ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾನೂನು ತೊಡಕು ನಿವಾರಣೆ

Team Udayavani, Jun 2, 2019, 3:05 AM IST

staliya

ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಬೇಕಿದ್ದ 39 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೆಲವೊಂದು ಸ್ಥಳೀಯ ಸಂಸ್ಥೆಗಳಿಗೆ ಇದ್ದ ಕಾನೂನು ತೊಡಕು ನಿವಾರಣೆಯಾಗಿದೆ. ಮಂಗಳೂರು ಮಹಾನಗರ ಪಾಲಿಕೆ ಸೇರಿ ರಾಜ್ಯದ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠದ ಈ ಆದೇಶದಿಂದ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಹಾದಿ ಸುಗಮವಾದಂತಾಗಿದೆ. ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಶೀಘ್ರ ಇತ್ಯರ್ಥಗೊಂಡರೆ, ಬಾಕಿ ಉಳಿದಿರುವ 39 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ವಾರ್ಡ್‌ ಮೀಸಲಾತಿ ಹಾಗೂ ಕೇತ್ರ ಪುನರ್‌ವಿಂಗಡಣೆ ಕುರಿತು ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಮೇಲ್ಮನವಿ ಸಲ್ಲಿಸಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎಲ್‌.ನಾರಾಯಣಸ್ವಾಮಿ ಹಾಗೂ ನ್ಯಾ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ತೀರ್ಪು ಪ್ರಕಟಿಸಿ ಏಕದಸಸ್ಯ ನ್ಯಾಯಪೀಠದ ಆದೇಶವನ್ನು ರದ್ದುಪಡಿಸಿತು.

ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ವಿಭಾಗೀಯ ನ್ಯಾಯಪೀಠ, ನಿಕಟಪೂರ್ವ ಜನಗಣತಿ ಆಧರಿಸಿ ಮೀಸಲಾತಿ ನಿಗದಿಪಡಿಸಬೇಕೆಂದು ಸುಪ್ರೀಂಕೋರ್ಟ್‌ ಸಂಗಪ್ಪ ಪ್ರಕರಣದಲ್ಲಿ ತೀರ್ಪು ನೀಡಿದೆ. ಹಾಗೆಯೇ, ಚುನಾವಣಾ ಆಯೋಗವು ಆದಷ್ಟು ಶೀಘ್ರ ಚುನಾವಣೆ ನಡೆಸಬೇಕೆಂದು ಕಿಶನ್‌ಸಿಂಗ್‌ ತೋಮರ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ.

ಆದ್ದರಿಂದ ಮಂಗಳೂರು ಮಹಾನಗರ ಪಾಲಿಕೆ ಸೇರಿ 13 ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ 2018ರ ಆಗಸ್ಟ್‌ 10ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಮಧ್ಯಪ್ರವೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅದೇ ರೀತಿ, 13 ನಗರ ಸ್ಥಳೀಯ ಸಂಸ್ಥೆಗಳಿಗೆ 14 ದಿನಗಳಲ್ಲಿ ನಿಗದಿತ ಮಾರ್ಗಸೂಚಿ ಹಾಗೂ ನ್ಯಾಯಪೀಠ ವ್ಯಕ್ತಪಡಿಸಿದ ಅಭಿಪ್ರಾಯಗಳ ಪ್ರಕಾರ ಮೀಸಲು ಪ್ರಕ್ರಿಯೆಯನ್ನು “ರೀಡು” (ಮರು ನಿಗದಿ) ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಿತು. 2019ರ ಜ.14ರಂದು ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದ್ದು ತಪ್ಪು ಎಂದು ವಿಭಾಗೀಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.

ಚುನಾವಣಾ ತಕರಾರು ಏನಿತ್ತು?: ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ ವಿಂಗಡಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಆಕ್ಷೇಪಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಮಂಗಳೂರಿನ ರವೀಂದ್ರ ನಾಯಕ್‌ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ, ಇನ್ನುಳಿದ ಸ್ಥಳೀಯ ಸಂಸ್ಥೆಗಳ ವಾರ್ಡ್‌ ಮೀಸಲಾತಿ ಕುರಿತು 25ಕ್ಕೂ ಹೆಚ್ಚು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾ.ಸುನೀಲ್‌ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಾದ ಪುರಸ್ಕರಿಸಿ, ರಾಜ್ಯ ಸರ್ಕಾರದ ಅಧಿಸೂಚನೆ ರದ್ದುಪಡಿಸಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಚುನಾವಣೆ ಹಾದಿ ಸುಗಮಗೊಂಡ ಸ್ಥಳೀಯ ಸಂಸ್ಥೆಗಳು: ಮಂಗಳೂರು ಮಹಾನಗರ ಪಾಲಿಕೆ, ಚಿಕ್ಕಮಗಳೂರು ನಗರಸಭೆ, ಚನ್ನರಾಯಪಟ್ಟಣ ಪುರಸಭೆ, ರಾಮನಗರ ನಗರಸಭೆ, ದೊಡ್ಡಬಳ್ಳಾಪುರ ನಗರಸಭೆ, ಗುಡಿಬಂಡೆ ಪಟ್ಟಣ ಪಂಚಾಯಿತಿ, ವಿಜಯಪುರ ಪುರಸಭೆ, ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ, ಶಿರಾ ನಗರಸಭೆ, ತರೀಕೆರೆ ಪುರಸಭೆ, ಬೇಲೂರು ಪುರಸಭೆ, ಮಡಿಕೇರಿ ನಗರಸಭೆ.

ಹೈಕೋರ್ಟ್‌ ತೀರ್ಪಿನಿಂದ ಸುಮಾರು 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಚುನಾವಣೆಗೆ ಎದುರಾಗಿದ್ದ ಕಾನೂನು ತೊಡಕು ದೂರವಾಗಿದೆ. ಈಗ ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥಗೊಂಡರೆ ಬಾಕಿ ಇರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಾರಿ ಸುಗಮವಾಗಲಿದೆ.
-ಪಿ.ಎನ್‌ ಶ್ರೀನಿವಾಸಾಚಾರಿ, ರಾಜ್ಯ ಚುನಾವಣಾ ಆಯುಕ್ತ

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.