ಮೂಡಿಗೆರೆ ಪಪಂ: ಬಿಜೆಪಿ ಜಯಭೇರಿ

11 ವಾರ್ಡ್‌ಗಳ‌ಲ್ಲಿ ಬಿಜೆಪಿ-6, ಕಾಂಗ್ರೆಸ್‌-4, ಜೆಡಿಎಸ್‌-1 •ಬಿಜೆಪಿ ಕಾರ್ಯರ್ಕರ್ತರ ಸಂಭ್ರಮ

Team Udayavani, Jun 1, 2019, 11:54 AM IST

1-June-11

ಮೂಡಿಗೆರೆ: ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮೂಡಿಗೆರೆ: ಮೂಡಿಗೆರೆ ಪಟ್ಟಣ ಪಂಚಾಯತ್‌ 11 ವಾರ್ಡುಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 6 ಆರು ಸ್ಥಾನ ಪಡೆಯುವ ಮೂಲಕ ಬಿಜೆಪಿ ಮೇಲುಗೈ ಸಾಧಿಸಿದೆ.

11 ವಾರ್ಡ್‌ಗಳಲ್ಲಿ ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿದ್ದರು. ನಾಲ್ಕು ಸ್ಥಾನ ಕಾಂಗ್ರೆಸ್‌, ಆರು ಸ್ಥಾನ ಬಿಜೆಪಿ ಹಾಗೂ 1 ಸ್ಥಾನ ಜೆಡಿಎಸ್‌ಗೆ ಲಭಿಸಿದೆ.

1ನೇ ವಾರ್ಡ್‌ನಲ್ಲಿ ಬಿಜೆಪಿ ಕಮಲಾಕ್ಷಿ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಅವರನ್ನು 53 ಮತಗಳ ಅಂತರದಲ್ಲಿ ಪರಾಭವಗೊಳಿಸಿದರು. 2ನೇ ವಾರ್ಡ್‌ನಲ್ಲಿ ಬಿಜೆಪಿಯ ಅನುಕುಮಾರ್‌ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಇಮ್ತಿಯಾಜ್‌ನ್ನು 135 ಮತಗಳಿಂದ ಪರಾಭವಗೊಳಿಸಿದರು. 3ನೇ ವಾರ್ಡ್‌ನಲ್ಲಿ ಬಿಜೆಪಿಯ ಧರ್ಮಪಾಲ್ ಕಾಂಗ್ರೆಸ್‌ನ ಜಿಯಾವುಲ್ಲಾ ವಿರುದ್ಧ 164 ಮತಗಳಿಂದ ಜಯಗಳಿಸುವುದರೊಂದಿಗೆ 3ನೇ ಬಾರಿ ಪಪಂಗೆ ಆಯ್ಕೆಯಾಗಿದ್ದಾರೆ.

4ನೇ ವಾರ್ಡ್‌ನಲ್ಲಿ ಬಿಜೆಪಿಯ ಸುಧಿಧೀರ್‌ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಇರ್ಷಾದ್‌ ಅಹಮ್ಮದ್‌ರನ್ನು 182 ಮತಗಳಿಂದ ಪರಾಭವಗೊಳಿಸಿದ್ದಾರೆ. 5ನೇ ವಾರ್ಡ್‌ನಲ್ಲಿ ಬಿಜೆಪಿಯ ಮನೋಜ್‌ ಜೆಡಿಎಸ್‌ನ ರಾಗಿಣಿಯವರನ್ನು 91 ಮತಗಳಿಂದ ಪರಾಭವಗೊಳಿಸಿದ್ದಾರೆ. 6ನೇ ವಾರ್ಡ್‌ ನಲ್ಲಿ ಜೆಡಿಎಸ್‌ನ ಸಿ.ಎಂ.ಗೀತಾ ಕಾಂಗ್ರೆಸ್‌ನ ಜಯಮ್ಮ ವಿರುದ್ದ 168 ಮತಗಳ ಅಂತರದಿಂದ ಜಯಗಳಿಸಿದ್ದಾರೆ. 7ನೇ ವಾರ್ಡ್‌ ನಲ್ಲಿ ಕಾಂಗ್ರೆಸ್‌ನ ಕೆ.ವೆಂಕಟೇಶ್‌ ಬಿಜೆಪಿ ಅಭ್ಯರ್ಥಿ ಸಂದರ್ಶ ವಿರುದ್ಧ 19 ಮತಗಳ ಅಂತರದಿಂದ ಗೆಲುವು ಸಾಧಿಸಿದರು. 8ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಎಚ್.ಪಿ.ರಮೇಶ್‌ ಬಿಜೆಪಿಯ ಸುಶೀಲ ವಿರುದ್ಧ ಕೇವಲ 11 ಮತಗಳಿಂದ ಜಯ ಸಾಧಿಸಿದ್ದಾರೆ. 9ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಎಂ.ಎ.ಹಂಜಾ ಬಿಜೆಪಿಯ ಲತಾ ಲಕ್ಷ್ಮ್ಮಣ್‌ ಅವರನ್ನು 60 ಮತಗಳಿಂದ ಪರಾಭವಗೊಳಿಸಿದರು. 10ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ಖುರ್ಷಿದ್‌ಬಾನು ಪಕ್ಷೇತರ ಅಭ್ಯರ್ಥಿ ಸೈಯಿದಾ ಅಂಜುಂ ವಿರುದ್ದ 35 ಮತಗಳ ಅಂತರದಿಂದ ಜಯಗಳಿಸಿದರು. 11ನೇ ವಾರ್ಡ್‌ನಲ್ಲಿ ಬಿಜೆಪಿಯ ಆಶಾ ಮೋಹನ್‌ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ‌ ಶುಭಾ ವಿರುದ್ಧ 159 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಮತ ಎಣಿಕೆಯು ಶುಕ್ರವಾರ ಬೆಳಗ್ಗೆ ತಾಲೂಕು ಕಚೇರಿಯಲ್ಲಿ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಿ 10.30ರ ಸುಮಾರಿಗೆ ಸಂಪೂರ್ಣ ಫಲಿತಾಂಶ ಲಭಿಸಿತು. 7ನೇ ವಾರ್ಡಿನಲ್ಲಿ ಕೇವಲ 19 ಮತಗಳಿಂದ ಪರಾಭವಗೊಂಡ ಅಭ್ಯರ್ಥಿಯನ್ನು ಬಿಜೆಪಿಯ ಕಾರ್ಯಕರ್ತರು ಹೂಮಾಲೆ ಹಾಕಿ ಹೆಗಲ ಮೇಲೆ ಹೊತ್ತು ಜಯಘೋಷಣೆಯೊಂದಿಗೆ ಮೆರವಣಿಗೆ ನಡೆಸಿದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.