ಕಳಪೆ ಬೀಜ ವಿತರಿಸಿದರೆ ಕಠಿಣ ಕ್ರಮ
ರೈತರಿಗೆ ವಂಚಿಸುವ ಕಂಪನಿಗಳ ಹೆಸರು ಕಪ್ಪು ಪಟ್ಟಿಗೆ ಸೇರಿಸಿ: ಕರಿಯಣ್ಣನವರ
Team Udayavani, Jun 5, 2019, 1:05 PM IST
ಹಾವೇರಿ: ಜಿಪಂ ಸಭಾಂಗಣದಲ್ಲಿ ಜಿಪಂ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಹಾವೇರಿ: ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾವಹಿಸಬೇಕು. ಅಂತಹ ಪ್ರಕರಣಗಳು ಕಂಡುಬಂದರೆ ಕಳಪೆ ಬಿತ್ತನೆ ಬೀಜ ಉತ್ಪಾದನೆ ಹಾಗೂ ಮಾರಾಟ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೆಲವೆಡೆ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಾರಾಟಗಾರರು, ಬೀಜ ಉತ್ಪಾದನಾ ಕಂಪನಿಗಳು ಹಾಗೂ ಬೀಜವನ್ನು ಪ್ರಮಾಣಿಕರಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲೆಯ ಕೆಲವು ಭಾಗಗಳಲ್ಲಿ ಅಡಕೆ ಸಸಿಯ ಮೇಲೆ ಕೆಂಪು ರಸ ಉತ್ಪತ್ತಿಯಾಗುವ ರೋಗ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ತೋಟಗಾರಿಕಾ ಅಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ರೋಗ ನಿವಾರಣೆಗೆ ರೈತರಿಗೆ ಸೂಕ್ತ ಸಲಹೆ ನೀಡಬೇಕು. ತೋಟಗಾರಿಕೆ ತಜ್ಞರು ರೈತರ ತೋಟಗಳಿಗೆ ಭೇಟಿ ನೀಡಿ ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಲು ಕ್ರಮವಹಿಸುವಂತೆ ತೋಟಗಾರಿಕೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರಿಗೆ ವಿತರಿಸಿರುವ ನೆರಳು ಪರೆದೆ ಕಳಪೆ ಗುಣಮಟ್ಟದ್ದಾಗಿದೆ ಎಂದು ರೈತರು ದೂರು ನೀಡಿದ್ದಾರೆ. ಈ ಕುರಿತಂತೆ ಪರಿಶೀಲನೆ ನಡೆಸಲು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಕೃಷಿ ಇಲಾಖೆಯಿಂದ ವಿತರಿಸುವ ಕೃಷಿ ಹೊಂಡ, ತಾಡಪಾಲುಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೂಲಕ ವಿತರಣೆಯಾಗಬಾರದು ಎಂದು ಸೂಚಿಸಿದರು.
ಕಳೆದ ಆರ್ಥಿಕ ವರ್ಷದ ಅನುದಾನದಲ್ಲಿ ಜಿಲ್ಲೆಯ ವಿವಿಧ ಇಲಾಖೆಯಡಿ ನಿರ್ಮಾಣವಾಗಿರುವ ಕಟ್ಟಡಗಳ ನಿರ್ಮಾಣದ ಪ್ರಗತಿ ಹಾಗೂ ವೆಚ್ಚವಾದ ಅನುದಾನದ ವಿವರ ಪಡೆದ ಅಧ್ಯಕ್ಷರು, ಇಲಾಖಾವಾರು ಕಟ್ಟಡಗಳ ಪ್ರಗತಿ ಹಾಗೂ ಗುಣಮಟ್ಟ ಕುರಿತಂತೆ ಸ್ಥಳಪರಿಶೀಲನೆ ಮಾಡಲಾಗುವುದು. ಈ ಕುರಿತಂತೆ ದಿನಾಂಕ ನಿಗದಿಪಡಿಸಿ ವಿವರ ಸಲ್ಲಿಸಬೇಕು. ಪೂರ್ಣ ಪ್ರಮಾಣದಲ್ಲಿ ಅನುದಾನ ಬಿಡುಗಡೆಗೊಂಡರೂ ನಿರ್ಮಾಣ ಆರಂಭಿಸದ ಕಟ್ಟಡಗಳನ್ನು ತ್ವರಿತವಾಗಿ ಆರಂಭಿಸಬೇಕು. ನಿವೇಶನ ಇತ್ಯಾದಿ ಸಮಸ್ಯೆಗಳನ್ನು ಇಲಾಖೆ ಮುಖ್ಯಸ್ಥರು ಸಂಬಂಧಿಸಿದವರನ್ನು ಸಂಪರ್ಕಿಸಿ ಸಮಸ್ಯೆ ಪರಿಹರಿಸಲು ಸಲಹೆ ನೀಡಿದರು.
ಕಾಲುವೆಯಲ್ಲಿ ನೀರು ಹರಿಸಿದಾಗ ಜನ ಜಾನುವಾರುಗಳು ಆಕಸ್ಮಿಕ ಕಾಲು ಜಾರುವಿಕೆಯಿಂದ ಕೊಚ್ಚಿಹೋಗಿ ಸಾವಿಗಿಡಾಗುತ್ತಿರುವ ಘಟನೆಗಳು ಈ ಭಾಗದಲ್ಲಿ ಪುನರಾವರ್ತನೆಯಾಗುತ್ತಿವೆ. ಕಾಲುಜಾರಿ ಬಿದ್ದಾಗ ಸಮೀಪದಲ್ಲೇ ವ್ಯಕ್ತಿ ಅಥವಾ ಜಾನುವಾರುಗಳ ಶೋಧನೆಗೆ ಅನುಕೂಲವಾಗಲು ಕಬ್ಬಿಣದ ತಡೆಗೋಡೆಗಳನ್ನು ಕಾಲುವೆ ಅಡ್ಡಲಾಗಿ ನಿರ್ಮಿಸಬೇಕು. ಬಟ್ಟೆ ತೊಳೆಯಲು, ಜಾನುವಾರು ನೀರು ಕುಡಿಯಲು ತೊಟ್ಟಿ ವ್ಯವಸ್ಥೆ ಮಾಡಬೇಕು. ಕಾಲುವೆಯ ಬದುಗಳಲ್ಲಿ ಬೆಳೆದಿರುವ ಜಾಲಿ ಇತರ ಗಿಡಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.
ಗ್ರಾಮ ವಿಕಾಸ ಯೋಜನೆಯಡಿ ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗ ಹಾಗೂ ಕೆಆರ್‌ಐಡಿಎಲ್ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ವಿವರ ಪಡೆದ ಅವರು ಆಯ್ಕೆಯಾದ ಕೆಲ ಗ್ರಾಮಗಳಲ್ಲಿ ಇನ್ನೂ ಕಾಮಗಾರಿ ಆರಂಭಿಸದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಭರಡಿ ಹಾಗೂ ಹುರಳಿಹಾಳ ಗ್ರಾಮಗಳಲ್ಲಿ ಗ್ರಾಮ ವಿಕಾಸ ಯೋಜನೆ ಆರಂಭಿಸಲು ಸಹಕರಿಸದ ಪಿಡಿಒಗೆ ನೋಟಿಸ್ ಜಾರಿಮಾಡಲು ಸೂಚಿಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಹೊಸ ವಿದ್ಯಾರ್ಥಿಗಳ ಪ್ರವೇಶ ಪೂರ್ಣಗೊಂಡನಂತರ ಯಾವ ಯಾವ ತಾಲೂಕಿನ ಕಾಲೇಜು ವಿದ್ಯಾರ್ಥಿ ನಿಲಯಗಳ ಪ್ರವೇಶ ಸಂಖ್ಯೆ ನಿಗದಿತ ಪ್ರಮಾಣದಲ್ಲಿ ಆಗದಿದ್ದರೆ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೆ ಜಿಲ್ಲಾ ಕೇಂದ್ರಕ್ಕೆ ಈ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಹಿಳೆಯರಿಗೆ, ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ಒಳಗೊಂಡಂತೆ ವಿವಿಧ ವರ್ಗಗಳಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಸಕಾಲಕ್ಕೆ ಆಯಾ ವರ್ಗದ ಜನರಿಗೆ ತಲುಪಬೇಕು. ಆಯಾ ವರ್ಷವೇ ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಬೇಕು. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಈ ಕುರಿತಂತೆ ತ್ವರಿತವಾಗಿ ಕ್ರಮವಹಿಸಬೇಕು. ಜನಪ್ರತಿನಿಧಿಗಳ ನೇತೃತ್ವದಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ನಿರಂತರ ಸಂಪರ್ಕದೊಂದಿಗೆ ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಯೊಂದಿಗೆ ಸಂಪರ್ಕ ಸಾಧಿಸಿ ಅನುದಾನ ಬಿಡುಗಡೆ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆ 2018-19 ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ, ಅನುದಾನ ಬಳಕೆ ಕುರಿತಂತೆ ವಿವರವಾಗಿ ಪರಿಶೀಲನೆ ನಡೆಸಿದರು. ಜಿಪಂ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ದುಗ್ಗತ್ತಿ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಾರುತಿ ರಾಠೊಡ, ಜಿಪಂ ಕೃಷಿ ಹಾಗೂ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಚವ್ಹಾಣ, ಜಿಪಂ ಉಪಕಾರ್ಯದರ್ಶಿ ಗೋವಿಂದಸ್ವಾಮಿ, ಸಿಪಿಒ ಕುಮಾರ ಮಣ್ಣವಡ್ಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.