ಮಲಿನ ನೀರು ಶುದ್ಧೀಕರಣ ಘಟಕ ಕಾಮಗಾರಿ ಚುರುಕುಗೊಳಿಸಿ

ಪೈಪ್‌ಲೈನ್‌ ಕಾಮಗಾರಿ ಸಮಸ್ಯೆ ಪರಿಹಾರಕ್ಕೆ ಕ್ರಮ

Team Udayavani, Jun 1, 2019, 4:27 PM IST

1-June-26

ಸಾಗರ: ಶಿರವಾಳ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲಿನ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ಶಾಸಕ ಎಚ್. ಹಾಲಪ್ಪ ವೀಕ್ಷಿಸಿದರು.

ಸಾಗರ: ನಗರದ ಹೊರವಲಯದಲ್ಲಿರುವ ತಾಲೂಕಿನ ಶಿರವಾಳ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲಿನ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ಸಾಧ್ಯವಾದಷ್ಟು ಚುರುಕುಗೊಳಿಸಬೇಕು ಎಂದು ಶಾಸಕ ಎಚ್. ಹಾಲಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿಯ ಪ್ರಗತಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 70 ಕೋಟಿ ರೂ. ವೆಚ್ಚದಲ್ಲಿ ನಗರ ವ್ಯಾಪ್ತಿಯಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಕಾಮಗಾರಿಯ ಪೈಪ್‌ಲೈನ್‌ ಮೂಲಕ ಸಾರ್ವಜನಿಕರ ಮನೆಗಳಿಂದ ಹರಿಯುವ ತ್ಯಾಜ್ಯ ನೀರನ್ನು ಶುದ್ಧೀಕರಣ ಘಟಕಕ್ಕೆ ಹರಿಸಿ ಶುದ್ಧೀಕರಣಗೊಳಿಸಿದ ನಂತರ ವರದಾ ನದಿಗೆ ಹರಿಸಲಾಗುವುದು ಎಂದು ತಿಳಿಸಿದರು.

ಒಳಚರಂಡಿ ಕಾಮಗಾರಿಗೆ ಸಂಬಂಧಿಸಿ ನಗರ ವ್ಯಾಪ್ತಿಯಲ್ಲಿ 9.5 ಕಿಮೀ ಉದ್ದದ ಪೈಪ್‌ಲೈನ್‌ ಅಳವಡಿಸುವ ಕಾರ್ಯ ಬಾಕಿ ಇದೆ. ಕೆಲವು ಖಾಸಗಿ ವ್ಯಕ್ತಿಗಳು ಪೈಪ್‌ಲೈನ್‌ ಕಾಮಗಾರಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿರುವುದರಿಂದ ಈ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮುಂದಿನ ಒಂದು ವಾರದೊಳಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಮಲಿನ ನೀರು ಶುದ್ಧೀಕರಣ ಘಟಕದ ಕಾಮಗಾರಿ ಸಂಪೂರ್ಣ ಮುಕ್ತಾಯಗೊಳ್ಳುವವರೆಗೂ ಒಳ ಚರಂಡಿ ಕಾಮಗಾರಿ ಪೈಪ್‌ಲೈನ್‌ನ ಸಂಪರ್ಕವನ್ನು ಮನೆಗಳಿಗೆ ನೀಡುವುದು ಬೇಡ ಎಂದು ತಿಳಿಸಿದ್ದೆ. ಆದರೆ ಹಿಂದಿನ ನಗರಸಭೆಯ ಜನಪ್ರತಿನಿಧಿಗಳ ಒತ್ತಾಯದ ಕಾರಣಕ್ಕೆ ಕೆಲವು ಮನೆಗಳಿಗೆ ಈಗಾಗಲೇ ಸಂಪರ್ಕ ಕಲ್ಪಿಸಲಾಗಿದೆ. ಕಾಮಗಾರಿಗಳ ಕಾರಣಕ್ಕೆ ಮತ್ತೆ ಮತ್ತೆ ರಸ್ತೆ ಅಗೆಯುವ ಕಾರ್ಯ ನಡೆಯಬಾರದು ಎಂದು ಅವರು ಮಾಹಿತಿ ನೀಡಿದರು.

ಒಳಚರಂಡಿ ವಿಭಾಗದ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್‌ ಮಾತನಾಡಿ, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಮಲಿನ ನೀರು ಶುದ್ಧೀಕರಣ ಘಟಕವನ್ನು 13.5 ಕೋಟಿ ರೂ. ವೆಚ್ಚದಲ್ಲಿ ಸಿದ್ಧಗೊಳಿಸಲಾಗುತ್ತಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಈ ಕಾಮಗಾರಿಗೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಶಿರವಾಳ ಗ್ರಾಮದ ಸ.ನಂ. 46ರಲ್ಲಿರುವ ಮೂರು ಕಾಲು ಎಕರೆ ಪ್ರದೇಶದಲ್ಲಿ ಶುದ್ಧೀಕರಣ ಘಟಕ ನಿರ್ಮಾಣಗೊಳ್ಳುತ್ತಿದ್ದು, 90 ಲಕ್ಷ ಲೀಟರ್‌ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈಗಾಗಲೇ ಶೇ 25ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಒಳಚರಂಡಿ ಕಾಮಗಾರಿ ಪೈಪ್‌ಲೈನ್‌ಗೆ ಒಟ್ಟು 12,750 ಮನೆಗಳ ತ್ಯಾಜ್ಯ ನೀರನ್ನು ಸಂಗ್ರಹಿಸಲಾಗುವುದು. ಈಗಾಗಲೇ 1,656 ಮನೆಗಳ ತ್ಯಾಜ್ಯ ನೀರನ್ನು ಹರಿಸಲು ಪೈಪ್‌ಲೈನ್‌ಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ಮುಕ್ತಾಯಗೊಂಡಿದೆ. ಸರ್ಕಾರ ಇದಕ್ಕೆ 25.05 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.