ಸುಶಿಕ್ಷಿತರಾದರೆ ಬಾಲ್ಯವಿವಾಹ ನಿರ್ಮೂಲನೆ


Team Udayavani, Jun 3, 2019, 3:00 AM IST

sushikhita

ಪಾತಪಾಳ್ಯ: ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದು, ಸುಶಿಕ್ಷಿತರಾದಲ್ಲಿ ಬಾಲ್ಯ ವಿವಾಹದಂತಹ ಅನಿಷ್ಟ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಕಿರಿಯ ಆರೋಗ್ಯ ಸಹಾಯಕಿ ಜೀನತ್‌ ತಿಳಿಸಿದರು.

ಗರಿಗಿರೆಡ್ಡಿಪಾಳ್ಯದಲ್ಲಿ ಟಿ.ಡಿ.ಎನ್‌.ಹೆಚ್‌.ಎಲ್‌. ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ಬಾಲ್ಯ ವಿವಾಹಿತ ಹೆಣ್ಣು ಮಕ್ಕಳ ಗರ್ಭದಾರಣೆ ಮುಂದೂಡಿಕೆಯ ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅಂಧಶ್ರದ್ಧೆಗೊಳಗಾಗಿ ಬಾಲ್ಯ ವಿವಾಹ ನಡೆಸಲಾಗುತ್ತಿದೆ.

ಮಕ್ಕಳ ಬಾಲ್ಯ ಕಸಿದುಕೊಳ್ಳಲಾಗುತ್ತಿದೆ: ಬಾಲ್ಯ ವಿವಾಹ ಪದ್ಧತಿಯು ಮಕ್ಕಳ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಈ ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸ್ವಾತಂತ್ರ ಪೂರ್ವದಿಂದಲೂ ಅನೇಕ ಮಹನೀಯರು ಹೋರಾಟ ನಡೆಸುತ್ತಾ ಬಂದಿದ್ದಾರೆ. ವೈವಾಹಿಕ ಬಂಧನದ ಬಗ್ಗೆ ಅರಿವು ಹೊಂದಿಲ್ಲದ ಮಕ್ಕಳನ್ನು ವಿವಾಹ ಬಂಧನಕ್ಕೆ ದೂಡುವುದರ ಮೂಲಕ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದರು.

ಮಾನಸಿಕ ದೌರ್ಬಲ್ಯ: ಶಾರೀರಿಕವಾಗಿ ಬೆಳವಣಿಗೆ ಹೊಂದಿಲ್ಲದ ಹೆಣ್ಣು ಮಕ್ಕಳು ಬೇಗ ಮಕ್ಕಳನ್ನು ಹೆಡೆಯುವುದರಿಂದ ತಾಯಿ ಶಿಶುವಿನ ಮರಣ ಪ್ರಮಾಣ ಹೆಚ್ಚಾಗಿದೆ. 18 ವರ್ಷಕ್ಕೂ ಮೊದಲು ಹೆಣ್ಣು ಮಕ್ಕಳಲ್ಲಿ ಶಾರೀರಿಕ ಬೆಳವಣಿಗೆ ಆಗಿರುವುದಿಲ್ಲ. ಇದಕ್ಕೂ ಮೊದಲೇ ಮದುವೆ ಮಾಡಿಸುವುದರಿಂದ ಇವರಿಗೆ ಹುಟ್ಟುವ ಮಗು ಉತ್ತಮ ಆರೋಗ್ಯ ಹೊಂದಲು ಸಾಧ್ಯವಿಲ್ಲ. ಆ ಹೆಣ್ಣು ಮಕ್ಕಳೂ ಮಾನಸಿಕವಾಗಿ ದೌರ್ಬಲ್ಯಕ್ಕೆ ಒಳಗಾಗುತ್ತಾರೆ.

ಶಾಲೆ ಬಿಡುವ ಹೆಣ್ಣು ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತದೆ. ಮದುವೆ ಎಂಬ ವೈವಾಹಿಕ ಜೀವನದ ಬಗ್ಗೆ ಅರಿಯುವುದರ ಮೊದಲೇ ವಿದವೆಯಾಗುತ್ತಾರೆ. ಗಂಡಿಗೆ 21 ವರ್ಷ, ಹೆಣ್ಣಿಗೆ 18 ವರ್ಷ ಕನಿಷ್ಟ ವಯೋಮಿತಿಯನ್ನು ನಿಗದಿಗೊಳಿಸಿ ಕಾಯ್ದೆ ಜಾರಿಗೊಳಿಸಿದೆ. ಬಾಲ್ಯ ವಿವಾಹ ಪದ್ಧತಿಯನ್ನು ನಿಷೇಧಿಸಿ ಕಾಯ್ದೆ ಜಾರಿಗೊಳಿಸಿದ್ದರೂ ನಡೆಯುತ್ತಿವೆ. ಈ ಅನಿಷ್ಟ ಪಿಡುಗನ್ನು ತೊಲಗಿಸಬೇಕಾಗಿದೆ.

ಈ ಬಗ್ಗೆ ಸಂಘ ಸಂಸ್ಥೆಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸಮುದಾಯ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದರು. ಟಿ.ಡಿ.ಎನ್‌.ಹೆಚ್‌.ಎಲ್‌.ಸಂಸ್ಥೆಯ ಜಿಲ್ಲಾ ಸಂಯೋಜಕ ಅಶೋಕ್‌, ಕೌನ್ಸಿಲರ್‌ಗಳಾದ ಎನ್‌.ಮಂಜುಳ, ಭಾರತಿ, ಅಯ್ಯಪ್ಪ, ಮುನಿರಾಜು ಇದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.