ಪರಿಸರ ದಿನಾಚರಣೆ : ಕೊಡಗಿನಲ್ಲಿ 1 ಲಕ್ಷ ಗಿಡ ನೆಡುವ ಗುರಿ
Team Udayavani, Jun 5, 2019, 6:13 AM IST
ಮಡಿಕೇರಿ: ವಿಶ್ವ ಪರಿಸರ ದಿನಾಚರಣೆಯನ್ನು ಜೂ. 11 ರಂದು ನಗರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಶ್ವ ಪರಿಸರ ದಿನವನ್ನು ಜೂ. 11ರಂದು ನಗರದಲ್ಲಿ ಪರಿಸರ ಜಾಗೃತಿ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರದ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆಯುವುದರ ಜತೆಗೆ ಸರಕಾರೇತರ ಸಂಸ್ಥೆಗಳ ಸಹಕಾರ ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪರಿಸರ ದಿನಾಚರಣೆಯನ್ನು ಹಿಂದಿನ ಬಾರಿಯಂತೆ ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಸೂಚನೆ ನೀಡಿದರು.
ಪರಿಸರ ದಿನಾಚರಣೆಯಂದು ನಗರಸಭೆ ವತಿಯಿಂದ ಸ್ತಬ್ಧಚಿತ್ರ ಏರ್ಪಡಿಸುವುದು, ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವುದು ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಿ. ಶಿವರಾಜು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಮಾತನಾಡಿ, ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಒತ್ತು ನೀಡಬೇಕು. ಜಿಲ್ಲೆಯಲ್ಲಿ ಎಷ್ಟು ಕೆರೆಗಳಿವೆ. ಅವುಗಳ ಸಂರಕ್ಷಣೆ ಬಗ್ಗೆ ಸಮಿತಿ ರಚನೆ ಅಗತ್ಯ ಎಂದು ನೂರುನ್ನೀಸಾ ಅವರು ಹೇಳಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು ಅವರು ಮಾತನಾಡಿ ಅರಣ್ಯ ಇಲಾಖೆಯಿಂದ 1 ಲಕ್ಷ ಗಿಡ ನೀಡಲಾಗುವುದು. ಗಿಡಗಳನ್ನು ಸಂರಕ್ಷಣೆ ಮಾಡುವತ್ತ ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.
ಕಾವೇರಿ ನದಿ ಸ್ವತ್ಛತಾ ಆಂದೋಲನದ ಸಂಚಾಲಕರಾದ ಚಂದ್ರಮೋಹನ್ ಅವರು ಮಾತನಾಡಿ ನದಿ ಪಾತ್ರದಲ್ಲಿ ಹೆಚ್ಚಿನ ಗಿಡ ಬೆಳೆಸಬೇಕು. ಸ್ವತ್ಛತೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಜೂನ್ 11 ರಂದು ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಹಾಗೂ ಜಾಥಾವನ್ನು ಜೂನಿಯರ್ ಕಾಲೇಜಿನಲ್ಲಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಲಾಯಿತು.
ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕಾಶೀನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಎ.ಸಿ. ರವಿಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರೂ, ಸೀಮಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಾದ ಗೀತಾ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ರಾಘವೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ನಗರಸಭೆ ಎಂಜಿನಿಯರ್ ರೀತು ಉಪಸ್ಥಿತರಿದ್ದರು.
ಇಲಾಖೆಗಳ ಸಹಕಾರ ಅಗತ್ಯ
ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಡುವಂತಾಗಬೇಕು. ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಕಾರ ಅಗತ್ಯ ಎಂದು ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರಾದ ಟಿ.ಜಿ.ಪ್ರೇಮಕುಮಾರ್ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.