ಬಗೆ ಹರಿದ ಸಮಸ್ಯೆ, ವಾರಾಹಿ ನೀರು ಪೈಪ್ ಲೈನ್ ಮೂಲಕ ಮಣಿಪಾಲಕ್ಕೆ; ಅರ್ಜಿ ಸಮಿತಿ
Team Udayavani, Jun 1, 2019, 1:35 PM IST
ಬೆಂಗಳೂರು: ಉಡುಪಿ ನಗರಕ್ಕೆ ಕೇಂದ್ರ ಸರ್ಕಾರದ ಅಮೃತ್ ಯೋಜನೆ ಅಡಿಯಲ್ಲಿ ಬರುವ ಕುಡಿಯುವ ನೀರಿನ 282 ಕೋಟಿ ರೂಪಾಯಿ ಯೋಜನೆಯ ಬಗ್ಗೆ ಶನಿವಾರ ವಿಧಾನ ಪರಿಷತ್ತಿನ ಅರ್ಜಿ ಸಮಿತಿ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಅಮೃತ್ ಯೋಜನೆಯಂತೆ ವಾರಾಹಿಯಿಂದ ಶುದ್ಧೀಕರಿಸದೆ ಇದ್ದ ನೀರನ್ನು ಪೈಪ್ ಮೂಲಕ ತಂದು ಬಜೆಯಲ್ಲಿ ಇರುವ ಶುದ್ಧೀಕರಣ ಘಟಕಕ್ಕೆ ತಂದು ಅಲ್ಲಿ ಶುದ್ಧೀಕರಣ ಮಾಡಿ ಅಲ್ಲಿಂದ ಮಣಿಪಾಲಕ್ಕೆ ನೀರು ಕೊಂಡೊಯ್ಯುವ ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ಇದಕ್ಕೆ ರೈತ ಸಂಘದವರು ಅರ್ಜಿ ಸಮಿತಿಗೆ ಆಕ್ಷೇಪಣೆ ಸಲ್ಲಿಸಿದ್ದರು.
ಈ ಆಕ್ಷೇಪದ ಮೇರೆಗೆ ಅರ್ಜಿ ಸಮಿತಿಯ ಟೆಂಡರಿಗೆ ತಡೆಯೊಡ್ಡಿ ವಿಚಾರಣೆ ನಡೆಸಿತ್ತು. ಏತನ್ಮಧ್ಯೆ ಶಾಸಕ ಕೆ. ರಘುಪತಿ ಭಟ್ ಇವರು ಪ್ರತಾಪಚಂದ್ರ ಶೆಟ್ಟಿ ಹಾಗೂ ಇತರೆ ಮುಖಂಡರ ಮೂಲಕ ರೈತ ಸಂಘದ ಮುಖಂಡರ ಬಳಿ ಮಾತನಾಡಿ, ಆ ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ಚರ್ಚಿಸಿದ್ದರು.
ಇಂದು ನಡೆದ ಸಭೆಯಲ್ಲಿ, ವಾರಾಹಿಯ (ಬರತ್ಕಲ್) ಎಂಬ ಪ್ರದೇಶದಲ್ಲಿ 50 ಎಮ್.ಎಲ್.ಡಿಯ ಶುದ್ಧೀಕರಿಸಿದ ಘಟಕವನ್ನು ನಿರ್ಮಾಣ ಮಾಡಿ ಅಲ್ಲಿಂದ ಪೈಪ್ ಲೈನ್ ಮೂಲಕ ನೇರವಾಗಿ ಮಣಿಪಾಲದ ಜಿ.ಎಲ್.ಆರ್.ಗೆ ನೀರು ತೆಗೆದುಕೊಂಡು ಬಂದು ಅಲ್ಲಿಂದ ನೀರನ್ನು ವಿತರಣೆ ಮಾಡುವುದು ಎಂದು ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ದಾರಿ ಮಧ್ಯೆ ಬರುವಂತಹ ಎಲ್ಲಾ ಪಂಚಾಯತಿಗಳಿಗೆ ಈ ಶುದ್ಧೀಕರಿಸಿದ ನೀರನ್ನು ಸರಬರಾಜು ಮಾಡಲು ನಿರ್ಧರಿಸಿದೆ. ಅಲ್ಲದೇ ದಾರಿ ಮಧ್ಯೆ ಪೈಪ್ ಅಳವಡಿಸಲು ಅವಶ್ಯಕತೆ ಇರುವಲ್ಲಿ ರಸ್ತೆಯನ್ನು ಅಗೆದಲ್ಲಿ ಮತ್ತೆ ಅದನ್ನು ಮರುಡಾಮರೀಕರಣ ನಡೆಸಿ ಪೂರ್ಣಗೊಳಿಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯಿತು ಎಂದು ಹೇಳಿದೆ.
ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸುವ ವಾರಾಹಿ ಯೋಜನೆಗೆ ಇಂದು ತಾರ್ಕಿಕ ಅಂತ್ಯ ಕಂಡಿದೆ. ಮತ್ತು ತಕ್ಷಣ ಕಾಮಗಾರಿ ಪ್ರಾರಂಭಿಸಲು ಮರು ಟೆಂಡರ್ ಕರೆದು ಕಾಮಗಾರಿಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಟೆಂಡರ್ ಕರೆದು ಕಾಮಗಾರಿ ಆರಂಭವಾದ ಬಗ್ಗೆ ವರದಿಯನ್ನು ಅರ್ಜಿ ಸಮಿತಿಗೆ ನೀಡಬೇಕೆಂದು ಸೂಚಿಸಿದರು.
ಶಾಸಕ ಕೆ. ರಘುಪತಿ ಭಟ್ ಈ ಸಭೆಯಲ್ಲಿ ಭಾಗವಹಿಸಿದ್ದು, ಉಡುಪಿಯಲ್ಲಿ ಕುಡಿಯುವ ನೀರಿನ ಬಗ್ಗೆ ವಿವರಿಸಿ ತಕ್ಷಣ ಕೆಲಸ ಕೈಗೊಳ್ಳುವಂತೆ ಅಧಿಕಾರಿಗೆ ಸೂಚಿಸಿದರು. ಉಡುಪಿ ನಗರದಲ್ಲಿ ನೀರಿನ ಸಮಸ್ಯೆ ಅತಿಯಾಗಿರುವುದರಿಂದ ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಇಂದಿನ ಸಭೆ ಬಹಳ ವರ್ಷದಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ಸಿಕ್ಕಂತಾಗಿದೆ ಎಂದು ಶಾಸಕ ರಘುಪತಿ ಭಟ್ ಅಭಿಪ್ರಾಯವ್ಯಕ್ತಪಡಿಸಿದರು..
ಈ ಸಭೆಯಲ್ಲಿ ಅರ್ಜಿ ಸಮಿತಿ ಸದಸ್ಯರು, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಬೃಹತ್ ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, kuidfc ಎಂಡಿ ಇಬ್ರಾಹಿಂ, ಇನ್ನಿತರ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು kuidfcನ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.