ಮೊಬೈಲ್ ಟವರ್‌ಗೆ ನೂತನ ನೀತಿ: ಖಾದರ್
Team Udayavani, Jun 5, 2019, 6:10 AM IST
ಮಂಗಳೂರು: ಮೊಬೈಲ್ ಟವರ್ ಅಳವಡಿಕೆಗೆ ಸಂಬಂಧಿಸಿ ನೂತನ ನೀತಿಯನ್ನು ರಾಜ್ಯ ಸರಕಾರ ಜಾರಿಗೆ ತರುತ್ತಿದ್ದು, ಈಗಿರುವವುಗಳನ್ನು ನಿಯಮಬದ್ಧಗೊಳಿಸಲು 3 ತಿಂಗಳ ಕಾಲಾವಕಾಶ ಒದಗಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ-ಕಾಲೇಜು, ಪ್ರಾರ್ಥನಾ ಕೇಂದ್ರ, ಆಸ್ಪತ್ರೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಿಗದಿತ ದೂರದಲ್ಲಿ ಮೊಬೈಲ್ ಟವರ್ ಅಳವಡಿಸುವಂತೆ ನೂತನ ನೀತಿಯಲ್ಲಿ ಸೂಚಿಸಲಾಗಿದೆ ಎಂದರು.
ಇನ್ನು ಮುಂದೆ ಟವರ್ ಅಳವಡಿಕೆಗೆ ಸ್ಥಳೀಯಾಡಳಿತದಿಂದ ಅನುಮತಿ ಪಡೆದು, ನೋಂದಣಿ ಮಾಡಿಕೊಂಡು ನಿಗದಿತ ದರ ಪಾವತಿಸಬೇಕು. ಕಟ್ಟಡ ಯೋಜನಾ ಪ್ರಾಧಿಕಾರದ ಅನುಮತಿಯೂ ಬೇಕು. ನಿಯಮ ಪ್ರಕಾರ ಇಲ್ಲದಾಗ ಸಾರ್ವಜನಿಕರು ಅಂಥವನ್ನು ಸ್ಥಗಿತಗೊಳಿಸುವ ಅಧಿಕಾರ ಹೊಂದಿರುತ್ತಾರೆ ಎಂದರು.
ನಿಯಮ ಮೀರಿ ಭೂಮಿ ನೀಡಿಲ್ಲ
ಸರಕಾರಿ ಭೂಮಿಯನ್ನು ಕೈಗಾರಿಕೆಗೆ ಕಡಿಮೆ ದರದಲ್ಲಿ ನೀಡಲಾಗಿದೆ ಎಂಬ ಕೋಟ ಶ್ರೀನಿವಾಸ ಪೂಜಾರಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಖಾದರ್, ಸರಕಾರ ನಿಯಮ ಮೀರಿ ಜಾಗವನ್ನು ಕೈಗಾರಿಕೆಗಳಿಗೆ ನೀಡಿಲ್ಲ. ವಿಪಕ್ಷ ನಾಯಕರೂ ಆಗಿರುವ ಅವರು ಆರೋಪ ಮಾಡುವಾಗ ಮಾಹಿತಿ ಪಡೆದಿರಬೇಕು. ಸುಮಾರು 10 ವರ್ಷಗಳ ಹಿಂದೆ ಬರಡು ಭೂಮಿಯನ್ನು ಕೈಗಾರಿಕೆ ನಿರ್ಮಾಣಕ್ಕೆ ನೀಡಲು ಸರಕಾರ ಮುಂದಾದಾಗ ಹಲವುಕೈಗಾರಿಕೆಗಳು ಅದನ್ನು ತಿರಸ್ಕರಿಸಿದ್ದವು. ಜೆಎಸ್‌ಡಬ್ಲ್ಯು ಸಂಸ್ಥೆ ಅದನ್ನು ಕೋರಿದಾಗ ಲೀಸ್ ಕಂ ಸೇಲ್ ಆಧಾರದಲ್ಲಿ ಹೆಕ್ಟೇರ್‌ಗೆ 1,22,195 ರೂ. ದರದಲ್ಲಿ ಒದಗಿಸಲಾಗಿತ್ತು. ಬಳಿಕ 2005ರ ಜ.15ರಂದುಕೈಗಾರಿಕೆಯಿಂದ ಉದ್ಯೋಗ ಸೃಷ್ಟಿ ಮತ್ತುಯುವ ಸಮೂಹಕ್ಕೆ ಪ್ರಯೋಜನ ಎಂಬ ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ಭೂಮಿಯನ್ನು ಎಕರೆಗೆ 90,000 ರೂ.ನಂತೆ ಆ ಸಂಸ್ಥೆಗೆ ನೀಡಲಾಗಿತ್ತು. ಕೆಲವು ರಾಜ್ಯಗಳಲ್ಲಿ ಕೈಗಾರಿಕೆಗಳಿಗೆ ಭೂಮಿಯನ್ನು ಉಚಿತವಾಗಿ ನೀಡಲಾಗುತ್ತದೆ. ಗುಜರಾತ್‌ನಲ್ಲಿ ನ್ಯಾನೋ ಕಂಪೆನಿಗೆ ಹಾಗೆ ನೀಡಿದ ಉದಾಹರಣೆ ಇದೆ ಎಂದರು.
ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸಂಬಂಧಿಸಿ ಸಾಕಷ್ಟು ಬೇಡಿಕೆ ಇದೆ. ಆದರೆ ಸದ್ಯ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಕೊಠಡಿ ಮತ್ತು ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಬೇಕಾಗಿರುವುದರಿಂದ ಎಲ್ಲ ಶಾಲೆಗಳಲ್ಲಿ ಎರಡು ಮೂರು ಬ್ಯಾಚ್‌ಗಳಲ್ಲಿ ತರಗತಿ ಆರಂಭಿಸಲು ಕಷ್ಟಸಾಧ್ಯ. ಹಾಗಾಗಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಮೂಲ ಸೌಕರ್ಯಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಈಶ್ವರ್ ಉಳ್ಳಾಲ್, ಸದಾಶಿವ ಉಳ್ಳಾಲ, ಪದ್ಮನಾಭ ನರಿಂಗಾನ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.