ಇನ್ನುಳಿದ ನಾಲ್ಕು ವರ್ಷ ಸಿದ್ದು ಸಿಎಂ ಆಗಲಿ: ಇಕ್ಬಾಲ್ ಅನ್ಸಾರಿ
Team Udayavani, Jun 6, 2019, 3:00 AM IST
ಗಂಗಾವತಿ: ಮೊದಲ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದು, ಉಳಿದ ಅವ ಧಿಗೆ ಸಿದ್ದರಾಮಯ್ಯ ಸಿಎಂ ಆಗಬೇಕೆನ್ನುವುದರಲ್ಲಿ ತಪ್ಪಿಲ್ಲ. ಅವರನ್ನು ಸಿಎಂ ಮಾಡುವ ಮೂಲಕ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲು ಮೈತ್ರಿ ಪಕ್ಷಗಳ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಇದನ್ನು ಸಹಜವಾಗಿ ಸ್ವೀಕರಿಸಬೇಕು ಎಂದರು.
ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ರೋಷನ್ ಬೇಗ್ ಟೀಕಿಸಿದ್ದು ಸರಿಯಲ್ಲ. ಹಿಂದುಳಿದ ಮತ್ತು ಮುಸ್ಲಿಂ ಬಡ ಸಮಾಜಗಳ ಏಳ್ಗೆಗಾಗಿ ಚಿಂತಿಸುವ ಬಹುದೊಡ್ಡ ನಾಯಕ ಸಿದ್ದರಾಮಯ್ಯ. ಅಂತವರನ್ನು ಕ್ಷುಲ್ಲಕ ಕಾರಣಕ್ಕೆ ಟೀಕಿಸುವ ಮೂಲಕ ಬೇಗ್ ಸಣ್ಣವರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅವರು ಇಂತಹ ಟೀಕೆ ಮಾಡುತ್ತಿದ್ದಾರೆ.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟರೆ ನೀಡಲು ಸಾಧ್ಯವಿಲ್ಲ. ಬೇಗ್ ಅವರಿಗೆ ವಯಸ್ಸಾಗಿದ್ದು ವಯಸ್ಸಿಗೆ ತಕ್ಕಂತೆ ಬುದ್ಧಿಯೂ ಬೆಳೆಯಬೇಕಿದೆ. ಕೆಲವರು ಸಿದ್ದರಾಮಯ್ಯ ಮೇಲೆ ಮುಗಿ ಬೀಳುವ ಯತ್ನ ನಡೆಸಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಸಿದ್ದರಾಮಯ್ಯ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.