ಮದೆನಾಡು ಗ್ರಾಮದಲ್ಲಿ 77 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ
Team Udayavani, Jun 2, 2019, 1:07 PM IST
ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಹಲವು ಕುಟುಂಬಗಳು ಮನೆ ಕಳೆದು ಕೊಂಡಿದ್ದರು. ಆ ದಿಸೆಯಲ್ಲಿ ಸರಕಾರ ಕರ್ಣಂಗೇರಿ, ಮಾದಪುರ, ಮದೆನಾಡು ಮತ್ತಿತರ ಗ್ರಾಮಗಳಲ್ಲಿ ಮನೆ ನಿರ್ಮಿಸಲಾಗುತ್ತಿದೆ.
ಈಗಾಗಲೇ ಕರ್ಣಂಗೇರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿದ್ದು, ಮೂಲ ಸೌಲಭ್ಯ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮದೆ ನಾಡು ಗ್ರಾಮದಲ್ಲಿ 80 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಮದೆನಾಡು, ಕಾಟಕೇರಿ, ಜೋಡುಪಾಲ, ಎರಡನೇ ಮೊಣ್ಣಂಗೇರಿ ಭಾಗದಲ್ಲಿ ಮನೆ ಕಳೆದುಕೊಂಡ ಸುಮಾರು 77 ಕುಟುಂಬಗಳು ಇದ್ದು, ಸದ್ಯ ಮದೆನಾಡು ಗ್ರಾಮದ ಬಳಿ 80 ಮನೆಗಳನ್ನು ನಿರ್ಮಿಸಲಾಗಿದೆ. ಸದ್ಯ ಸ್ಥಳೀಯ 77 ಕುಟುಂಬಗಳಿಗೆ ಮನೆ ಹಂಚಿಕೆ ಪ್ರಕ್ರಿಯೆಯು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮತ್ತು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಮದೆನಾಡು, ಕಾಟಕೇರಿ, ಜೋಡು ಪಾಲ, ಎರಡನೇ ಮೊಣ್ಣಂಗೇರಿ ಸೇರಿ ದಂತೆ ಮಡಿಕೇರಿ ಮತ್ತು ಸೋಮ ವಾರಪೇಟೆ ತಾಲೂಕಿನ ಒಟ್ಟು 124 ಕುಟುಂಬದ ಸಂತ್ರಸ್ತರು ಮದೆನಾಡು ಗ್ರಾಮದಲ್ಲಿ ಮನೆ ಬೇಕೆಂದು ಮನವಿ ಮಾಡಿದ್ದು. ಆದರೆ ಸ್ಥಳೀಯ 77 ಕುಟುಂಬದವರಿಗೆ ಮನೆಗಳ ಹಂಚಿಕೆ ಮಾಡಲಾಯಿತು. ಇದಕ್ಕೆ ಸಂತ್ರಸ್ತ ಕುಟುಂಬದವರು ಒಪ್ಪಿಗೆ ನೀಡಿದರು.
ಉಳಿದ 47 ಕುಟುಂಬಗಳಿಗೆ ಜಂಬೂರಿನಲ್ಲಿ ಮನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತು ಉಪ ವಿಭಾಗಾ ಧಿಕಾರಿ ಟಿ.ಜವರೇಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.