ಪ್ರಧಾನಿ ಮೋದಿ ಭರ್ಜರಿ ಕೊಡುಗೆ
60 ವರ್ಷ ಮೇಲ್ಪಟ್ಟ ರೈತರಿಗೆ, ವರ್ತಕರಿಗೆ 3 ಸಾವಿರ ರೂಪಾಯಿ ಪಿಂಚಣಿ
Team Udayavani, Jun 1, 2019, 6:00 AM IST
ಹೊಸದಿಲ್ಲಿ: ಎಲ್ಲ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ವಿಸ್ತರಣೆ, ಭಯೋತ್ಪಾದಕರ ಮತ್ತು ನಕ್ಸಲ್ ದಾಳಿಯಲ್ಲಿ ಹುತಾತ್ಮರಾಗುವ ರಾಜ್ಯ ಪೊಲೀಸರಿಗೂ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅನ್ವಯ, ರೈತ ರು ಹಾಗೂ ವರ್ತಕರಿಗಾಗಿ ಪಿಂಚಣಿ ಯೋಜನೆ… ಹೀಗೆ ನಾಲ್ಕು ಭರ್ಜರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.
ಎರಡನೇ ಅವಧಿಗಾಗಿ ಅಧಿಕಾರ ವಹಿಸಿ ಕೊಂಡಿ ರುವ ಮೋದಿ ನೇತೃತ್ವದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ 14.5 ಕೋಟಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 2 ಹೆಕ್ಟೇರ್‌ವರೆಗೆ ಜಮೀನು ಇರುವ ರೈತರಿಗೆ ಈ ಯೋಜನೆಯ ಲಾಭ ಸಿಗಲಿದೆ. ಕೇಂದ್ರ ಬೊಕ್ಕಸಕ್ಕೆ ಇದರಿಂದ ವಾರ್ಷಿಕವಾಗಿ 87 ಸಾವಿರ ಕೋಟಿ ರೂ.ಹೊರೆಯಾಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಸಿದ್ಧಿ (ಪಿಎಂ- ಕಿಸಾನ್) ಯೋಜನೆಯನ್ನು ಫೆಬ್ರ ವರಿ ಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್ ನಲ್ಲಿ ಪ್ರಕಟಿಸಲಾಗಿತ್ತು. ಅರ್ಹ ರೈತರ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ನೀಡುವ ವಾಗ್ಧಾನ ಮಾಡಲಾಗಿತ್ತು. ಈ ಯೋಜನೆಗೆ ರೈತರ ವಯಸ್ಸಿಗೆ ಅನುಗುಣವಾಗಿ ಪ್ರೀಮಿಯಂ ಪಾವತಿಸಬೇಕಾಗಿರುತ್ತದೆ.
ಕಿಸಾನ್ ಪಿಂಚಣಿ ಯೋಜನೆ
ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ಕೇಂದ್ರ ಸಂಪುಟ ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಸಣ್ಣ ಮತ್ತು ಮಧ್ಯಮ ರೈತರಿಗೆ ವಿಶೇಷ ವಾಗಿ 60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ನೀv ಲಾಗುತ್ತದೆ. ಈ ಯೋಜನೆಯಿಂದ ಮೊದಲ ಹಂತದಲ್ಲಿ 5 ಕೋಟಿ ರೈತರಿಗೆ ಪ್ರಯೋಜನವಾಗಲಿದೆ. ಅದಕ್ಕಾಗಿ 10 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ತೋಮರ್ ತಿಳಿಸಿದರು.
ವರ್ತಕರಿಗೆ ಪಿಂಚಣಿ
ಚಿಲ್ಲರೆ ಮಾರಾಟಗಾರರಿಗೆ, ಸ್ವಯಂ ಉದ್ಯೋಗ ನಡೆಸುವವರಿಗೆ, ಅಂಗಡಿ ಮಾಲಕರಿಗೆ ಮಾಸಿಕ 3 ಸಾವಿರ ರೂ. ಪಿಂಚಣಿ ನೀಡುವ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. 60 ವರ್ಷ ಪೂರ್ತಿಯಾದ ಬಳಿಕ ಇದರ ಲಾಭ ಸಿಗಲಿದೆ. ಹೊಸ ಯೋಜನೆಯಿಂದಾಗಿ 3 ಕೋಟಿ ಮಂದಿಗೆ ಲಾಭವಾಗಲಿದೆ. ಮುಂದಿನ ಮೂರು ವರ್ಷಗಳಲ್ಲಿ ಐದು ಕೋಟಿ ಮಂದಿ ಯೋಜನೆಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ತಿಳಿಸಿದರು. ವಾರ್ಷಿಕವಾಗಿ 1.5 ಕೋಟಿ ರೂ.ಗಿಂತ ಕಡಿಮೆ ಜಿಎಸ್‌ಟಿ ಮತ್ತು 18-40 ವರ್ಷ ವಯೋಮಿತಿಯುಳ್ಳವರು ಯೋಜನೆ ವ್ಯಾಪ್ತಿಗೆ ಬರಲು ಅರ್ಹರಾಗಿರುತ್ತಾರೆ.
ಪ್ರಧಾನಿ ಮೋದಿ ವಿದ್ಯಾರ್ಥಿ ವೇತನ ಪರಿಷ್ಕರಿಸುವ ಆದೇಶಕ್ಕೆ ಮೊದಲು ಸಹಿ ಹಾಕಿದ್ದಾರೆ. ಇದಾದ ಬಳಿಕ ಟ್ವೀಟ್ ಮಾಡಿರುವ ಅವರು “ದೇಶ ರಕ್ಷಣೆ ಮಾಡುವವರಿಗೆ ಮೊದಲ ಆದ್ಯತೆ’ ಎಂದು ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದಾರೆ. ಹಿಂದಿನ ಸಂದರ್ಭಗಳಲ್ಲಿ ಉಗ್ರವಾದಿಗಳು ಮತ್ತು ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ರಾಜ್ಯಗಳ ಪೊಲೀಸ್ ಸಿಬಂದಿ ಹುತಾತ್ಮರಾಗಿದ್ದರೆ, ಅವರ ಮಕ್ಕಳಿಗೆ ರಾಷ್ಟ್ರೀಯ ರಕ್ಷಣಾ ನಿಧಿ ವ್ಯಾಪ್ತಿಯಲ್ಲಿ ನೆರವು ಸಿಗುತ್ತಿರಲಿಲ್ಲ. 2008ರಲ್ಲಿ ಮುಂಬೈಗೆ ಪಾಕ್ ಪ್ರೇರಿತ ಉಗ್ರರು ದಾಳಿ ನಡೆಸಿದ್ದ ವೇಳೆ ಹುತಾತ್ಮರಾಗಿದ್ದ ಪೊಲೀಸ್ ಕಾನ್‌ಸ್ಟೆàಬಲ್ ತುಕಾರಾಮ ಓಂಬ್ಲೆ ಪುತ್ರನಿಗೆ ಈ ನಿಧಿಯಿಂದ ನೆರವು ಪಡೆಯಲು ಸಾಧ್ಯವಾಗಿರಲಿಲ್ಲ.
1962ರಲ್ಲಿ ಸ್ಥಾಪನೆ
ರಾಷ್ಟ್ರೀಯ ರಕ್ಷಣಾ ನಿಧಿ (ಎನ್‌ಡಿಎಫ್) ಅನ್ನು 1962ರಲ್ಲಿ ಸ್ಥಾಪಿಸಲಾಗಿತ್ತು. ಸ್ವಯಂಪ್ರೇರಿತವಾಗಿ ನಗದು ರೂಪದಲ್ಲಿ ನೀಡುವ ದೇಣಿಗೆಗಳನ್ನು ಸ್ವೀಕರಿಸುವ ನಿಟ್ಟಿನಲ್ಲಿ ಅದನ್ನು ಆರಂಭಿಸಲಾಯಿತು. ಪಿಎಂಎಸ್‌ಎಸ್‌ನಿಂದ ಹುತಾತ್ಮಾರಾದ ಯೋಧರ ಮಕ್ಕಳಿಗೆ ಎಂಜಿನಿಯರಿಂಗ್, ಮೆಡಿಕಲ್, ಎಂಬಿಎ, ಎಂಸಿಎ ಮತ್ತು ಇತರ ತಾಂತ್ರಿಕ ಕೋರ್ಸ್‌ಗಳನ್ನು ಕಲಿಯಲು ಅನುಕೂಲವಾಗುತ್ತದೆ.
ಹೊಸ ಯೋಜನೆಗೆ ಅಂಗೀಕಾರ
ಜಾನುವಾರುಗಳಲ್ಲಿ ಕಂಡುಬರುವ ಕಾಲು ಬಾಯಿ ರೋಗ, ಬ್ರುಕಲೋಸಿಸ್ ನಿಯಂತ್ರಣಕ್ಕೆ ವಿಶೇಷ ಯೋಜನೆಗೆ ಕೇಂದ್ರ ಸಂಪುಟ ಅನುಮೋ ದನೆ ನೀಡಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾಬ್ಡೇಕರ್ ಈ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿ ವೇತನ ಯೋಜನೆ ವಿಸ್ತರಣೆ
ಭಯೋತ್ಪಾದಕರ ಮತ್ತು ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಸೇನಾ ಸಿಬಂದಿಯ ಮಕ್ಕಳಿಗೆ ನೀಡಲಾಗುವ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆ (ಪಿಎಂಎಸ್‌ಎಸ್) ಸೌಲಭ್ಯವನ್ನು ಇನ್ನು ಮುಂದೆ ರಾಜ್ಯ ಪೊಲೀಸರಿಗೂ ವಿಸ್ತರಿಸಲಾಗುತ್ತದೆ. ಅದನ್ನು ರಾಷ್ಟ್ರೀಯ ರಕ್ಷಣಾನಿಧಿ (ನ್ಯಾಷನಲ್ ಡಿಫೆನ್ಸ್ ಫಂಡ್)ಯಿಂದ ಭರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಸಂಪುಟ ಸಭೆ ಅಂಗೀಕಾರ ನೀಡಿದೆ. ಮಾತ್ರವಲ್ಲದೆ ಸ್ಕಾಲರ್‌ಶಿಪ್ ಮೊತ್ತವನ್ನು ಬಾಲಕರಿಗೆ 2 ಸಾವಿರ ರೂ.ಗಳಿಂದ 2,500 ರೂ. ಮತ್ತು ಬಾಲಕಿಯರಿಗೆ 2,250ರಿಂದ 3 ಸಾವಿರ ರೂ.ಗಳ ವರೆಗೆ ಪರಿಷ್ಕರಿಸುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ.
ಜು.5ರಂದು ಬಜೆಟ್
ಸಂಸತ್‌ನ ಬಜೆಟ್ ಅಧಿವೇಶನ ಜೂ.17ರಿಂದ ಜು.26ರ ವರೆಗೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಜೂ.20ರಂದು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ತಿಳಿಸಿದ್ದಾರೆ. ಹಣಕಾಸು ಸಚಿವ ರಾಗಿರುವ ನಿರ್ಮಲಾ ಸೀತಾ ರಾಮನ್ ಇದೇ ಮೊದಲ ಬಾರಿಗೆ ಜು.5ರಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಜು.4ರಂದು ಆರ್ಥಿಕ ಸಮೀಕ್ಷೆ ಮಂಡಿಸಲಾಗುತ್ತದೆ. ಜೂ.19ರಂದು ಲೋಕಸಭೆಯ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದಿದ್ದಾರೆ. ಫೆ.1ರಂದು ಹಣಕಾಸು ಸಚಿವರಾಗಿದ್ದ ಪಿಯೂಷ್ ಗೋಯಲ್ ಮಧ್ಯಂತರ ಬಜೆಟ್ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.