6ರಿಂದ ಶಾಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ
Team Udayavani, Jun 1, 2019, 3:00 AM IST
ಬೆಂಗಳೂರು: ಶಾಲೆಗಳಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಜೂನ್ 6ರಿಂದ 16ರವರೆಗೆ ಪರಿಣಾಮಕಾರಿಯಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದೆ. ಅತಿಸಾರ ಭೇದಿಯಿಂದ ಉಂಟಾಗುವ ಮಕ್ಕಳ ಮರಣ ಪ್ರಮಾಣವನ್ನು ಶೂನ್ಯಗೊಳಿಸುವುದೇ ಈ ಕಾರ್ಯಕ್ರಮದ ಧ್ಯೇಯವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯಂತೆ ಮಕ್ಕಳಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ನಿರ್ವಹಣೆ, ಮಕ್ಕಳ ವೈಯಕ್ತಿಕ ನೈರ್ಮಲ್ಯ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಉಪನಿರ್ದೇಶಕರಿಗೆ ನಿರ್ದೇಶಿಸಿದೆ.
ಶಿಕ್ಷಣ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿ 2 ಸಾವಿರ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶಾಲೆಗಳಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೌಚಾಲಯಕ್ಕೆ ನೀರಿನ ವ್ಯವಸ್ಥೆ, ಫಿನಾಯಿಲ್, ಡೆಟಾಲ್, ಸೋಪ್ ಹಾಗೂ ಕರವಸ್ತ್ರಗಳನ್ನು ಕಡ್ಡಾಯವಾಗಿ ಒದಗಿಸಬೇಕು.
ಶೌಚಾಲಯದ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕಾಗಿ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಸಭೆ ನಡೆಸಿ, ಮಕ್ಕಳು ಶೌಚಾಲಯ ಹಾಗೂ ಶುದ್ಧ ಕುಡಿಯವ ನೀರಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.