ಜಾಗ ನೀಡಿದ್ರೆ ಕೋಟೆ ರಸ್ತೆ ಅಭಿವೃದ್ಧಿ:ಅನಿಲ್ಕುಮಾರ್
Team Udayavani, Jun 2, 2019, 10:51 AM IST
ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ಪ್ರವಾಸೋದ್ಯಮದಲ್ಲಿ ಹೆಗ್ಗುರುತಾಗಬೇಕು. ನೇರ ರಸ್ತೆಗೆ ಜಾಗ ಬಿಟ್ಟು ಕೊಟ್ಟಲ್ಲಿ ಅನುದಾನ ನೀಡಿ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ಹೇಳಿದರು.
ಇಲ್ಲಿನ ಐತಿಹಾಸಿಕ ಕೋಟೆ ಮತ್ತು ಚಂದ್ರವಳ್ಳಿ ಪ್ರವಾಸಿ ತಾಣಗಳಿಗೆ ಶನಿವಾರ ಭೇಟಿ ನೀಡಿದ್ದ ಅವರು, ಪುರಾತತ್ವ ಇಲಾಖೆ, ಕಂದಾಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.
ಐತಿಹಾಸಿಕ ಕೋಟೆಗೆ ರಂಗಯ್ಯನಬಾಗಿಲು, ಆನೆಬಾಗಿಲು, ಕರುವಿನಕಟ್ಟೆ ಸೇರಿದಂತೆ ಮತ್ತಿತರ ಎಲ್ಲ ಮಾರ್ಗಗಳಲ್ಲಿ ರಸ್ತೆ, ಪಾದಚಾರಿ ದಾರಿಯನ್ನು ಒತ್ತುವರಿ ಮಾಡಲಾಗಿದೆ. ಇದರಿಂದ ಕೋಟೆಗೆ ನೇರವಾಗಿ ಬಸ್ ಸೇರಿದಂತೆ ಇತರೆ ಕಾರು ವಾಹನಗಳು ಸುಲಭವಾಗಿ ತೆರಳು ಆಗುತ್ತಿಲ್ಲ. ಇದರಿಂದ ಪ್ರವಾಸಿಗರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಸ್ಟೇಡಿಯಂ ರಸ್ತೆ ಮೂಲಕ ಜಿ.ಜಿ. ಕಲ್ಯಾಣ ಮಂಟಪದ ಮಾರ್ಗವಾಗಿ ಜೋಗಿಮಟ್ಟಿ ರಸ್ತೆ ಕ್ರಾಸ್ ಮಾಡಿಕೊಂಡು ಅಗಳು ಪ್ರದೇಶದ ಮೂಲಕ ಕೋಟೆಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಸೂಕ್ತ ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟು ಕೊಟ್ಟಲ್ಲಿ ಶೀಘ್ರದಲ್ಲೇ ಡಬಲ್ ರಸ್ತೆ ನಿರ್ಮಿಸಲಾಗುತ್ತದೆ ಎಂದು ಅನಿಲ್ಕುಮಾರ್, ಉಪವಿಭಾಗಾಧಿಕಾರಿ ವಿಜಯಕುಮಾರ್ ಅವರಲ್ಲಿ ಕೋರಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪವಿಭಾಗಾಧಿಕಾರಿಗಳು, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕೋಟೆ ಮೇಲ್ಭಾಗದಲ್ಲಿ ಗೋಪಾಲಸ್ವಾಮಿ ಹೊಂಡ, ಅಕ್ಕತಂಗಿ ಹೊಂಡ, ಓಬವ್ವನ ಕಿಂಡಿ, ಹತ್ತಾರು ದೇವಸ್ಥಾನಗಳ ಪ್ರದೇಶ ಸೇರಿದಂತೆ ಹಲವು ಮಹತ್ವದ ಸ್ಥಳಗಳಿಗೆ ಭೇಟಿ ನೀಡಿದ ಅನಿಲ್ಕುಮಾರ್, ಅವುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕುಮಾರ ಪುಷ್ಕರ್, ಪುರಾತತ್ವ ಇಲಾಖೆಯ ರಂಗನಾಥ್, ಜಿಲ್ಲಾ ಪ್ರವಾಸೋದ್ಯಮಾಧಿಕಾರಿ ತಿಪ್ಪೇಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.