ಉತ್ತಮ ನೀರು ಸರಬರಾಜು ಮಾಡಿ
•ಅಧಿಕಾರಿಗಳಿಗೆ ಸಚಿವ ಜಾರ್ಜ್ ಸೂಚನೆ •ಬರಪೀಡಿತ ಸ್ಥಳಗಳಲ್ಲಿ ಕೈಗೊಳ್ಳುವ ಕ್ರಮ ಕುರಿತು ಸಭೆ
Team Udayavani, Jun 2, 2019, 10:31 AM IST
ಚಿಕ್ಕಮಗಳೂರು: ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ಸಭೆ ನಡೆಯಿತು.
ಚಿಕ್ಕಮಗಳೂರು: ಬರಪೀಡಿತ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಮೊದಲು ನೀರು ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬರಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಿರುವ ಕ್ರಮಗಳ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಸಿ.ಟಿ.ರವಿ, ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಸದರಿ ನೀರು ಕುಡಿಯಲು ಯೋಗ್ಯವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆಯೇ? ಕುಡಿಯಲು ಯೋಗ್ಯವಲ್ಲದ ನೀರನ್ನು ಕುಡಿದು ಜನತೆ ಸಮಸ್ಯೆಗೆ ಸಿಲುಕುವಂತಾಗಬಾರದು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಾರ್ಜ್, ಇದು ಅತ್ಯಂತ ಸೂಕ್ತ ಸಲಹೆ. ನೀರು ಸರಬರಾಜು ಮಾಡುವ ಮೊದಲು ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಕುಡಿಯಲು ಯೋಗ್ಯವಾದ ನೀರು ಎಂಬುದನ್ನು ಖಚಿತಪಡಿಸಿಕೊಂಡು ನಂತರ ಸರಬರಾಜು ಮಾಡಿ. ಖಾಸಗಿ ಬೋರ್‌ವೆಲ್ಗಳನ್ನು ಬಾಡಿಗೆಗೆ ಪಡೆಯುವ ಮೊದಲು ಅದನ್ನೂ ಸಹ ಪರಿಶೀಲಿಸಿಕೊಳ್ಳಿ ಎಂದು ಸೂಚಿಸಿದರು.
ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಮಾತನಾಡಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಒಂದು ರೀತಿಯಲ್ಲಿ ದಂಧೆಯಂತಾಗಿದೆ. ಯಾರು ಎಲ್ಲಿಗೆ, ಎಷ್ಟು ಟ್ಯಾಂಕರ್ ನೀರು ಸರಬರಾಜು ಮಾಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ವರದಿಯಲ್ಲಿ ಲಕ್ಷಾಂತರ ರೂ.ಗಳನ್ನು ಟ್ಯಾಂಕರ್ ನೀರಿಗೆ ಕೊಡಲಾಗಿದೆ ಎಂದು ತಿಳಿಸಲಾಗಿದೆ. ಇಷ್ಟೊಂದು ಟ್ಯಾಂಕರ್ ಓಡಾದಿದ್ದನ್ನು ತಾವು ನೋಡಿಯೇ ಇಲ್ಲ ಎಂದು ಹೇಳಿದರು.
ಕಡೂರು ಶಾಸಕ ಬೆಳ್ಳಿಪ್ರಕಾಶ್ ಮಾತನಾಡಿ, ಕಡೂರು ತಾಲೂಕಿನಲ್ಲಿ ಟ್ಯಾಂಕರ್ ಮೂಲಕ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲಾಗುತ್ತಿದೆ. ಆದರೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆದಿರುವುದು ಸರಿಯಲ್ಲ. ಪ್ರತಿ ತಾಲೂಕಿನಲ್ಲಿ 3-4 ಗ್ರಾಮ ಪಂಚಾಯತ್‌ಗಳನ್ನು ಸೇರಿಸಿ ಟೆಂಡರ್ ಕರೆಯಬೇಕಿತ್ತು. ಈ ಬಗ್ಗೆ ಸಲಹೆ ನೀಡಿದರೂ ಜಿಲ್ಲಾಡಳಿತ ಪರಿಗಣಿಸಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಮೇ 30ರವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ 172 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಈವರೆಗೆ ಕೇವಲ 105 ಮಿ.ಮೀ. ಮಳೆಯಾಗಿದ್ದು, ಶೇ.39 ರಷ್ಟು ಕೊರತೆ ಇದೆ. ಶೃಂಗೇರಿ ತಾಲೂಕಿನಲ್ಲಿ ಅತೀ ಹೆಚ್ಚು ಶೇ. 65ರಷ್ಟು ಹಾಗೂ ನರಸಿಂಹರಾಜಪುರ ತಾಲ್ಲೂಕಿನಲ್ಲಿ ಶೇ. 61ರಷ್ಟು ಮಳೆ ಕೊರತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ಕಡೂರು ತಾಲೂಕಿನಲ್ಲಿ 53, ಚಿಕ್ಕಮಗಳೂರು 33 ಹಾಗೂ ತರೀಕೆರೆ ತಾಲೂಕಿನ 1 ಗ್ರಾಮ ಸೇರಿ ಒಟ್ಟಾರೆ 87 ಗ್ರಾಮಗಳಿಗೆ ಪ್ರತಿನಿತ್ಯ 100 ಟ್ಯಾಂಕರ್ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಚಿಕ್ಕಮಗಳೂರು ನಗರ ವ್ಯಾಪ್ತಿಯ 8 ವಾರ್ಡ್‌ಗಳಿಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಾಬ್ತು ಚಿಕ್ಕಮಗಳೂರು ತಾಲೂಕಿನಲ್ಲಿ 70.81 ಲಕ್ಷ ರೂ., ಕಡೂರು ತಾಲೂಕಿನಲ್ಲಿ 89.65 ಲಕ್ಷ ಹಾಗೂ ತರೀಕೆರೆ ತಾಲೂಕಿನಲ್ಲಿ 0.49 ಲಕ್ಷ ರೂ. ಸೇರಿ ಒಟ್ಟಾರೆ 1.60 ಕೋಟಿ ರೂ.ಗಳ ಬಿಲ್ ಪಾವತಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು 6 ಕೋಟಿ ರೂ. ಅನುದಾನ ಮಂಜೂರಾಗಿದ್ದು, 4.28 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ ಚಿಕ್ಕಮಗಳೂರು ತಾಲೂಕಿನಲ್ಲಿ 51 ಕಾಮಗಾರಿಗಳ ಪೈಕಿ 47 ಕಾಮಗಾರಿ ಪೂರ್ಣಗೊಂಡಿದ್ದು, 45.93 ಲಕ್ಷ ರೂ. ಬಿಲ್ ಪಾವತಿಸಲಾಗಿದೆ. ಕಡೂರು ತಾಲೂಕಿನಲ್ಲಿ 85 ಕಾಮಗಾರಿ ಪೈಕಿ 81 ಪೂರ್ಣಗೊಂಡು 85.60 ಲಕ್ಷ ರೂ., ಕೊಪ್ಪ ತಾಲೂಕಿನಲ್ಲಿ 46 ಕಾಮಗಾರಿ ಪೈಕಿ 34 ಪೂರ್ಣಗೊಂಡು 19.20 ಲಕ್ಷ ರೂ., ಮೂಡಿಗೆರೆಯಲ್ಲಿ 37ರಲ್ಲಿ 26 ಕಾಮಗಾರಿ ಪೂರ್ಣಗೊಂಡು 31.50 ಲಕ್ಷ ರೂ., ನ.ರಾ.ಪುರದಲ್ಲಿ 73 ರ ಪೈಕಿ 53 ಕಾಮಗಾರಿ ಪೂರ್ಣಗೊಂಡು 45.21 ಲಕ್ಷ, ಶೃಂಗೇರಿ ತಾಲೂಕಿನಲ್ಲಿ 48ರ ಪೈಕಿ 33 ಕಾಮಗಾರಿ ಪೂರ್ಣಗೊಂಡು 36.08 ಲಕ್ಷ ಹಾಗೂ ತರೀಕೆರೆ ತಾಲೂಕಿನಲ್ಲಿ 64 ಕಾಮಗಾರಿ ಪೈಕಿ 60 ಕಾಮಗಾರಿ ಪೂರ್ಣಗೊಂಡಿದ್ದು, 49.35 ಲಕ್ಷ ರೂ. ಬಿಲ್ ಪಾವತಿಸಲಾಗಿದೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಸ್ತುತ ಸಾಲಿನಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ 1.16 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ ಚಿಕ್ಕಮಗಳೂರು ನಗರಸಭೆಗೆ 20 ಲಕ್ಷ ರೂಗಳಲ್ಲಿ 10 ಕಾಮಗಾರಿ, ಕಡೂರು ಪುರಸಭೆಯಲ್ಲಿ 16 ಲಕ್ಷ ರೂಗಳಿಗೆ 1 ಕಾಮಗಾರಿ, ಬೀರೂರು ಪುರಸಭೆಗೆ 16 ಲಕ್ಷ ರೂಗಳಲ್ಲಿ 1, ತರೀಕೆರೆ ಪುರಸಭೆ 16 ಲಕ್ಷ ರೂಗಳಿಗೆ 5 ಕಾಮಗಾರಿ, ಮೂಡಿಗೆರೆ ಪಟ್ಟಣ ಪಂಚಾಯತ್‌ನಲ್ಲಿ 12 ಲಕ್ಷ ರೂಗಳಿಗೆ 1 ಕಾಮಗಾರಿ, ನ.ರಾ.ಪುರ ಪಟ್ಟಣ ಪಂಚಾಯತ್‌ನಲ್ಲಿ 12 ಲಕ್ಷ ರೂಗಳಿಗೆ 7 ಕಾಮಗಾರಿ, ಶೃಂಗೇರಿ ಪಟ್ಟಣ ಪಂಚಾಯತ್ 12 ಲಕ್ಷ ರೂಗಳಿಗೆ 1 ಹಾಗೂ ಕೊಪ್ಪ ಪಟ್ಟಣ ಪಂಚಾಯತ್‌ನಲ್ಲಿ 12 ಲಕ್ಷ ರೂಗಳಿಗೆ 1 ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ವಿವರಿಸಿದರು.
ಬರಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಕಾಮಗಾರಿಗಳು ಕೇವಲ ತಾತ್ಕಾಲಿಕ ಪರಿಹಾರಕ್ಕಷ್ಟೇ ಸೀಮಿತವಾಗಿದೆ. ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಿದ್ಧಪಡಿಸಿರುವ ಡಿಪಿಆರ್ ಸರ್ಕಾರದಲ್ಲಿದೆ. ಅದರೊಂದಿಗೆ ಜಲಧಾರೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪ್ರಸ್ತಾವನೆ ಕೂಡ ಸರ್ಕಾರದ ಮುಂದಿದೆ. ಅವುಗಳಿಗೆ ಮಂಜೂರಾತಿ ನೀಡಿದರೆ ಮಾತ್ರ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಸಭೆಯಲ್ಲಿ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ಆನಂದಪ್ಪ, ಜಿಪಂ ಸಿಇಓ ಎಸ್.ಅಶ್ವತಿ, ಎಸ್.ಪಿ. ಹರೀಶ್ ಪಾಂಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.