![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jun 3, 2019, 10:54 AM IST
ಶಿವಮೊಗ್ಗ/ಸೊರಬ:ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಭಾರೀ ಹಿನ್ನಡೆಯಾಗಿದ್ದು, ಪುರಸಭೆಯ 23 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್, ಬಿಜೆಪಿ 8 ಹಾಗೂ ಪಕ್ಷೇತರರು 3 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ತವರು ಶಿಕಾರಿಪುರದಲ್ಲೇ ಬಿಜೆಪಿಗೆ ಭಾರೀ ಆಘಾತಕಾರಿ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ತೆಕ್ಕೆಯಲ್ಲಿದ್ದ ಶಿಕಾರಿಪುರ ಪುರಸಭೆ ಈ ಬಾರಿ ಕಾಂಗ್ರೆಸ್ ಪಾಲಾಗಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಇದೀಗ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. 3 ಪಕ್ಷೇತರರನ್ನು ಸೆಳೆದುಕೊಂಡು, ಸಂಸದರು, ಶಾಸಕರು ಮತಗಳನ್ನು ಬಳಸಿಕೊಳ್ಳುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ತಂತ್ರಗಾರಿಕೆ ಹೆಣೆದಿದೆ ಎಂದು ವರದಿ ವಿವರಿಸಿದೆ.
ಶಿರಾಳಕೊಪ್ಪ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ ಈ ಬಾರಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಾಲಾಗಿದೆ.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.