ಗಾಂಜಾ ಮಾರಾಟ ಯತ್ನ: ಆರೋಪಿ ಪೊಲೀಸ್ ವಶ
Team Udayavani, Jun 5, 2019, 6:00 AM IST
ಬಂಟ್ವಾಳ: ಬಿ. ಮೂಡ ಗ್ರಾಮದ ತಲಪಾಡಿ ದುರ್ಗಾ ಗ್ಯಾರೇಜ್ ಸನಿಹ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಜೂ. 4ರಂದು ಬಂಧಿಸಿದ್ದಾರೆ. ಆತನಿಂದ 1.896 ಕೆ.ಜಿ. ಗಾಂಜಾ, ಒಂದು ಮೊಬೈಲ್, 110 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 40 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಸಂಶುದ್ದೀನ್ (25) ಆರೋಪಿ. ಖಚಿತ ಮಾಹಿತಿಯನ್ನಾಧರಿಸಿ ಆಧರಿಸಿ ಬಂಟ್ವಾಳ ನಗರ ಠಾಣೆಯ ಎಸ್ಐ ಚಂದ್ರಶೇಖರ್ ಮತ್ತು ಸಿಬಂದಿ ಈ ಕಾರ್ಯಾಚರಣೆ ನಡೆಸಿದ್ದರು.
ಆರೋಪಿಯು ಉಳ್ಳಾಲದ ಮಿಸ್ಬಾನಿಂದ ಉಪ್ಪಿನಂಗಡಿಯ ಓರ್ವ ವ್ಯಕ್ತಿಯ ಮೂಲಕ ಗಾಂಜಾವನ್ನು ಪಡೆದು ಮಾರಾಟ ಮಾಡುತ್ತಿರುವುದಾಗಿ ತನಿಖೆಯ ವೇಳೆ ಆರೋಪಿ ಒಪ್ಪಿಕೊಂಡಿದ್ದಾನೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.