ಮಹಿಳೆ ಮೇಲೆ ಗುಜರಾತ್ ಶಾಸಕನ ಗೂಂಡಾಗಿರಿ
Team Udayavani, Jun 4, 2019, 6:00 AM IST
ಅಹ್ಮದಾಬಾದ್: ತಮ್ಮ ಪ್ರಾಂತದಲ್ಲಿ ನೀರು ಸರಬರಾಜು ವ್ಯವಸ್ಥೆಯನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಲು ಬಂದಿದ್ದ ಎನ್ಸಿಪಿ ನಾಯಕಿ ನೀತು ತೇಜ್ವಾನಿ ಎಂಬುವರನ್ನು ಗುಜರಾತ್ನ ನರೋಡಾದ ಬಿಜೆಪಿ ಶಾಸಕ ಬಲರಾಮ್ ಥವಾನಿ ಅವರು ತಮ್ಮ ಕಚೇರಿ ಆವರಣದಲ್ಲೇ ಕಪಾಳ ಮೋಕ್ಷ ಮಾಡಿದ್ದಲ್ಲದೆ, ಕೆಳಗೆ ಬಿದ್ದ ಮಹಿಳೆಯನ್ನು ಬೂಟು ಕಾಲಿ ನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಥವಾನಿ ಕ್ಷಮೆ ಕೋರಿದ್ದು, ನೀತು ಅವರ ನಿವಾಸಕ್ಕೆ ತೆರಳಿ ರಾಖಿ ಕಟ್ಟಿಸಿಕೊಂಡು ಬಂದಿರುವುದಾಗಿ ಹೇಳಿಕೊಂಡಿದ್ದಾರೆ.
ನೀತು ಅವರು ಹೇಳುವ ಪ್ರಕಾರ, ಅವರು ಮೊದಲಿಗೆ ಥವಾನಿಯವರ ಸಹೋದರ ಕಿಶೋರ್ ಥವಾನಿ (ಈತ ಕಾರ್ಪೊರೇಟರ್) ಅವರನ್ನು ಭೇಟಿ ಮಾಡಿ ತಮ್ಮ ಪ್ರಾಂತಕ್ಕೆ ನೀರಿನ ಸೌಕರ್ಯ ಪುನರಾರಂಭಿಸಬೇಕೆಂದು ಮನವಿ ಸಲ್ಲಿಸಿದರು. ಆದರೆ, ಅದಕ್ಕೆ ಸಮ್ಮತಿಸದ ಕಿಶೋರ್, ನೀತು ಅವರನ್ನು ನಿಂದಿಸಿದ್ದರು. ಹೀಗಾಗಿ, ನೀತು ಹಾಗೂ ಅವರ ಪತಿ ತಮ್ಮ ಪ್ರಾಂತದ ಕೆಲವು ಮಹಿಳೆಯರ ಜತೆಗೆ ಶಾಸಕರಿಗೆ ಮನವಿ ಸಲ್ಲಿಸಲು ತೆರಳಿದ್ದರು. ಘಟನೆಯನ್ನು ಖಂಡಿಸಿರುವ ಎನ್ಸಿಪಿ, ಶಾಸಕ ಥವಾನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.