ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ
Team Udayavani, Jun 2, 2019, 10:51 AM IST
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಬಿಜೆಪಿ ವತಿಯಿಂದ ವಿಜಯೋತ್ಸವ ಮೆರವಣಿಗೆಯು ಕುದುಲ್ ರಂಗ ರಾವ್ ಪುರಭವನದಿಂದ ಪಿವಿಎಸ್‌ನಲ್ಲಿ ರುವ ಬಿಜೆಪಿ ಕಚೇರಿ ವರೆಗೆ ಶನಿವಾರ ನಡೆಯಿತು.
ಮೆರವಣಿಗೆಯು ಪುರಭವನದಿಂದ ಹೊರಟು ಕ್ಲಾಕ್ ಟವರ್, ಜಿಎಚ್‌ಎಸ್ ರೋಡ್, ಟೆಂಪಲ್ ಸ್ಕ್ವೇರ್, ಬಾಲಾಜಿ ಟಾಕೀಸ್, ನ್ಯೂಚಿತ್ರಾ ಟಾಕೀಸ್, ಅಳಕೆ, ದುರ್ಗಾ ಮಹಲ್, ಬಲ್ಲಾಳ್‌ಬಾಗ್, ಎಂ.ಜಿ. ರೋಡ್, ಪಿವಿಎಸ್ ವೃತ್ತ ಮುಖಾಂತರ ಬಿಜೆಪಿ ಕಚೇರಿ ವರೆಗೆ ಸಾಗಿಬಂದಿತು.
ಸುಮಾರು 10ಕ್ಕೂ ಹೆಚ್ಚು ತೆರೆದ ಜೀಪ್‌ಗ್ಳು, 50ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಬಿಜೆಪಿ ಧ್ವಜ ಹಿಡಿದು ಬಿಜೆಪಿ ಕಾರ್ಯಕರ್ತರು ಮತ್ತು ನಳಿನ್ ಅಭಿಮಾನಿಗಳು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ತುಣುಕುಗಳು ಮೆರವಣಿಗೆಯುದ್ದಕ್ಕೂ ಕೇಳಿ ಬಂದವು.
ಮಹಿಳೆಯೋರ್ವರು ತೆರೆದ ಜೀಪನ್ನು ಮುನ್ನಡೆಸಿರುವುದು ವಿಶೇಷವಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಶಾಸಕ ಡಿ. ವೇದವ್ಯಾಸ ಕಾಮತ್, ಮಾಜಿ ಶಾಸಕ ಯೋಗೀಶ್ ಭಟ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ಹರಿಕೃಷ್ಣ ಬಂಟ್ವಾಳ,
ಜಗದೀಶ್ ಅಧಿಕಾರಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.