ತುಂಗಭದ್ರಾ ಹೂಳಿನ ಜಾತ್ರೆಗೆ ಚಾಲನೆ

•ರೈತರಿಂದ ಹಸಿರು ಶಾಲು ಪ್ರದರ್ಶನ-ಜಯಘೋಷ •ದೇಣಿಗೆ ನೀಡಿ ಹೂಳೆತ್ತುವ ಕಾರ್ಯಕ್ಕೆ ಬೆಂಬಲಿಸಿದ ಜನತೆ

Team Udayavani, May 31, 2019, 3:01 PM IST

1-June-23

ಹೊಸಪೇಟೆ: ರೈತ ಮುಖಂಡ ದರೂರು ಪುರುಷೋತ್ತಮ ಗೌಡರಿಗೆ ದೇಣಿಗೆ ನೀಡಿಗೆ ಹೂಳೆತ್ತುವ ಜಾತ್ರೆಗೆ ಬೆಂಬಲಿಸಿದರು.

ಹೊಸಪೇಟೆ: ಮೂರನೇ ವರ್ಷವೂ ತುಂಗಭದ್ರಾ ಜಲಾಶಯದ ಹೂಳಿನ ಜಾತ್ರೆಗೆ ಉಜ್ಜಯಿನಿ ಜಗದ್ಗುರು ಶ್ರೀಗಳು ಸೇರಿದಂತೆ ವಿವಿಧ ಜಿಲ್ಲೆಯ ಮಠಾಧೀಶರು ಗುರುವಾರ ಚಾಲನೆ ನೀಡಿದರು. ಈ ಮೂಲಕ ಕಳೆದೆರಡು ವರುಷಗಳಿಂದ ಬೇಸಿಗೆಯಲ್ಲಿ ಇದೇ ರೀತಿ ಹೂಳು ತೆಗೆದು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿದರು.

ಈ ವೇಳೆ ತುಂಗಭದ್ರಾ ರೈತ ಸಂಘದಿಂದ ವ್ಯಾಸನಕೆರೆಯ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ನಡೆದ ಹೂಳೆತ್ತುವ ಜಾತ್ರೆ ಕಾರ್ಯಕ್ರಮದಲ್ಲಿ ಬಳ್ಳಾರಿಯ ಕಲ್ಯಾಣ ಸ್ವಾಮೀಜಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಸರ ರಕ್ಷಣೆಗೆ ಗಂಭೀರ ಚಿಂತನೆ ನಡೆದ ಹಿನ್ನೆಲೆಯಲ್ಲಿ ಸತತ ಪರಿಸರ ಹಾಗೂ ಜೀವ ಸಂಕುಲ ಅವನತಿ ಹಾದಿಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸದಾ ಪರಿಸರ ನಾಶಕ್ಕೆ ಕಾರಣವಾಗುವ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಪ್ರಕೃತಿ ವಿಕೋಪಕ್ಕೆ ಎಣೆ ಮಾಡಿಕೊಟ್ಟಿದೆ. ಅರಣ್ಯ ಇಲಾಖೆ ಅರಣ್ಯ ಬೆಳೆಸುವ ಇಚ್ಛಾಶಕ್ತಿ ತೋರುತ್ತಿಲ್ಲ. ಕಳೆದ ಕೆಲ ವರ್ಷಗಳಿಂದ ಗಣಿಗಾರಿಕೆಯ ಪ್ರಭಾವದಿಂದ ಸಾಕಷ್ಟು ಅರಣ್ಯ ನಾಶವಾಗಿದೆ. ಆದರೆ ಅರಣ್ಯ ಇಲಾಖೆಯು ಅದನ್ನು ಪುನರ್‌ ನಿರ್ಮಿಸುವ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದರು.

ದೇಶದಲ್ಲಿ ನದಿಗಳ ಜೋಡಣೆಯ ಅವಶ್ಯಕತೆಯಿದ್ದು, ಮುಂದಿನ ದಿನಗಳಲ್ಲಿ ನದಿ ಜೋಡಣೆ ಕಾರ್ಯ ಮಾಡದಿದ್ದರೆ, ಮುಂದಿನ ಭವಿಷ್ಯ ಕರಾಳವಾಗಿರುತ್ತದೆ. ಪರಿಸರ ಸಂರಕ್ಷಣೆ ಹಾಗೂ ನದಿ ಜೋಡಣೆ ಕಾರ್ಯಕ್ಕೆ ರೈತರು, ಮಠಾಧೀಶರು, ಪ್ರಜ್ಞಾವಂತರು ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದು ಕರೆ ನೀಡಿದರು.

ಪಟ್ಟಣದ ಗುರುಪಾದ ದೇವರಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತುಂಗಭದ್ರಾ ಜಲಾಶಯದ ಹೂಳು ತೆಗೆಯುವ ಹೋರಾಟಕ್ಕೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಧಾನ ಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಲು ರೈತರೊಂದಿಗೆ ಮಠಾಧೀಶರ ಪರಿಷತ್ತು ಅಣಿಯಾಗಲಿದೆ ಎಂದು ಬೆಂಬಲ ಸೂಚಿಸಿದರು. ನದಿಗಳ ಜೋಡಣೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರವರ ಆಶಯವಾಗಿತ್ತು. ಅದು ಇದುವರೆಗೂ ಈಡೇರಿಸಲು ಸರ್ಕಾರಗಳು ಮುಂದಾಗುತ್ತಿಲ್ಲವೆಂದು ಸರ್ಕಾರಗಳ ನಡೆಗೆ ಬೇಸರ ವ್ಯಕ್ತಪಡಿಸಿದರು.

ಹಾಲಶಂಕರ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಸಿರುಗುಪ್ಪದ ಬಸವಭೂಷಣ ಸ್ವಾಮೀಜಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಂಗ್ಲೆ ಮಲ್ಲಿಕಾರ್ಜುನ, ಸಾಮಾಜಿಕ ಕಾರ್ಯಕರ್ತರಾದ ಅನುಪಮಶೆಣೈ, ರಾಜಶೇಖರ ಮುಲಾಲಿ ಮಾತನಾಡಿದರು. ಬಳ್ಳಾರಿ ಕನಕದುರ್ಗಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಗಾದೆಪ್ಪ, ರೈತ ಮುಖಂಡರಾದ ಶ್ರೀಧರ, ಶರಣಪ್ಪ, ವೀರೇಶಯ್ಯ ಇತರರಿದ್ದರು.

ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿ ಅಡಿ ನೀರಿನ ಸಾಮರ್ಥ್ಯದ ಹೂಳುತುಂಬಿದೆ. ಇದರಿಂದ ಮೂರು ರಾಜ್ಯಗಳಾದ ಕರ್ನಾಟಕ, ಸೀಮಾಂದ್ರ, ತೆಲ್ಲಾಂಗಾಣದ 11 ಜಿಲ್ಲೆಗಳ 11ಲಕ್ಷ ಕೃಷಿ ಭೂಮಿಗೆ ನೀರುಣಿಸುವ ಸಾಮರ್ಥ್ಯವನ್ನು ಜಲಾಶಯ ಕಳೆದುಕೊಂಡಿದೆ .ಕೃಷಿ ಜಮೀನುಗಳಿಗೆ ಹಾಗೂ ಜನರಿಗೆ ಕುಡಿಯಲು ನೀರಿಲ್ಲ. ಆದರೆ ಸರ್ಕಾರ ಜಿಲ್ಲೆಯ ಕಾರ್ಖಾನೆಗಳಿಗೆ ನಿರಂತರ ನೀರು ಧಾರೆ ಎರೆಯುತ್ತಿದೆ.
•ದರೂರು ಪುರುಷೋತ್ತಮಗೌಡ,
ತುಂಗಭದ್ರಾ ರೈತ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.