ಜೂನ್ 6ಕ್ಕೆ ಕೇರಳ, ಕರ್ನಾಟಕಕ್ಕೆ ಮುಂಗಾರು
Team Udayavani, Jun 1, 2019, 6:00 AM IST
ಬೆಂಗಳೂರು: ಕೇರಳ ಮತ್ತು ಕರ್ನಾಟಕಕ್ಕೆ, ಒಂದೇ ದಿನ ಜೂ. 6ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾ ಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ. 6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗ ಲಿದ್ದು, ದ.ಭಾರತದಲ್ಲಿ ಶೇ. 97ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಘೋಷಿಸಿರುವಂತೆ ಜೂ.6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗಲಿದ್ದು, ದ.ಭಾರತದಲ್ಲಿ ಶೇ.97ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಜೂನ್ ಆರಂಭದಿಂದ ಸೆಪ್ಟಂಬರ್ ಅಂತ್ಯದವರೆಗೆ ನೈಋತ್ಯ ಮುಂಗಾರು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.8ರಷ್ಟು ಹೆಚ್ಚು ಕಡಿಮೆಯಾಗಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್, ಕಳೆದ ಬಾರಿಯಂತೆ ಈ ವರ್ಷವೂ ಕೇರಳ ಮತ್ತು ಕರ್ನಾಟಕಕ್ಕೆ ಒಂದೇ ದಿನ (ಜೂ.6) ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ. ಹಿಂದೆಯೂ ಹಲವು ಬಾರಿ ಕರ್ನಾಟಕ ಮತ್ತು ಕೇರಳದ ಕರಾವಳಿಗೆ ಒಂದೇ ದಿನ ಮುಂಗಾರು ಪ್ರವೇಶಿಸಿದ ಉದಾಹರಣೆಗಳಿದ್ದು, ಈ ಬಾರಿಯೂ ಮರುಕಳಿಸುವ ಸಾಧ್ಯತೆಯಿದೆ ಎಂದರು.
ಕೆಲವೆಡೆ ಭಾರೀ ಮಳೆ
ಮುಂದಿನ ಎರಡು ದಿನಗಳು ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು