ಗಣಿಗಳಲ್ಲಿ ನೀರು ಪತ್ತೆಗೆ ಪರದಾಟ!

Team Udayavani, May 31, 2019, 1:18 PM IST

1-June-20

ವಾಡಿ: ಬಳವಡಗಿ ಗ್ರಾಮದಲ್ಲಿ ಕುಡಿಯುವ ಹಾಹಾಕಾರ ಭುಗಿಲೆದ್ದಿದ್ದು, ಜನರು ದೂರದ ಕಲ್ಲು ಗಣಿಗಳಿಂದ ನೀರು ಹೊತ್ತು ತರುತ್ತಿದ್ದಾರೆ.

ವಾಡಿ: ಅತ್ತ ಉರಿ ಬಿಸಿಲಿನ ತಾಪ. ಇತ್ತ ಕೊಡ ನೀರಿಗಾಗಿ ಪರದಾಡುವ ತಾಪತ್ರಯ. ಅಡವಿ, ಅರಣ್ಯ ತಿರುಗಿ ನೀರು ಪತ್ತೆ ಮಾಡುತ್ತಿರುವ ವಿವಿಧ ಗ್ರಾಮಗಳ ಜನರು, ಜಲದಾಹ ನೀಗದೆ ಸಂಕಟ ಅನುಭವಿಸುತ್ತಿದ್ದಾರೆ.

ಪಟ್ಟಣ ಸಮೀಪದ ಹಳಕರ್ಟಿ ಗ್ರಾಪಂ ವ್ಯಾಪ್ತಿಯ ಬಳವಡಗಿ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಭುಗಿಲೆದ್ದು ಎರಡು ತಿಂಗಳು ಕಳೆದಿದೆ. ಜಿಲ್ಲಾಡಳಿತ ನೀಡಿದ ಟ್ಯಾಂಕರ್‌ ನೀರಿನ ಭರವಸೆ ಹುಸಿಯಾಗಿದೆ. ಜನರ ನೆರವಿಗೆ ನಿಲ್ಲಬೇಕಿದ್ದ ಗ್ರಾಪಂ ಆಡಳಿತ ಚುನಾವಣೆಯಲ್ಲಿ ಕಾಲಹರಣ ಮಾಡಿದೆ. ಅಧಿಕಾರಿಗಳು ಜನರ ಗೋಳು ಕೇಳಲು ಮುಂದಾಗಿಲ್ಲ. ಗ್ರಾಮದಿಂದ 2 ಕಿಮೀ ದೂರದಲ್ಲಿ ಪಾಳುಬಿದ್ದ ಕಲ್ಲು ಗಣಿಗಳಲ್ಲಿ ಖಾಲಿ ಕೊಡಗಳೊಂದಿಗೆ ಅಲೆದು ನೀರಿನ ಹೊಂಡಗಳನ್ನು ಪತ್ತೆ ಮಾಡುತ್ತಿರುವ ಮಹಿಳೆಯರು, ಚೀಪುಗಲ್ಲುಗಳ ಮಧ್ಯೆ ಸಂಗ್ರಹವಾಗಿದ್ದ ಪಾಚಿ ನೀರು ಹೊತ್ತು ತರುತ್ತಿದ್ದಾರೆ.

ಗ್ರಾಮದಲ್ಲಿ ಹಳೆಯ ಬಾವಿಗಳಿದ್ದು ಅಂತರ್ಜಲ ಬತ್ತಿದೆ. ಗ್ರಾಪಂ ನೀಡಿರುವ ನಳಗಳ ಸೌಲಭ್ಯದಲ್ಲಿ ಹನಿ ನೀರೂ ಜಿನುಗುತ್ತಿಲ್ಲ. ಟ್ಯಾಂಕರ್‌ ನೀರಿನ ಬೇಡಿಕೆಯಿಟ್ಟರೂ ಗ್ರಾಪಂ ಆಡಳಿತ ಕ್ಯಾರೆ ಎಂದಿಲ್ಲ. ಇಡೀ ದಿನ ಕಲ್ಲು ಗಣಿಗಳಲ್ಲಿ ಕೂಲಿ ಮಾಡಿ ಬದುಕು ನಡೆಸುತ್ತಿರುವ ಬಡ ಕುಟುಂಬಗಳು, ಬೆಳಗ್ಗೆ 6ರಿಂದ 8ರವರೆಗೆ ಹಾಗೂ ಸಂಜೆ 4ರಿಂದ 7ರವರೆಗೆ ಗಣಿಗಳನ್ನು ತಿರುಗಿ ನೀರು ಹುಡುಕುತ್ತಿದ್ದಾರೆ. ಕಲ್ಲಿನ ಗುಂಡಿಗಳಲ್ಲಿ ನಿಂತ ನೀರನ್ನು ಲೋಟಗಳಿಂದ ಕೊಡಗಳಿಗೆ ತುಂಬಬೇಕಾದ ದುಸ್ಥಿತಿ ಎದುರಾಗಿದೆ. ಮಕ್ಕಳು, ಮಹಿಳೆಯರು, ವಯಸ್ಕರು ಕೊಡಗಳನ್ನು ಹಿಡಿದು ದೂರದ ಗಣಿಗಳತ್ತ ನಡೆದರೆ, ಯುವಕರು ಬೈಕ್‌ಗಳ ಮೇಲೆ ನೀರು ಸಾಗಿಸುತ್ತಿದ್ದಾರೆ. ಪ್ರತಿ ವರ್ಷ ಬೇಸಿಗೆಯಲ್ಲಿ ಬಳವಡಗಿ ಗ್ರಾಮ ನೀರಿಗಾಗಿ ತತ್ತರಿಸುತ್ತದೆ. ಆದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ನಮ್ಮೂರಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ಒದಗಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬಳವಡಗಿ ಗ್ರಾಮದ ಸುತ್ತಲೂ ಕಲ್ಲು ಗಣಿಗಳಿವೆ. ಗ್ರಾಮದಲ್ಲಿ ನೀರಿನ ಸೌಲಭ್ಯವಿಲ್ಲದ ಕಾರಣ ಗಣಿಗಳಲ್ಲಿ ನಿಂತ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನಮ್ಮೂರಿನ ಪರಸ್ಥಿತಿ ನೋಡಿದರೆ ಜಿಲ್ಲಾಧಿಕಾರಿಗಳೇ ದಂಗಾಗುತ್ತಾರೆ.
ಶಿವಪ್ಪ ಕೊದ್ದಡಗಿ,
ಗ್ರಾಮ ನಿವಾಸಿ

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.