ಸವಿತಾ ಸಮಾಜದ ಬಡ ಮಕ್ಕಳಿಗೆ ನೆರವಾಗಿ
Team Udayavani, Jun 1, 2019, 1:27 PM IST
ಗದಗ: ನಗರದಲ್ಲಿ ಸ್ಪಿನ್ ಸಂಸ್ಥೆ ನೆರವಿನಡಿ ನಿರ್ಮಾಣಗೊಂಡ ಕ್ಷೌರ ಕುಟೀರ ಉದ್ಘಾಟನೆ ಹಾಗೂ ಸಮಾಜದ ಮಕ್ಕಳಿಗೆ ಶಿಷ್ಯವೇತನ ವಿತರಣಾ ಸಮಾರಂಭವನ್ನು ನಾಮದೇವ ನಾಗರಾಜ ಉದ್ಘಾಟಿಸಿದರು.
ಗದಗ: ಸವಿತಾ ಸಮಾಜದ ಬಡವರ ಆರೋಗ್ಯ, ಆರ್ಥಿಕ ಸಮಸ್ಯೆ ಹಾಗೂ ಮಕ್ಕಳ ಶಿಕ್ಷಣಕ್ಕೆ ಸ್ಥಿತಿವಂತರು ಸಹಾಯ ಮಾಡಬೇಕು ಎಂದು ಸ್ಪಿನ್ ಸಂಸ್ಥೆ ಸಂಸ್ಥಾಪಕ ನಾಮದೇವ ನಾಗರಾಜ ಕರೆ ನೀಡಿದರು.
ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟ ಹಾಗೂ ಬೆಂಗಳೂರಿನ ಸ್ಪಿನ್ ಸಂಸ್ಥೆ ಸಹಯೋಗದಲ್ಲಿ ನಗರದಲ್ಲಿ ನಡೆದ ಸಮಾಜದ 26 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಸ್ಪಿನ್ ಸಂಸ್ಥೆ ನೆರವಿನಡಿ ನಿರ್ಮಾಣಗೊಂಡ ಗಿರಿರಾಜ ಕೋಟೆಕಲ್ಲ ಅವರ ಕ್ಷೌರ ಕುಟೀರ ಉದ್ಘಾಟಿಸಿ ಅವರು ಮಾತನಾಡಿದರು.
ಸವಿತಾ ಸಮಾಜದ ಬಹುತೇಕರು ಸಾಂಪ್ರದಾಯಿಕ ವೃತ್ತಿಯನ್ನೇ ಅವಲಂಬಿಸಿದ್ದಾರೆ. ಇಂದಿನ ದುಬಾರಿ ದಿನಗಳಲ್ಲಿ ಕುಲ ವೃತ್ತಿಯಿಂದ ಬರುವ ಆದಾಯ ಜೀವನ ನಿರ್ವಹಣೆಗೆ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಸವಿತಾ ಸಮಾಜದ ಆರ್ಥಿಕ ಸ್ಥಿತಿವಂತರು ಸಂಕಷ್ಟದಲ್ಲಿರುವವರ ಕೈಹಿಡಿಯಬೇಕು ಎಂದು ಸಲಹೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಕೊಂಚೂರಿನ ಸವಿತಾ ಪೀಠದ ಶ್ರೀಧರಾನಂದ ಸ್ವಾಮೀಜಿ ಮಾತನಾಡಿ, ಗದಗ-ಬೆಟಗೇರಿ ಸೇರಿದಂತೆ ಅನೇಕ ಕಡೆ ರಸ್ತೆ ಅಗಲೀಕರಣದಲ್ಲಿ ಸವಿತಾ ಬಂಧುಗಳ ಗೂಡಂಗಡಿಗಳು ತೆರವು ಮಾಡಲಾಗಿದ್ದು, ಅವರು ದುಡಿಮೆಯನ್ನೇ ಕಳೆದುಕೊಂಡಿದ್ದಾರೆ. ಅವರ ಉಪಜೀವನಕ್ಕೆ ಅನುಕೂಲವಾಗುವಂತೆ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಬೇಕು. ಸರಕಾರದ ವಾಣಿಜ್ಯ ಮಳಿಗೆಗಳ ಹಂಚಿಕೆಯಲ್ಲಿ ಕನಿಷ್ಠ ಒಂದು ಮಳಿಗೆಯನ್ನು ಸವಿತಾ ಸಮುದಾಯದವರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಕಲ್ಬುರ್ಗಿ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲ್ವಾಯಿ ಮಾತನಾಡಿದರು. ಇದೇ ವೇಳೆ ಸಮಾಜದ ಹಿರಿಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಅಧ್ಯಕ್ಷ ಕೃಷ್ಣಾ ಎಚ್. ಹಡಪದ, ಹಿರಿಯರಾದ ಹನುಮಂತಪ್ಪ ರಾಂಪೂರ, ಬಾಲಕೃಷ್ಣ ಬಾರಬಾರ, ಕ್ಷೌರಿಕ ಬ್ರಿಗೇಡ್ ರಾಜ್ಯಾಧ್ಯಕ್ಷ ಮುರಳಿಧರ ರಾಜನಕುಂಟೆ, ಕ್ಷೌರಿಕ ವೃತ್ತಿ ತರಬೇತಿದಾರರಾದ ಬಾಣಸವಾಡಿ ಮಂಜುನಾಥ, ಸವಿತಾ ಸಮಾಜದ ಕಲ್ಬುರ್ಗಿ ಜಿಲ್ಲಾಧ್ಯಕ್ಷ ನರಸಿಂಗ್ ಮೊಟಕಪಲ್ಲಿ, ಬಳ್ಳಾರಿ ಜಿಲ್ಲಾಧ್ಯಕ್ಷ ಶರಣಪ್ಪ ಬಳ್ಳಾರಿ, ಬಿಜಾಪುರ ಲಿಂಗರಾಜ, ಕಡೂರ ರವಿಕುಮಾರ, ತುಮಕೂರ ರಂಗನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.