“ಜಾತ್ಯತೀತ ನೆಲೆಗಟ್ಟಿನ ಕೆಲಸ ಮೋದಿ ಗೆಲುವಿಗೆ ಕಾರಣ’

Team Udayavani, Jun 4, 2019, 6:00 AM IST

Z-VISHWESHWARA

ಮಡಿಕೇರಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾತ್ಯತೀತ ನೆಲೆಗಟ್ಟಿನ ಆಧಾರದಲ್ಲಿ ಕೆಲಸ ಮಾಡಿದ್ದರಿಂದ ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿದರೂ ಅವರನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಇತರ ಪಕ್ಷಗಳು ಹಿಂದೂ ಧರ್ಮವನ್ನು ಹಿಯ್ನಾಳಿಸಿದ್ದರಿಂದ ಅವರಿಗೆ ದುರ್ಗತಿ ಬಂದಿದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.

ಮೈಸೂರಿನ ಶ್ರೀ ಕೃಷ್ಣ ಧಾಮದ ರಜತೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ರವಿವಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಎಂ.ಎನ್‌.ಗಣೇಶ ಉಪಾಧ್ಯಾಯ ಅವರ ಮನೆಗೆ ಖಾಸಗಿ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಸ್ವಾಮೀಜಿ ಅವರು ಮಾತನಾಡಿದರು.

ಪ್ರಧಾನಿ ನರೆಂದ್ರ ಮೋದಿ ಅವರನ್ನು ವಿರೋಧ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳು ಒಗ್ಗೂಡಿ ಸೋಲಿಸಲು ಶ್ರಮ ವಹಿಸಿದರೂ ಅದು ಫ‌ಲಕಾರಿಯಾಗಲಿಲ್ಲ. ರಾಜ್ಯದಲ್ಲೂ ಕೆಲವು ರಾಜಕಾರಣಿಗಳು ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಹಿಯ್ನಾಳಿಸುತ್ತಿರುವುದು ಸರಿಯಲ್ಲ. ಜಾತ್ಯತೀತ ನೆಲೆಗಟ್ಟಿನ ಮೇಲೆ ಕೆಲಸ ಮಾಡಿದ್ದರಿಂದ ನರೇಂದ್ರ ಮೋದಿ ಅವರಿಗೆ ಜಯ ಲಭಿಸಿದೆ.ಎಂದವರು ಹೇಳಿದರು.

ಉಳಿದ ಪಕ್ಷಕಗಳು ಹಿಂದೂ ಧರ್ಮವನ್ನು ಹಿಯ್ನಾಳಿಸಿದ್ದರಿಂದ ಅವರಿಗೆ ಈ ದುರ್ಗತಿ ಬಂದಿದೆ ಎಂದು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ನುಡಿದರು.

ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದರೆ ಮುಂದಿನ ಚುನಾವಣೆಗಳಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದೂ ಸ್ವಾಮೀಜಿ ಭವಿಷ್ಯ ನುಡಿದರು.

ರಾಜ್ಯ ರಾಜಕಾರಣ ಮಾತ ನಾಡಲು ಬಯಸುವುದಿಲ್ಲ
ರಾಜ್ಯ ರಾಜಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ರಾಜಕಾರಣದ ಬಗ್ಗೆ ತಾನೇನೂ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು.

ಈ ಸಂದರ್ಭ ಮಠದಿಂದ ಅವರ ಶಿಷ್ಯರೂ ಸೇರಿದಂತೆ ಸಮಾರು 20 ಮಂದಿ ಆಗಮಿಸಿದ್ದರು. ಸ್ವಾಮೀಜಿ ಅವರನ್ನು ಪೂರ್ಣಕುಂಭ ಕಲಶದೊಂದಿಗೆ ಬರಮಾಡಿಕೊಳ್ಳಲಾಯಿತು. ಶ್ರೀ ವಿಶ್ವೇಶತೀರ್ಥ ಸ್ವಾಮಿಜಿಯವರು ಎಂ.ಎನ್‌.ಗಣೇಶ ಉಪಾಧ್ಯಾಯ ಅವರ ಕುಟುಂಬದವರಿಗೆ ಆಶೀರ್ವಚನ ನೀಡಿ ಫ‌ಲಾಹಾರ ಸೇವಿಸಿ ಅನಂತರ ಮೈಸೂರಿಗೆ ಪ್ರಯಾಣ ಬೆಳೆಸಿದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.