ಒಂದೇ ಇಲಾಖೆಯಡಿ ಹಲವು ಯೋಜನೆಗೆ ಚಿಂತನೆ
ನೂತನ ಜಲಶಕ್ತಿ ಸಚಿವಾಲಯ ಆರಂಭಕ್ಕೆ ತೀರ್ಮಾನ | ನದಿ ಜೋಡಣೆಗೆ ಸಿಎಂ ಪ್ರಸ್ತಾವನೆ ಸಲ್ಲಿಸಲಿ: ಜಿಎಸ್‌ಬಿ
Team Udayavani, Jun 4, 2019, 8:29 AM IST
ತುಮಕೂರಿನಲ್ಲಿ ಸಂಸದ ಜಿ.ಎಸ್.ಬಸವರಾಜ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ತುಮಕೂರು: ಕೇಂದ್ರ ಸರ್ಕಾರ ಹೊಸದಾಗಿ ಜಲಶಕ್ತಿ ಸಚಿವಾಲಯ ಆರಂಭಿಸಿ, ನೀರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಯೋಜನೆಯನ್ನು ಒಂದೇ ಇಲಾಖೆ ಅಡಿ ತರುವ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು. ಈ ಮೂಲಕ ದೇಶದ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಕೃಷಿಗೆ ನೀರು ನೀಡಲು ಪ್ರಧಾನ ಮಂತ್ರಿಗಳು ಚಿಂತಿಸಿದ್ದಾರೆ. ಇಂತ ಸಂದರ್ಭದಲ್ಲಿ ನದಿ ಜೋಡಣೆ ಕುರಿತು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಂಸದ ಜಿ.ಎಸ್. ಬಸವರಾಜ್ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನದಿ ಜೋಡಣೆ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರ ತಪಸ್ಸು. ಈ ಯೋಜನೆಯಡಿಯಲ್ಲಿ ದಕ್ಷಿಣ ಭಾರತದಲ್ಲಿ ನದಿ ಜೋಡಣೆಗೆ ಯೋಜನೆ ತಯಾರಾಗುತ್ತಿದೆ. ರಾಜ್ಯದಲ್ಲಿನ ನದಿ ಜೋಡಣೆಯಿಂದ ರೈತರ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಶಾಶ್ವತ ನೀರಾವರಿಗೆ ವಿಶೇಷ ಅಧಿವೇಶನ:ಕುಡಿಯುವ ನೀರು ಮತ್ತು ಕೃಷಿಗೆ ಅನುಕೂಲವಾಗಬೇಕಾದರೆ ನದಿ ಜೋಡಣೆ ಆಗಬೇಕು. ಈ ಒತ್ತಾಯ ನಮ್ಮ ರಾಜ್ಯದಿಂದಲೇ ಮೊದಲು ಪ್ರಾರಂಭವಾಗಬೇಕು. ಹೀಗಾಗಿ ಸಂಸದರ ಹಾಗೂ ಸರ್ವ ಪಕ್ಷಗಳ ಸಭೆ ಕರೆಯಬೇಕು. ಶಾಶ್ವತ ನೀರಾವರಿಗಾಗಿ ವಿಶೇಷ ಅಧಿವೇಶನ ಮಾಡಬೇಕಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಸಚಿವ ಗಜೇಂದ್ರ ಶೇಖಾವತ್ ಅವರನ್ನು ತುಮಕೂರಿಗೆ ಕಾರ್ಯಕ್ರಮಕ್ಕೆ ಕರೆಯಲಾಗುವುದು. ನೀರಾವರಿ ಯೋಜನೆ ಜಾರಿಗೆ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಮಾಡಲಾಗುತ್ತದೆ. ರಾಜ್ಯದ ಸರ್ವ ಧರ್ಮದ ಮಠಾಧೀಶರು ಸಮಾವೇಶದಲ್ಲಿ ಭಾಗವಹಿಸುವರು. ಈಗಾಗಲೇ ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.
ಊರಿಗೊಂದು ಕೆರೆ, ಆ ಕೆರೆಗೆ ನದಿ ನೀರು ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ 2019-20 ಸಾಲಿನ ಬಜೆಟ್‌ನಲ್ಲಿ ಈ ಯೋಜನೆ ಸೇರಿಸಿ ಅನುದಾನ ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮನವಿಪತ್ರ ಸಲ್ಲಿಸಲಾಗಿದೆ ಎಂದರು.
ಹೇಮಾವತಿ ನೀರು ಹಂಚಿಕೆಯಲ್ಲಿ ಅನ್ಯಾಯ: ಹೇಮಾವತಿ ನೀರು ಜಿಲ್ಲೆಗೆ ಬಿಡದಿದ್ದೇ ನನಗೆ ವರದಾನವಾಗಿದೆ. ಹಾಸನದಿಂದ ಜಿಲ್ಲೆಗೆ ಹೇಮಾವತಿ ನೀರಿನ ಹಂಚಿಕೆಯಲ್ಲಾದ ಅನ್ಯಾಯವನ್ನು ಜನರು ಅರಿತುಕೊಂಡಿದ್ದರು. ಇದರಿಂದ ದೇವೇಗೌಡರು ನಿಂತರೂ ನನಗೆ ಜನ ಮತ ನೀಡಿದರು. ಇದು ನೀರಾವರಿ ಬಗ್ಗೆ ಜನತೆಗೆ ಅರಿವು ಮೂಡಿಸಲಾಗಿದೆ.
ರಾಜ್ಯದ ರೈತರಿಗೆ ನೀರು, ವಿದ್ಯುತ್ ಹಾಗೂ ಅವರ ಉತ್ಪನ್ನಕ್ಕೆ ಉತ್ತಮ ಬೆಲೆ ನೀಡಿದರೆ ಯಾವ ಸರ್ಕಾರವೂ ಅವರ ಸಾಲಮನ್ನಾ ಮಾಡುವ ಅವಶ್ಯಕತೆಯಿಲ್ಲ. ರೈತರೇ ಸರ್ಕಾರಕ್ಕೆ ಸಾಲ ನೀಡುತ್ತಾರೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ನಾಗರಾಜ್, ನಟರಾಜ್, ನಗರಸಭೆ ಮಾಜಿ ಅಧ್ಯಕ್ಷೆ ಕಮಲಮ್ಮ ಸೇರಿದಂತೆ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.