ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯ


Team Udayavani, Jun 2, 2019, 9:47 AM IST

kalburgi-tdy-2..

ಕಲಬುರಗಿ: ಗ್ರಾಪಂ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಲಬುರಗಿ: ಗ್ರಾಮ ಪಂಚಾಯಿತಿ ನೌಕರರಿಗೂ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಕಾರ್ಯಾಲಯದ ಎದುರು ಶನಿವಾರ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ನೌಕರರಿಗೆ ನೀಡುವ ನಿವೃತ್ತ ವೇತನ, ಗಳಿಕೆ ರಜೆ, ವಾರಕ್ಕೊಮ್ಮೆ ವೇತನ ಸಹಿತ ರಜೆ, ವೈದ್ಯಕೀಯ ವಚ್ಚವನ್ನು ಗ್ರಾಪಂ ನೌಕರರಿಗೆ ಕಲ್ಪಿಸಬೇಕು. ಕಳೆದ ಒಂದು ವರ್ಷದಿಂದ ಬಾಕಿ ಉಳಿದ ವೇತನ ಇಎಫ್‌ಎಂಎಸ್‌ಗೆ ಸೇರದಿರುವ ವೇತನ ತೆರಿಗೆ ಸಂಗ್ರಹದಲ್ಲಿ ಕೊಡಬೇಕು. ಎಲ್ಲ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ಈಗಾಗಲೇ ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು. ಪಂಚಾಯಿತಿ ನೌಕರರಿಗೆ ಹೊಸ ಬಿಲ್ ಕಲೆಕ್ಟರ್‌ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್ ಕಲೆಕ್ಟರ್‌ ಹುದ್ದೆಯಿಂದ ಗ್ರೇಡ್‌-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು 2019ರ ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಪವಿತ್ರಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ಬಂದಿದ್ದರಿಂದ ಪಿಡಿಒ ಬಡ್ತಿ, ಗ್ರೇಡ್‌-1 ಬಡ್ತಿ ನೀಡಿ ಖಾಲಿಯಾದ ಗ್ರೇಡ್‌-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡು ವಂತಾಗಬೇಕೆಂದು ಆಗ್ರಹಿಸಿದರು. ಪಂಪ್‌ ಆಪರೇಟರ್‌, ಜವಾನ, ಸ್ವಚ್ಛತಾಗಾರರ ವೃಂದದಿಂದ ಬಿಲ್ ಕಲೆಕ್ಟರ್‌ ಹುದ್ದೆಗೆ ಹಾಗೂ ಕ್ಲರ್ಕ್‌, ಕ್ಲರ್ಕ್‌-ಕಂ-ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಬಡ್ತಿಗೆ ಪರಿಣಿಸಬೇಕೆಂದು ಪ್ರತಿಭಟನಾನಿರತರು ಜಿಪಂ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಪಂ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಹರಸೂರ, ಜಿಲ್ಲಾಧ್ಯಕ್ಷ ಬಾಬುರಾವ ಧುತ್ತರಗಾಂವ, ಶಿವಾನಂದ ಕವಲಗಾ, ಉಮಾಶಂಕರ ಕಡಣಿ ಹಾಗೂ ಇನ್ನಿತರ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.