ಪ್ರಕೃತಿ ವಿಕೋಪಕ್ಕೆ ಮುಂಜಾಗ್ರತೆ ಅವಶ್ಯ: ಪಾಂಡ್ವೆ
ಅಧಿಕಾರಿಗಳಿಗೆ ಜವಾಬ್ದಾರಿ ಅರಿಕೆ ಅಗತ್ಯ •ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತರಬೇತಿ
Team Udayavani, May 31, 2019, 1:24 PM IST
ಕಲಬುರಗಿ: ನೈಸರ್ಗಿಕ ವಿಕೋಪ ತಡೆ ಕಾರ್ಯಾಗಾರವನ್ನು ಸಹಾಯಕ ಆಯುಕ್ತ ರಾಹುಲ್ ಪಾಂಡ್ವೆ ಉದ್ಘಾಟಿಸಿದರು.
ಕಲಬುರಗಿ: ರಾಜ್ಯದಲ್ಲಿ ಒಂದು ಕಡೆ ಹೆಚ್ಚು ಮಳೆಯಾಗಿ ಅನಾವೃಷ್ಟಿಯಾದರೆ, ಇನ್ನೊಂದೆಡೆ ಬರಗಾಲದ ಛಾಯೆ ಮೂಡಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಆಡಳಿತ ವರ್ಗ ಮುಂಜಾಗ್ರತಾ ಕ್ರಮ ಕೈಗೊಂಡರೆ ಪ್ರಕೃತಿ ವಿಕೋಪ ದಿಂದ ಆಗುವ ನಷ್ಟವನ್ನು ತಕ್ಕಮಟ್ಟಿಗಾದರೂ ತಡೆಯಬಹುದಾಗಿದೆ ಎಂದು ಸಹಾಯಕ ಆಯುಕ್ತ ರಾಹುಲ್ ತುಕಾರಾಮ ಪಾಂಡ್ವೆ ಹೇಳಿದರು.
ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಅಧಿಕಾರಿಗಳ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಪರಿಷ್ಕರಣೆ, ವಿಕೋಪ ಮಿತಗೊಳಿಸುವಿಕೆ, ಪೂರ್ವಸಿದ್ಧತೆ, ಸ್ಪಂದನಾ ಯೋಜನೆಯಡಿ ಆಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ವರ್ಷ ರಾಜ್ಯದ ಕೊಡಗಿನಲ್ಲಿ ಭಾರಿ ಮಳೆಯಿಂದ ಭೂಮಿ ಕುಸಿತವಾಗಿ ಹಲವಾರು ಜನರು ಆಸರೆಯಿಲ್ಲದೆ ಪರದಾಡಿದ್ದರು. ಜಾನುವಾರುಗಳು ತೀವ್ರ ಸಂಕಷ್ಟ ಅನುಭವಿಸಿದ್ದವು. ಕೋಟ್ಯಂತರ ರೂ.ಗಳ ಆಸ್ತಿಗೆ ಹಾನಿಯಾಗಿತ್ತು. ಇಂತಹ ಪ್ರಕೃತಿ ವಿಕೋಪಗಳ ಮುನ್ಸೂಚನೆ ಕಂಡು ಬಂದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವುದು ಒಳಿತು. ಸಂಬಂಧಿಸಿದ ಅಧಿಕಾರಿಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಅನಾಹುತಗಳನ್ನು ತಗ್ಗಿಸಬಹುದಾಗಿದೆ ಎಂದರು.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಡಾ| ಪರಮೇಶ ಜೆ.ಆರ್. ಮಾತನಾಡಿ, ನೈಸರ್ಗಿಕ ವಿಕೋಪಗಳನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಿದ್ದಲ್ಲಿ ಸ್ವಲ್ಪ ಮಟ್ಟಿಗಾದರೂ ಅನಾಹುತಗಳನ್ನು ತಡೆಯಬಹುದು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಿಕೋಪ ನಿರ್ವಹಣಾ ಕಾರ್ಯಾಗಾರ ಹಮ್ಮಿಕೊಂಡು ನೈಸರ್ಗಿಕ ವಿಕೋಪ ತಡೆಯುವುದರ ಕುರಿತು ತರಬೇತಿ ನೀಡಲಾಗುತ್ತಿದೆ. ವಿಕೋಪ ತಡೆಯುವುದು, ವಿಕೋಪ ಆಗದಂತೆ ಸ್ಪಂದಿಸುವುದು, ಪುನರ್ ವಸತಿ ನಿರ್ಮಿಸಿಕೊಳ್ಳುವುದೇ ಈ ತರಬೇತಿ ಕಾರ್ಯಾಗಾರದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಅಂಬೋಜಿ ನಾಯಕವಾಡಿ ಹಾಗೂ ಅಧಿಕಾರಿಗಳು ಇದ್ದರು. ವಿವಿಧ ಇಲಾಖೆಗಳ ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.