣದ ಕಾರ್ಯ ಈ ವರ್ಷವೇ ಆರಂಭವಾಗಲಿದೆ ಎಂಬ ಭರವಸೆ ನೀಡಿದರು.

ಕಾರಿಡಾರ್‌ ಬಗ್ಗೆ ಗೊಂದಲ ಸೃಷ್ಟಿಸಲಾಗುತ್ತಿದೆ: ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಇದನ್ನು ತಪ್ಪಿಸಲು ಸರ್ಕಾರ ಎಲಿವೇಟೆಡ್‌ ಕಾರಿಡಾರ್‌ ಯೋಜನೆ ರೂಪಿಸಿದೆ. ಇದಕ್ಕಾಗಿ ಸರ್ಕಾರ ಸುಮಾರು 24 ಸಾವಿರ ಕೋಟಿ.ರೂ. ಮೀಸಲಿಟ್ಟಿದ್ದು, ಯೋಜನೆ ಬಗ್ಗೆ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಕಡಿಮೆ ದರದಲ್ಲಿ ಆರೋಗ್ಯ ಸೇವೆ: ಸಂಸ್ಥೆಯ ನಿರ್ದೇಶಕ ಡಾ.ಎಚ್.ಎಸ್‌.ಚಂದ್ರಶೇಖರ್‌ ಮಾತನಾಡಿ, ಎಂ.ಆರ್‌.ವಿ.ಯಂತ್ರೋಪಕರಣ ಲಭ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ 2.600 ರೂ.ಗಳಿಗೆ ಆರೋಗ್ಯ ಸೇವೆ ನೀಡಬಹುದಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ ಹೊಂದಿರುವವರು 1.300 ರೂ.ಗಳಲ್ಲಿ ಸೇವೆ ಪಡೆಯಬಹುದಾಗಿದೆ ಎಂದರು. ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಶಾಸಕ ಉದಯ್‌ ಗರುಡಾಚಾರ್‌, ಆರೋಗ್ಯ ಮತ್ತು ಕುಟುಂಬ ಇಲಾಖೆ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಇದ್ದರು.

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.