ಅಳ್ನಾವರ ಪಪಂ ಅತಂತ್ರ; ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ
Team Udayavani, Jun 1, 2019, 11:55 AM IST
ಅಳ್ನಾವರ: ಪಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದವರ ಸಂಭ್ರಮ.
ಅಳ್ನಾವರ: ತಾಲೂಕು ಕೇಂದ್ರವಾಗಿ ರಚನೆಯಾದ ನಂತರ ಸ್ಥಳೀಯ ಪಪಂಗೆ ನಡೆದ ಪ್ರಥಮ ಚುನಾವಣೆ ಫಲಿತಾಂಶ ಶುಕ್ರವಾರ ಘೋಷಣೆಯಾಗಿದ್ದು, 18 ಸ್ಥಾನಗಳ ಪೈಕಿ ಕಾಂಗ್ರೆಸ್8, ಜೆಡಿಎಸ್ 6, ಬಿಜೆಪಿ 3 ಸ್ಥಾನ ಗಳಿಸಿದ್ದು, ಪಕ್ಷೇತರರು ಒಂದು ಸ್ಥಾನ ಗೆದ್ದಿದ್ದಾರೆ. ವಿಜೇತ ಅಭ್ಯರ್ಥಿಗಳು ಮತ್ತು ಆಯಾ ಪಕ್ಷದ ಕಾರ್ಯಕರ್ತರು ಪಟ್ಟಣದೆಲ್ಲೆಡೆ ಪಟಾಕ್ಷಿ ಸಿಡಿಸಿ, ಬಣ್ಣ ಎರಚಾಡುವ ಮೂಲಕ ವಿಜಯೋತ್ಸವ ಆಚರಿಸಿದರು.
ಹಿಂದಿನ ಅವಧಿಯಲ್ಲಿ 15 ವಾರ್ಡ್ ಹೊಂದಿದ್ದ ಪಟ್ಟಣದಲ್ಲಿ ಈ ಸಲ 18 ವಾರ್ಡ್‌ಗಳು ಅಸ್ತಿತ್ವಕ್ಕೆ ಬಂದಿದ್ದು, ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಸರಳ ಬಹುಮತಕ್ಕೆ 10 ಸ್ಥಾನ ಬೇಕಿದ್ದು, ರಾಜ್ಯದಂತೆ ಇಲ್ಲಿಯೂ ಕೈ-ದಳ ಮೈತ್ರಿ ಆಡಳಿತ ರಚನೆಯಾಗಬಹುದು. ಆದರೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲಾತಿ ಅವಲಂಬಿಸಿದೆ.
ಹಿಂದಿನ ಆಡಳಿತದಲ್ಲಿ ಕಾಂಗ್ರೆಸ್ 9 ಸದಸ್ಯರನ್ನು ಹೊಂದಿತ್ತು. ಆದರೆ ಈ ಸಲ ಒಂದು ಸ್ಥಾನ ಕಳೆದುಕೊಂಡಿದೆ. 3 ಸದಸ್ಯರನ್ನು ಹೊಂದಿದ್ದ ಜೆಡಿಎಸ್ ಈ ಸಲ ಆರು ಸ್ಥಾನಕ್ಕೆ ಏರಿದೆ. 2 ಸ್ಥಾನ ಹೊಂದಿದ್ದ ಬಿಜೆಪಿ ಈ ಸಲ ಒಂದು ಸ್ಥಾನ ಹೆಚ್ಚಿಗೆ ಗಳಿಸಿ ಮೂರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿದ್ದ ಅಳ್ನಾವರ ಪಟ್ಟಣದ ಜನರು ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿಸಿರುವುದನ್ನು ಗಮನಿಸಿದರೆ ಗೆಲುವಿಗೆ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಕಾರಣ ಎನ್ನುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.