‘ಉಡಾನ್ ಯೋಜನೆಯಡಿ ಬೈಂದೂರು ವಿಮಾನ ನಿಲ್ದಾಣ ಚಿಂತನೆ’
Team Udayavani, Jun 1, 2019, 6:00 AM IST
ಬೈಂದೂರು: ಪ್ರಧಾನ ಮಂತ್ರಿಗಳ ಮಹತ್ವಕಾಂಕ್ಷೆ ಚಿಂತನೆಯಾದ ಉಡಾನ್ ಯೋಜನೆಯಡಿ ಬೈಂದೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಪ್ರಯತ್ನಿಸುತ್ತೇನೆ.ಬೈಂದೂರು ಸುತ್ತಮುತ್ತಲ ಪ್ರದೇಶ ಹಾಗೂ ಅನಿವಾಸಿ ಭಾರತಿಯರ ಬೇಡಿಕೆಯಿರುವ ಕಾರಣ ಇದರ ಆಗುಹೋಗುಗಳ ಕುರಿತು ಕೇಂದ್ರ ಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಉಪ್ಪುಂದ ನಂದನವನದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬೈಂದೂರು ಕೇಂದ್ರದಲ್ಲಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿ ಈ ದೇಶದಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆನ್ನುವ ಆಕಾಂಕ್ಷೆ ಹೊಂದಿದ ಮತದಾರರಿಗೆ ಸದಾ ಚಿರಋಣಿಯಾಗಿದ್ದೇನೆ. ಈ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಕೃಷಿಕರಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳು, ಏತ ನೀರಾವರಿ ಸೌಲಭ್ಯಗಳು ಸೇರಿದಂತೆ ಐದು ವರ್ಷಗಳಲ್ಲಿ ಬೈಂದೂರನ್ನು ಮಾದರಿ ತಾಲೂಕಾಗಿ ರೂಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಬೈಂದೂರಿನ ಅಭಿವೃದ್ಧಿ ದೃಷ್ಟಿಕೋನವನ್ನಿಟ್ಟು ಕೊಲ್ಲೂರನ್ನು ಸಮಗ್ರ ಅಭಿವೃದ್ಧಿಪಡಿಸುವ ಚಿಂತನೆಯಿದೆ. ಇಲ್ಲಿನ ಸೌಪರ್ಣಿಕಾ ನದಿ ಅತ್ಯಂತ ಮಲಿನವಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಗಂಗಾ ನದಿ ಸ್ವಚ್ಛತೆಯ ಮಾದರಿಯಲ್ಲಿ ಸೌಪರ್ಣಿಕಾ ನದಿಯನ್ನು ಶುದ್ಧಗೊಳಿಸುವ ಯೋಜನೆ ರೂಪಿಸುತ್ತೇನೆ ಎಂದರು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ, ಸಂಸದರ ಸಹಕಾರದೊಂದಿಗೆ ಬೈಂದೂರು ಕ್ಷೇತ್ರದ ಮೂಲ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿಯ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭ ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರ, ಬಾಲಕೃಷ್ಣ ಭಟ್,ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ. ಸದಸ್ಯ ಸುರೇಶ್ ಬಟ್ವಾಡಿ, ತಾ.ಪಂ. ಸದಸ್ಯ ಉಮೇಶ ಶೆಟ್ಟಿ ಕಲ್ಗದ್ದೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಹೆದ್ದಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಕಡೆ ಹೆದ್ದಾರಿ ಸಮಸ್ಯೆ ಕಾಡುತ್ತಿದೆ. ಚುನಾವಣೆಯ ಮುನ್ನ ಬೈಂದೂರಿನಲ್ಲಿ ಜನಸಂಪರ್ಕ ಸಭೆ ನಡೆಸಿ ಅನೇಕ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಗಿದೆ.ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಲ್ಲ ಅಧಿಕಾರಿಗಳ ಸಭೆಯನ್ನು ಬೈಂದೂರಿನಲ್ಲಿ ನಡೆಸುವ ಮೂಲಕ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುವುದಾಗಿ ಸಂಸದರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಕುರಿತು ಸಭೆ
ರಾಷ್ಟ್ರೀಯ ಹೆದ್ದಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಕಡೆ ಹೆದ್ದಾರಿ ಸಮಸ್ಯೆ ಕಾಡುತ್ತಿದೆ. ಚುನಾವಣೆಯ ಮುನ್ನ ಬೈಂದೂರಿನಲ್ಲಿ ಜನಸಂಪರ್ಕ ಸಭೆ ನಡೆಸಿ ಅನೇಕ ಸಮಸ್ಯೆಗಳನ್ನು ಇತ್ಯರ್ಥ ಮಾಡಲಾಗಿದೆ.ಶೀಘ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಲ್ಲ ಅಧಿಕಾರಿಗಳ ಸಭೆಯನ್ನು ಬೈಂದೂರಿನಲ್ಲಿ ನಡೆಸುವ ಮೂಲಕ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುವುದಾಗಿ ಸಂಸದರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.