ಜಿಲ್ಲೆಯ ಮೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅತಂತ್ರ ಸ್ಥಿತಿ

ಹರಿಹರ ನಗರಸಭೆಯಲ್ಲೂ ಯಾರಿಗೂ ಸಿಕ್ಕದ ಬಹುಮತ,ಚನ್ನಗಿರಿ-ಮಲೇಬೆನ್ನೂರು ಪುರಸಭೆಗಳಲ್ಲಿ ಸದಸ್ಯರಿಗೆ ಇನ್ನೂ ಸಿಕ್ಕದ ಅಧಿಕಾರ

Team Udayavani, Jun 1, 2019, 10:14 AM IST

Udayavani Kannada Newspaper

ಎನ್‌.ಆರ್‌.ನಟರಾಜ್‌
ದಾವಣಗೆರೆ: ಹರಿಹರ ನಗರಸಭೆಗೆ ನಡೆದ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಅಲ್ಲಿ ಯಾವ ಪಕ್ಷವೂ ಬಹುಮತ ಪಡೆಯದೇ ಅತಂತ್ರ ಸ್ಥಿತಿ ಎದುರಾಗಿದೆ. ಈಗ ಸದ್ಯ ಜಿಲ್ಲೆಯ ಮೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಪರಿಸ್ಥಿತಿ ಸೃಷ್ಟಿಯಾದಂತಾಗಿದೆ.

ಕಳೆದ 29ರಂದು ಹರಿಹರ ನಗರಸಭೆ 31 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಏಣಿಕೆ ಶುಕ್ರವಾರ ನಡೆದಿದ್ದು, ಆ ನಗರಸಭೆಗೆ ಜಾತ್ಯತೀತ ಜನತಾದಳ 14, ಕಾಂಗ್ರೆಸ್‌ 10, ಭಾರತೀಯ ಜನತಾ ಪಕ್ಷ 5 ಸದಸ್ಯರು ಹಾಗೂ ಎರಡು ವಾರ್ಡ್‌ಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ಜಾತ್ಯತೀತ ಜನತಾದಳ ಅಧಿಕ ಸ್ಥಾನ ಪಡೆದ ಪಕ್ಷವಾದರೂ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಈ ನಗರಸಭೆಯಲ್ಲಿ ಕಾಂಗ್ರೆಸ್‌ 10 ವಾರ್ಡ್‌ಗಳಲ್ಲಿ ಗೆಲ್ಲುವ ಮೂಲಕ 2ನೇ ಸ್ಥಾನದಲ್ಲಿದೆ. ಬಿಜೆಪಿ ಮೂರನೇ ಸ್ಥಾನದಲ್ಲಿದೆ. ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದು, ಅವರ ಬೆಂಬಲದಿಂದ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯಬಹುದು. ಇಲ್ಲವೇ ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಆಡಳಿತದಲ್ಲಿರುವುದರಿಂದ ಹರಿಹರ ನಗರಸಭೆಯಲ್ಲೂ ಹೊಂದಾಣಿಕೆ ಆಗಬಹುದೆಂಬ ಮಾತು ಕೇಳಿ ಬರುತ್ತಿದೆ.

ಈ ರೀತಿ ಅತಂತ್ರ ಫಲಿತಾಂಶ ಜಿಲ್ಲೆಯ ಇನ್ನೂ ಎರಡು ನಗರ ಸ್ಥಳೀಯ ಸಂಸ್ಥೆಗಳಲ್ಲಿದ್ದು, ಚುನಾವಣೆ ನಡೆದು 8 ತಿಂಗಳಾದರೂ ಅಲ್ಲಿ ಈವರೆಗೂ ಯಾರೂ ಅಧಿಕಾರ ಚುಕ್ಕಾಣಿ ಹಿಡಿಯದಂತಾಗಿದೆ. ಚನ್ನಗಿರಿ ಹಾಗೂ ಮಲೇಬೆನ್ನೂರು ಪುರಸಭೆಗಳಲ್ಲೂ ಸಹ ಅತಂತ್ರ ಸ್ಥಿತಿ ಇದೆ.

ಚನ್ನಗಿರಿ ಪುರಸಭೆಯ 23 ವಾರ್ಡ್‌ಗೆ ಈ ಹಿಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ 10, ಕಾಂಗ್ರೆಸ್‌ 10 ವಾರ್ಡ್‌ಗಳಲ್ಲಿ ಗೆದ್ದು ಸಮಬಲ ಸಾಧಿಸಿದ್ದವು. ಅಲ್ಲಿ ಜೆಡಿಎಸ್‌ 3 ವಾರ್ಡ್‌ಗಳಲ್ಲಿ ಗೆದ್ದಿದೆ. ಅಲ್ಲೂ ಕೂಡ ಮೈತ್ರಿ ಏರ್ಪಡುವುದರಿಂದ ಕಾಂಗ್ರೆಸ್‌ ಅಧಿಕಾರ ಚುಕ್ಕಾಣಿ ಹಿಡಿಯಬಹುದು. ಈ ಮಧ್ಯೆ ಮೀಸಲಾತಿ ಸಂಬಂಧ ನ್ಯಾಯಾಲಯದ ಮೊರೆ ಹೋಗಿರುವುದರಿಂದ ಇನ್ನೂ ಸಹ ಸ್ಥಳೀಯ ಜನಪ್ರತಿನಿಧಿಗಳಿಗೆ ಅಧಿಕಾರ ಸಿಗದಂತಾಗಿದೆ.

ಇನ್ನು ಮಲೇಬೆನ್ನೂರು ಪುರಸಭೆಯಲ್ಲೂ ಅತಂತ್ರ ಸ್ಥಿತಿ ಇದೆ. ಈ ಹಿಂದೆ ನಡೆದ ಪುರಸಭೆಯ 23 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 8, ಬಿಜೆಪಿ 7, ಜೆಡಿಎಸ್‌ 5 ಹಾಗೂ 3 ವಾರ್ಡ್‌ಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದರು. ಅಲ್ಲೂ ಸಹ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಪುರಸಭೆ ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌-ಜೆಡಿಎಸ್‌ ಇಲ್ಲವೇ ಬಿಜೆಪಿಯೊಂದಿಗೆ ಮತ್ತೂಂದು ಪಕ್ಷ ಕೈ ಜೋಡಿಸಲೇಬೇಕು. ಪಕ್ಷೇತರರು ಬೆಂಬಲ ನೀಡಿದರೂ ಕೂಡ ಅಧಿಕಾರಕ್ಕೇರಲು ಮತ್ತೂಂದು ರಾಜಕೀಯ ಪಕ್ಷದೊಂದಿಗೆ ಮೈತ್ರಿ ಅನಿವಾರ್ಯ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಜಗಳೂರು ಹಾಗೂ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಿಟ್ಟರೆ ಮೂರೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆತಂತ್ರ ಸ್ಥಿತಿ ಇದೆ. ಜಗಳೂರು ಮತ್ತು ಹೊನ್ನಾಳಿ ಪಟ್ಟಣ ಪಂಚಾಯಿತಿಗಳಲ್ಲಿ ಬಿಜೆಪಿ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಹರಿಹರ ನಗರಸಭೆ ಅಧಿಕಾರ ಚುಕ್ಕಾಣಿ ಹಿಡಿಯಲು ಇಬ್ಬರು ಸದಸ್ಯರ ಅವಶ್ಯಕತೆ ಇದ್ದು, ಪಕ್ಷೇತರರು ಜೆಡಿಎಸ್‌ ಬೆಂಬಲಿಸಲಿದ್ದಾರೋ ಅಥವಾ ಮೈತ್ರಿ ಧರ್ಮ ಈ ನಗರಸಭೆಯಲ್ಲೂ ಪಾಲನೆಯಾಗಲಿದೆಯೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.