ವರ್ಷಪೂರ್ತಿ ಉದ್ಯೋಗ ಖಾತ್ರಿ ಕೊಡಿ
•ಶುದ್ಧ ಕುಡಿಯುವ ನೀರು-ಜಾನುವಾರುಗಳಿಗೆ ಮೇವು ಒದಗಿಸಿ •ಭ್ರಷ್ಟಾಚಾರ ತನಿಖೆಗೆ ತಂಡ ರಚಿಸಲು ಒತ್ತಾಯ
Team Udayavani, Jun 4, 2019, 10:31 AM IST
ಲಿಂಗಸುಗೂರು: ಬರ ಕಾಮಗಾರಿ ಆರಂಭಿಸಲು ಆಗ್ರಹಿಸಿ ಸಿಪಿಐಎಂಎಲ್ ಕಾರ್ಯಕರ್ತರು ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಲಿಂಗಸುಗೂರು: ಬರ ಕಾಮಗಾರಿ ಆರಂಭಿಸಬೇಕು. ವರ್ಷ ಪೂರ್ತಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಸಿಪಿಐ (ಎಂಎಲ್) ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತಾಳಿದೆ. ತಕ್ಷಣ ಬರ ಕಾಮಗಾರಿ ಪ್ರಾರಂಭಿಸಬೇಕು. ಉದ್ಯೋಗ ಖಾತ್ರಿಯಡಿ ವರ್ಷ ಪೂರ್ತಿ ಕೆಲಸ ನೀಡಿ ಗುಳೆ ಹೋಗುವುದನ್ನು ತಡೆಯಬೇಕು. ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಹೀಗಾಗಿ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು. ಜಾನುವಾರುಗಳಿಗೆ ಮೇವು ಒದಗಿಸಬೇಕು. ಬರ ಕಾಮಗಾರಿ ಆರಂಭಿಸಲು ಸರ್ಕಾರದ ಮಾರ್ಗಸೂಚಿ ಬಹಿರಂಗಪಡಿಸಬೇಕು. ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಪಂ ವ್ಯಾಪ್ತಿಯ ನಿಲೋಗಲ್ ಗ್ರಾಮದಲ್ಲಿ ಕುಡಿಯುವ ನೀರಿನ ಹೆಸರಲ್ಲಿ 13 ಲಕ್ಷ ರೂ. ದುರುಪಯೋಗ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಾದ ಭಾರೀ ಭ್ರಷ್ಟಾಚಾರಕ್ಕೆ ಪ್ರಮುಖ ಕಾರಣರಾದ ಜಿಪಂ ಯೋಜನಾಧಿಕಾರಿ ಶರಣಬಸವ ಅವರನ್ನು ತಕ್ಷಣವೇ ಹುದ್ದೆಯಿಂದ ತೆರವುಗೊಳಿಸಿ ಅವರ ಅವಧಿಯಲ್ಲಾದ ಭ್ರಷ್ಟಾಚಾರ ತನಿಖೆ ನಡೆಸಬೇಕು. ಮಾನ್ವಿ ಲೊಯೋಲಾ ಕಾಲೇಜಿನ ವಿದ್ಯಾರ್ಥಿ ಕುಮಾರ ನಾಯಕ ಸಾವಿಗೆ ಕಾರಣರಾದ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ನುರಿತ ವೈದ್ಯರ ನೇತೃತ್ವದಲ್ಲಿ ಕುಮಾರ ನಾಯಕ ಶವ ಮರು ಪರೀಕ್ಷೆ ನಡೆಸಬೇಕು ಎಂಬುದು ಸೇರಿ ಇತರೆ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಿಪಿಐಎಂಎಲ್ ಮುಖಂಡ ಆರ್.ಮಾನಸಯ್ಯ, ತಾಲೂಕು ಕಾರ್ಯದರ್ಶಿ ಶಾಂತಕುಮಾರ, ಎಂ.ಡಿ.ಅಮೀರ್ ಅಲಿ, ಚಿನ್ನಪ್ಪ ಕೊಟ್ರಕಿ, ಜಿ.ಶೇಖರಯ್ಯ, ತಿಪ್ಪರಾಜು ಗೆಜ್ಜಲಗಟ್ಟಾ, ಶಿವಮ್ಮ ವೀರಾಪುರ, ತುಂಗಮ್ಮ, ಶರಣಪ್ಪ ನಿಲೋಗಲ್, ಹುಲಿಗೇಶ ಕೋಠಾ, ದೇವಣ್ಣ ಮಲ್ಲಾಪುರ, ಕೆ.ಆದಪ್ಪ ಗೆಜ್ಜಲಗಟ್ಟಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.