ತಂಬಾಕು ದುಷ್ಪರಿಣಾಮ ಅರಿವಿಗೆ ಕಾರ್ಯಕ್ರಮ
Team Udayavani, Jun 2, 2019, 3:04 AM IST
ಬೆಂಗಳೂರು: ತಂಬಾಕಿನ ದುಷ್ಪರಿಣಾಮ ಕುರಿತು ಕೃಷಿಕರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು, ವಿವಿಧ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
ತಂಬಾಕು ರಹಿತ ದಿನದ ಹಿನ್ನೆಲೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಬಾಯಿ, ಶ್ವಾಸಕೋಶ ಕ್ಯಾನ್ಸರ್ ಬಗೆಗೆ ಸರಿಯಾದ ಮಾಹಿತಿ ಇರುವುದಿಲ್ಲ. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಕೃಷಿಕರಿಗೆ ಮನದಟ್ಟು ಮಾಡಿಕೊಡಬೇಕಾದ ತುರ್ತು ಅಗತ್ಯವಿದೆ.
ಕೃಷಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕೃಷಿ ವಿವಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಒಳಗೊಂಡ ಮಾದರಿ ತರಬೇತಿ ಶಿಬಿರ ಏರ್ಪಡಿಸಲಾಗುವುದು ಎಂದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ರಾಜ್ಯದಲ್ಲಿ ವರ್ಷಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಮೃತಪಡುತ್ತಿದ್ದಾರೆ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯನ್ನು ನಿಷೇಧ ಮಾಡಬೇಕು.
ಈ ಸಂಬಂಧದ ಕಾಯ್ದೆಗೆ ತಿದ್ದುಪಡಿ ತಂದು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ವಿಧಿಸುತ್ತಿರುವ ದಂಡ ಶುಲ್ಕವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು. ಐಎಎಸ್ ಅಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಕರ್ನಾಟಕದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತಂಬಾಕು ಉತ್ಪನ್ನ ಬೆಳೆಯುತ್ತಾರೆ.
ಮೈಸೂರು, ಹಾಸನ, ಮಡಿಕೇರಿಯಲ್ಲಿ ಅಧಿಕ ತಂಬಾಕು ಬೆಳೆಗಾರರಿದ್ದು, ಇವರನ್ನು ಪರ್ಯಾಯ ಬೆಳೆಗಳನ್ನು ಬೆಳೆಯುವುದರ ಕಡೆಗೆ ರಾಜ್ಯ ಸರಕಾರ ಹಾಗೂ ಕೃಷಿ ಇಲಾಖೆ ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಾರಂಪರಿಕ ಬೆಳೆಯಿಂದ ವೈಜ್ಞಾನಿಕ ಬೆಳೆಯತ್ತ ರೈತರನ್ನು ಮಾರ್ಪಾಡು ಮಾಡಲಾಗುತ್ತಿದೆ.
ಈ ನಿಟ್ಟಿನಲ್ಲಿ ಈಗಾಗಲೇ ಶಿವಮೊಗ್ಗವನ್ನು ತಂಬಾಕು ರಹಿತ ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದರು. ಸಮಾರಂಭದಲ್ಲಿ ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ, ಐಎಫ್ಎಸ್ ಅಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.