ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ವಿಶ್ವ ತಂಬಾಕು ರಹಿತ ದಿನಾಚರಣೆ
Team Udayavani, Jun 2, 2019, 11:49 AM IST
ಬೆಳ್ಮಣ್: ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಸಂಘಟನೆ ಉಡುಪಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇವುಗಳ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಶುಕ್ರವಾರ ಕಲ್ಯಾ ಸರಕಾರಿ ಫ್ರೌಢ ಶಾಲಾ ಸಭಾಭವನದಲ್ಲಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿ, ಶಾಲಾ ವಿಜ್ಞಾನ ಶಿಕ್ಷಕಿ ಸತ್ಯವತಿ ಮಾತನಾಡಿ, ತಂಬಾಕು ಸೇವನೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕು ರಹಿತ ಸಮಾಜ ಕಟ್ಟಲು ಸಾಧ್ಯ. ತಂಬಾಕಿನಿಂದ ಮಾರಕ ರೋಗಗಳಿಗೆ ತುತ್ತಾಗಿ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದಾರೆ. ಚಿಕ್ಕ ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ಅವರು ತಂಬಾಕು ಸೇವನೆಯಿಂದ ದೂರವಿರುವಂತೆ ಮಾಡಬಹುದು. ಈ ಬಗ್ಗೆ ಚಿತ್ರಮಂದಿರ, ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದರೂ ನಿರೀಕ್ಷಿತ ಫಲಿತಾಂಶ ದೊರೆಯುತ್ತಿಲ್ಲ ಎಂದರು.
ಫ್ರೆಂಡ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಸುಧಾಕರ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತ್ ಬೆಳ್ಮಣ್ ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನದ ಜತೆಗೆ ಜಾಗೃತಿ ಜಾಥಾ ನಡೆಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಸುಮನಾ ಭಟ್ ಮಾತನಾಡಿ, ಮಹಿಳೆಯರು ಮಕ್ಕಳೆಂಬ ತಾರತಮ್ಯವಿಲ್ಲದೆ ಎಲ್ಲರೂ ತಂಬಾಕು ಸೇವನೆಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ತಂಬಾಕು ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳು ಬರುತ್ತವೆ. ಈ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ತಂಬಾಕು ಸೇವನೆ ವ್ಯಸನವನ್ನು ದೂರವಾಗಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.