ಬೆಂಗಳೂರು ವಕೀಲರ ಸಂಘದಿಂದ ರಾಜ್ಯಪಾಲರಿಗೆ ಪತ್ರ
Team Udayavani, Jun 2, 2019, 3:00 AM IST
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆ-ಬೆಂಗಳೂರು ಪ್ರವೇಶಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಮೀಸಲಾತಿ ಕಲ್ಪಿಸುವ ದಿ ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಯೂನಿವರ್ಸಿಟಿ (ತಿದ್ದುಪಡಿ) ಕಾಯ್ದೆ-2017ಕ್ಕೆ ಅನುಮೋದನೆ ನೀಡುವಂತೆ ಬೆಂಗಳೂರು ವಕೀಲರ ಸಂಘ ರಾಜ್ಯಪಾಲರಿಗೆ ಮನವಿ ಮಾಡಿದೆ.
ಈ ಕುರಿತು ರಾಜ್ಯಪಾಲರ ವಿ.ಆರ್.ವಾಲಾ ಅವರಿಗೆ ಪತ್ರ ಬರೆದಿರುವ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡುವಂತೆ 2018ರ ಮಾ.24ರಂದು ಮನವಿ ಸಲ್ಲಿಸಲಾಗಿತ್ತು. ಆದರೆ, ರಾಜಭವನದಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಆದ್ದರಿಂದ ಆದಷ್ಟು ಬೇಗ ಕಾಯ್ದೆಗೆ ಅನುಮೋನದೆ ನೀಡುವಂತೆ ಮನವಿ ಮಾಡಿದ್ದಾರೆ.
ಬೇರೆ ರಾಜ್ಯಗಳಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಗಳಲ್ಲಿ ಪ್ರವೇಶಾತಿಯಲ್ಲಿ ಆಯಾ ರಾಜ್ಯದ ಸ್ಥಳೀಯರಿಗೆ ಶೇ.50ರಷ್ಟು ಮೀಸಲಾತಿ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಈ ಅವಕಾಶ ಇರಲ್ಲಿಲ್ಲ. ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರವೇಶಾತಿಗಳು ಆರಂಭಗೊಳ್ಳಲಿಕ್ಕಿವೆ. ಆದ್ದರಿಂದ ತಿದ್ದುಪಡಿ ಕಾಯ್ದೆಗೆ ತುರ್ತಾಗಿ ಅನುಮೋದನೆ ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ಮನವರಿಕೆ ಮಾಡಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.