ದುರ್ಗದ ಕೋಟೆಗೂ ಸಿಗಬೇಕು ವಿಶ್ವಮಾನ್ಯತೆ

„ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚು ಒತ್ತು ನೀಡುವೆ „ಕೈಗಾರಿಕೆಗಳ ಸ್ಥಾಪನೆ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಯತ್ನ

Team Udayavani, Jun 2, 2019, 5:17 PM IST

2-June-34

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಚಿತ್ರದುರ್ಗ ಮೀಸಲು ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಆನೇಕಲ್‌ ನಾರಾಯಣಸ್ವಾಮಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಯೋಜನೆ-ಯೋಚನೆ ಹೊಂದಿದ್ದಾರೆ. ‘ಉದಯವಾಣಿ’ಗೆ ನೀಡಿರುವ ಸಂದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಸದಾಶಿವ ಆಯೋಗದ ವರದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಯೋಜನೆಗಳೇನು?
ಕ್ಷೇತ್ರಕ್ಕೆ ಏನಾಗಬೇಕು, ಏಕೆ ಅಭಿವೃದ್ಧಿ ಹೊಂದಿಲ್ಲ, ಕ್ಷೇತ್ರಕ್ಕೆ ಯಾವ ಯೋಜನೆ ತಂದರೆ ಅನುಕೂಲ ಎನ್ನುವ ಮಾಹಿತಿ ಪಡೆಯುತ್ತೇನೆ. ಹಂಪಿಗೆ ಸಿಕ್ಕ ವಿಶ್ವ ಮಾನ್ಯತೆ ಐತಿಹಾಸಿಕ ಕೋಟೆ ನಾಡಿಗೂ ಸಿಗಬೇಕು. ಇದಕ್ಕಾಗಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು. ಕೈಗಾರಿಕೆಗಳನ್ನು ಆರಂಭಿಸಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಬೇಕು. ಭದ್ರಾ ಮೇಲ್ದಂಡೆ ಯೋಜನೆ, ರೈಲ್ವೆ ಮಾರ್ಗ, ವೈದ್ಯಕೀಯ ಕಾಲೇಜು, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ಐತಿಹಾಸಿಕ ಕೋಟೆ ಅಭಿವೃದ್ಧಿ ಬಗ್ಗೆ ಯಾವ ಅಭಿಪ್ರಾಯ ಹೊಂದಿದ್ದೀರಿ?
ದುರ್ಗದ ಕೋಟೆ ನಲುಗಿದೆ. ಹಾಗಾಗಿ ಅದನ್ನು ಪ್ರವಾಸಿ ಕೇಂದ್ರವನ್ನಾಗಿ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ನನ್ನ ಪ್ರಯತ್ನ ಸಾಗಲಿದೆ.

ಹೈದ್ರಾಬಾದ್‌ ಕರ್ನಾಟಕಕ್ಕಿಂತ ಹಿಂದುಳಿದಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ವಿಶೇಷ ಸ್ಥಾನಮಾನ ದೊರಕಿಸಲು 371 ಕಲಂಗೆ ಸೇರಿಸಲು ಹೋರಾಟ ನಡೆಯುತ್ತಿದೆ. ಆ ನಿಟ್ಟಿನಲ್ಲಿ ನಿಮ್ಮ ಪ್ರಯತ್ನ ಏನು?
ವಿಧಾನಸಭಾ ಕ್ಷೇತ್ರಗಳ ಶಾಸಕರು, ಹೋರಾಟ ಸಮಿತಿ, ರಾಜಕೀಯ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇನೆ. 371 ಕಲಂ ಸ್ಥಾನಮಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ
ಮಾಡುತ್ತೇನೆ.

ಶೋಷಿತರು, ಅಸ್ಪ್ರಶ್ಯರು, ಒಬಿಸಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿಲ್ಲವಲ್ಲ?
ಈ ಬಗ್ಗೆ ಈಗಾಗಲೇ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ವರ್ಗಗಳಿಗೆ ಆದ್ಯತೆ ನೀಡುವ ಬಗ್ಗೆ ಅವರಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ.

ನೀವು ಸಚಿವ ಸ್ಥಾನದ ಆಕಾಂಕ್ಷಿಯೇ?
ಇಲ್ಲ, ಆದರೆ ದಲಿತರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುವೆ. ನನಗಿಂತ ಹಿರಿಯರು ಹಲವರಿದ್ದು, ಅವರಿಗೆ ಸಚಿವ ಸ್ಥಾನ
ಸಿಗಬೇಕು. ಅಲ್ಲದೆ ಒಬಿಸಿ ವರ್ಗಕ್ಕೂ ಸಚಿವ ಸ್ಥಾನ ನೀಡುವಂತೆ ಈಗಾಗಲೇ ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್‌ ಜೊತೆಗೆ ಚರ್ಚಿಸಿದ್ದಾರೆ.

ಸದಾಶಿವ ಆಯೋಗದ ವರದಿ ಮೂಲೆಗುಂಪಾಗಲು ಕಾರಣವೇನು?
ಮುಚ್ಚುಮರೆ ಇಲ್ಲದೆ ಹೇಳುತ್ತೇನೆ, ಚುನಾವಣೆಯಲ್ಲಿ ಮತಗಳು ಕೈತಪ್ಪುವ ಆತಂಕದಲ್ಲಿ ರಾಜಕೀಯ ಪಕ್ಷಗಳು ವರದಿ ಜಾರಿಗೆ ಹಿಂದೇಟು ಹಾಕುತ್ತಿವೆ. ಈ ಬಗ್ಗೆ ಮುಕ್ತ ಚರ್ಚೆ ಆಗಬೇಕಿದೆ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಸದಾಶಿವ ಆಯೋಗದ
ವರದಿ ಮೂಲೆಗುಂಪಾಗಿದೆ. ರಾಜ್ಯ ಸರ್ಕಾರ ಕೂಡಲೇ ಸದನದಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಬೇಕು. ಅವಕಾಶ ವಂಚಿತ ಎಲ್ಲ ಜಾತಿಗಳಿಗೂ ಒಳ ಮೀಸಲಾತಿಯ ಅಗತ್ಯವಿದೆ.

ನಾನು ಈಗಲೂ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕಾಗಿ ಒತ್ತಾಯ ಮಾಡುತ್ತೇನೆ. ಈ ವರದಿಯಿಂದ ನ್ಯಾಯ ಸಿಗಬೇಕು. 70 ವರ್ಷಗಳ ಅವ ಧಿಯಲ್ಲಿ ಯಾವ ಯಾವ ವರ್ಗಗಳು ಎಷ್ಟು ಹಿಂದುಳಿದಿವೆ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಎಷ್ಟು ಲಾಭವಾಗಿದೆ ಎನ್ನುವುದು ಸದನದಲ್ಲಿ ಚರ್ಚೆಯಾಗಬೇಕು. ಕೇವಲ ಸದಾಶಿವ ಆಯೋಗದ ವರದಿ ಮಾತ್ರವಲ್ಲ, ಕಾಂಗ್ರೆಸ್‌ ಸರ್ಕಾರ 80-100 ಕೋಟಿ ರೂ. ಖರ್ಚು ಮಾಡಿ ಸಿದ್ಧಪಡಿಸಿರುವ ಸಾಮಾಜಿಕ,
ಶೈಕ್ಷಣಿಕ ಜಾತಿ ಗಣತಿಯೂ ಕೂಡಲೇ ಸದನದಲ್ಲಿ ಮಂಡನೆಯಾಗಬೇಕು. ಆಗ ಎಲ್ಲ ಶೋಷಿತ ವರ್ಗಗಳು, ಹಿಂದುಳಿದ ಜಾತಿಗಳಿಗೆ ನ್ಯಾಯ ದೊರೆಯಲಿದೆ.

ಭೋವಿ, ಲಂಬಾಣಿ, ಕೊರಚ, ಕೊರಮ ಇತ್ಯಾದಿ ಸ್ಪ್ರಶ್ಯ ಜಾತಿಗಳ ಪರಿಶಿಷ್ಟ ಜಾತಿ ಮೀಸಲು ತೆಗೆಯುವಂತೆ ಸದಾಶಿವ ಆಯೋಗದ ವರದಿಯಲ್ಲಿ ಹೇಳಲಾಗಿದೆಯೇ?
ಕೆಲವು ಜಾತಿಗಳಿಗೆ ಎಸ್ಸಿ ಮೀಸಲು ಹೋಗಲಿದೆ ಎನ್ನುವ ಕಾರಣದಿಂದ ಹಾಲಿ ಎಸ್ಸಿ ಪಟ್ಟಿಯಲ್ಲಿರುವ ಯಾವುದೇ ಜಾತಿಯನ್ನು ಎಸ್ಸಿ ಮೀಸಲಿನಿಂದ ತೆಗೆಯುವಂತೆ ವರದಿಯಲ್ಲಿ ಹೇಳಿಲ್ಲ. ಸದನದಲ್ಲಿ ಸದಾಶಿವ ಆಯೋಗದ ವರದಿ ಸಮಗ್ರ
ಚರ್ಚೆಯಾಗಬೇಕು. ವರದಿ ಬಗ್ಗೆ ಜನರಲ್ಲಿರುವ ತಪ್ಪುಕಲ್ಪನೆಯನ್ನು ಹೋಗಲಾಡಿಸಬೇಕು.

ಶೋಷಿತ ಅಸ್ಪ್ರಶ್ಯ ಜಾತಿಗಳಿಗೆ ಸ್ಪ್ರಶ್ಯ ಎಸ್ಸಿ ಜಾತಿಗಳಿಂದ ಅನ್ಯಾಯವಾಗಿದೆ ಎಂದು ಅನ್ನಿಸುವುದಿಲ್ಲವೇ?
ಇಡೀ ದೇಶದಲ್ಲಿ ದಕ್ಷಿಣ ಭಾರತದಲ್ಲಿ ಅಸ್ಪ್ರಶ್ಯ ಜಾತಿಗಳಿಗೆ ರಾಜಕೀಯವಾಗಿ, ಶೈಕ್ಷಣಿಕವಾಗಿ ಭಾರೀ ಅನ್ಯಾಯವಾಗಿದೆ. ಇದನ್ನು ತಡೆಗಟ್ಟಲು ನನ್ನದೇ ಆದ ಒಂದು ಸೂತ್ರದೊಂದಿಗೆ ಅನ್ಯಾಯ ತಪ್ಪಿಸಲು ಪ್ರಯತ್ನಿಸುತ್ತೇನೆ.

ನಿಮಗೆ ಬಿಜೆಪಿ ಟಿಕೆಟ್‌ ನೀಡಿದ್ದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿರೋಧ ವ್ಯಕ್ತವಾಯಿತು. ಇದೆಲ್ಲವನ್ನೂ ಹೇಗೆ ನಿಭಾಯಿಸಿದಿರಿ?
ಸದಾಶಿವ ಆಯೋಗದ ವರದಿಯ ತಿಳಿವಳಿಕೆ ಕೊರತೆಯಿಂದಾಗಿ ಆ ರೀತಿ ವಿರೋಧ ವ್ಯಕ್ತವಾಯಿತು. ಆದರೆ ನಾನು ಯಾವುದೇ ಕಾರಣಕ್ಕೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಎಲ್ಲರೂ ನಮ್ಮವರೇ ಆಗಿದ್ದು ಮುಂದಿನ ದಿನಗಳಲ್ಲಿ ಎಲ್ಲ ತಿಳಿಯಾಗಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರು ನಿಮಗೆ ಟಿಕೆಟ್‌ ನೀಡಲು ಹಿಂದೇಟು ಹಾಕಿದ್ದರಂತಲ್ಲ?
ನಾನೂ ಯಾರನ್ನೂ ದೂರುವುದಿಲ್ಲ. ನನ್ನ ಪಕ್ಷ ನಿಷ್ಠೆ, ಸಂಘಟನೆ, ಶಿಸ್ತು ಬದ್ಧ ವರ್ತನೆಯಿಂದಾಗಿ ಪಕ್ಷ ಗುರುತಿಸಿ ನನಗೆ ಟಿಕೆಟ್‌ ನೀಡಿದೆ.

ಚುನಾವಣೆ ಸಂದರ್ಭದಲ್ಲಿ ಮಾದಿಗ ಹಟ್ಟಿಗಳಿಗೆ ಹೆಚ್ಚು ಭೇಟಿ ನೀಡಿದ್ದು ಏಕೆ?
ನಾನು ಯಾವುದೇ ಮಾದಿಗ ಹಟ್ಟಿಗೆ ಭೇಟಿ ನೀಡಿಲ್ಲ. ಭೇಟಿ ನೀಡಿದ್ದರೆ ಇನ್ನೂ ಹೆಚ್ಚಿನ ಮತ ಬರುತ್ತಿತ್ತು. ನನ್ನ ಅಭಿಮಾನಿಗಳು, ಸಮುದಾಯದ ಮುಖಂಡರು, ಪಕ್ಷದವರು ಮಾದಿಗ ಹಟ್ಟಿಗಳಿಗೆ ಭೇಟಿ ನೀಡಿರಬಹುದು.

ಹೊಸದುರ್ಗ ಮತ್ತು ಹೊಳಲ್ಕೆರೆ ಕ್ಷೇತ್ರದ ಶಾಸಕರು ನಿಮ್ಮ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರಂತಲ್ಲ?
ಶಾಸಕರಾದ ಗೂಳಿಹಟ್ಟಿ ಶೇಖರ್‌ ಹಾಗೂ ಎಂ. ಚಂದ್ರಪ್ಪ ನನ್ನ ಸ್ನೇಹಿತರು. ಸಮುದಾಯಕ್ಕೆ ಟಿಕೆಟ್‌ ಕೈ ತಪ್ಪಿದಾಗ ಅಸಮಾಧಾನವಾಗುವುದು ಸಹಜ. ಆದರೆ ಇಬ್ಬರೂ ಉತ್ತಮ ರೀತಿಯಲ್ಲಿ ಕೆಲಸ ಮಾಡಿ ಹೆಚ್ಚಿನ ಲೀಡ್‌ ಕೊಡಿಸಿದ್ದಾರೆ.

ಜೆಡಿಎಸ್‌-ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತ ಗಳಿಸಿದ್ದು ಹೇಗೆ?
ಮೋದಿ ಅಲೆ, ಮೋದಿಯವರಲ್ಲಿ ಜನತೆ ಇಟ್ಟಿರುವ ನಂಬಿಕೆ, ರಾಷ್ಟ್ರೀಯ ವಿಚಾರಗಳು, ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದರಿಂದ ಪಕ್ಷ ಭೇದ ಮರೆತು ಎಲ್ಲರೂ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಿದರು.

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.