ಸ್ಕ್ಯಾನಿಂಗ್ ಸೆಂಟರ್‌ಗೆ ಸಿಸಿಟಿವಿ ಕಡ್ಡಾಯ
ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
Team Udayavani, Jun 5, 2019, 1:39 PM IST
ಕಾರವಾರ: ಡಿಸಿ ಡಾ| ಹರೀಶಕುಮಾರ್ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಸಭೆ ನಡೆಯಿತು.
ಕಾರವಾರ: ಗರ್ಭಧಾರಣೆ ಮತ್ತು ಭ್ರೂಣಲಿಂಗ ಪತ್ತೆ ವಿಧಾನಗಳ ನಿಷೇಧ ಕಾಯ್ದೆ ಅನ್ವಯ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕಿದ್ದು ಅದರ ಚಿತ್ರಣಗಳ ಸಂಗ್ರಹ ಕೇಂದ್ರೀಕೃತ ವಾಗಿರ ಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್ ಡಿಎಚ್ಒಗೆ ಸೂಚಿಸಿದ್ದಾರೆ.
ಗರ್ಭಧಾರಣೆ ಮತ್ತು ಭ್ರೂಣಲಿಂಗ ಪತ್ತೆ ವಿಧಾನಗಳ ನಿಷೇಧ ಕಾಯ್ದೆ (ಪಿಸಿಪಿಎನ್‌ಡಿಟಿ) ಜಿಲ್ಲಾ ಮಟ್ಟದ ಸಮಿತಿ ಸೇರಿದಂತೆ ಆರೋಗ್ಯ ಇಲಾಖೆ ಸಂಬಂಧಿಸಿದ ವಿವಿಧ ವಿಭಾಗಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಯಮಾನುಸಾರ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸಿಸಿಟಿವಿ ಅಳವಡಿಸಿರಬಹುದು, ಆದರೆ ಅಲ್ಲಿ ದಾಖಲಾಗುವ ಚಿತ್ರಣವನ್ನು ಯಾರು ಪರಿಶೀಲಿಸುತ್ತಾರೆ ಎಂದು ಪ್ರಶ್ನಿಸಿದ ಜಿಲ್ಲಾಧಿಕಾರಿಯವರು ಎಲ್ಲ ಸೆಂಟರ್‌ಗಳ ಸಿಸಿಟಿವಿ ದಾಖಲಿಸಿದ ಚಿತ್ರಣವನ್ನು ಒಂದೇ ಕಡೆ ವೀಕ್ಷಿಸುವ ಹಾಗೂ ದಾಖಲಿಸುವಂತೆ ವ್ಯವಸ್ಥೆ ಮಾಡಲು ಸೂಚಿಸಿದರು.
ಗರ್ಭಧಾರಣೆ ಮತ್ತು ಭ್ರೂಣಲಿಂಗ ಪತ್ತೆ ವಿಧಾನಗಳ ನಿಷೇಧ ಕಾಯ್ದೆ ಸಮರ್ಪಕವಾಗಿ ಅನುಷ್ಠಾನವಾಗಬೇಕು ಎಂದ ಅವರು, ಯಾರು ಕಾಯ್ದೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಾರೋ ಆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಪರವಾನಗಿ ನವೀಕರಿಸಬೇಕು ಎಂದು ತಿಳಿಸಿದರು.
ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಮಹಿಳಾ ಸದಸ್ಯರು ಹೆಚ್ಚಿನ ಪ್ರಮಾಣದಲ್ಲಿ ಇರುವಂತೆ ಜಿಲ್ಲಾ ಮಟ್ಟದ ಸಮಿತಿಯನ್ನು ಕ್ರಿಯಾಶೀಲ ಸದಸ್ಯರನ್ನೊಳಗೊಂಡಂತೆ ಪುನಾರಚಿಸಲು ಸೂಚಿಸಿದ ಅವರು, ಸಮಿತಿಯ ಸದಸ್ಯರು ಕನಿಷ್ಠ ಎರಡು ತಿಂಗಳಿಗೊಮ್ಮೆಯಾದರೂ ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅದರ ವರದಿಯನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಚರ್ಚಿಸುವಂತಾಗಬೇಕು ಎಂದು ಅವರು ತಿಳಿಸಿದರು.
ಸುರಕ್ಷಿತ ಹೆರಿಗೆ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ವ್ಯಾಪಕ ಪ್ರಚಾರದ ಅಗತ್ಯವಿದೆ ಎಂದ ಜಿಲ್ಲಾಧಿಕಾರಿಯವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗೆ ಪ್ರೋತ್ಸಾಹಿಸುವ ಸಂಬಂಧ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ-ಮಗುವಿನ ಸುರಕ್ಷೆ ಅತಿಮುಖ್ಯ ಎಂದು ಅವರು ತಿಳಿಸಿದರು.
ಎಚ್ಐವಿ ಸೋಂಕು, ಕ್ಷಯರೋಗ, ಕುಷ್ಠರೋಗ, ಅಂಧತ್ವ ಇತ್ಯಾದಿ ರೋಗಗಳ ನಿಯಂತ್ರಣ ಕಾರ್ಯಕ್ರಮಗಳೂ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದು ಸೂಚಿಸಿದ ಅವರು, ಮುಂಗಾರು ಆರಂಭವಾಗುತ್ತಿರುವುದರಿಂದ ಮಳೆಗಾಲದಲ್ಲಿ ಸಂಭವಿಸಬಹುದಾದ ರೋಗಗಳ ಬಗ್ಗೆ ಮುಂಚಿತವಾಗಿಯೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಡಿಎಚ್ಒ ಡಾ| ಜಿ.ಎನ್. ಅಶೋಕ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜೇಂದ್ರ ಬೇಕಲ್, ಡಾ| ಶಿವಾನಂದ ಸೇರಿದಂತೆ ವಿವಿಧ ವಿಭಾಗಗಳ ಆರೋಗ್ಯಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಾಂಕ್ರಾಮಿಕ ರೋಗಗಳು ಹಾಗೂ ಇನ್ನಿತರ ಕೀಟಜನ್ಯ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ನೌಕಾನೆಲೆ ಆಸ್ಪತ್ರೆ ಮುಖ್ಯಸ್ಥರೊಂದಿಗೆ ಸಹಕಾರ ಪಡೆಯಬೇಕು ಎಂದು ಅವರು ನೌಕಾನೆಲೆಯಲ್ಲಿ ವಿವಿಧ ಖಾಸಗಿ ಕಂಪನಿಗಳು ವಿವಿಧ ಕಾಮಗಾರಿ ಹೆಸರಿನಲ್ಲಿ ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರನ್ನು ಕರೆ ತರುತ್ತವೆ. ಅವರೊಂದಿಗೆ ಕೆಲವು ರೋಗಗಳ ವೈರಾಣುಗಳು ಇಲ್ಲಿ ಹರಡುವ ಸಾಧ್ಯತೆ ಇರುವುದರಿಂದ ನೌಕಾನೆಲೆ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಕ್ರಮ ರೂಪಿಸಬೇಕಿದೆ.
•ಡಾ| ಹರೀಶಕುಮಾರ್
ಜಿಲ್ಲಾಧಿಕಾರಿ, ಉತ್ತರ ಕನ್ನಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.