ಐಸಿಸ್ ಸೇರಿದ್ದ ಕೇರಳಿಗರು ಸ್ವದೇಶಕ್ಕೆ?
Team Udayavani, Jun 6, 2019, 6:10 AM IST
ಕಾಸರಗೋಡು: ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳಿ ಇಸ್ಲಾಮಿಕ್ ಸ್ಟೇಟ್(ಐಸಿಸ್) ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ಕಾಸರಗೋಡಿನ ಕೆಲವರು ಸ್ವದೇಶಕ್ಕೆ ವಾಪಸಾಗುವ ಇಚ್ಛೆ ವ್ಯಕ್ತಪಡಿಸಿದ್ದು, ಅವರ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ತ್ರಿಕ್ಕರಿಪುರದ ಇಳಂಬಚ್ಚಿಯ ಫಿರೋಜ್, ಮತ್ತಿಬ್ಬರು ಒಂದೂವರೆ ತಿಂಗಳ ಹಿಂದೆ ಕಾಸರಗೋಡಿನಲ್ಲಿನ ತಮ್ಮ ಸಂಬಂಧಿಕರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದು, ತಮಗೆ ಕೇರಳಕ್ಕೆ ವಾಪಸಾಗುವ ಇಚ್ಛೆಯಿದೆ ಎಂದಿದ್ದಾರೆ ಎನ್ನಲಾಗಿದೆ. ಈ ಮೂವರು ಕೂಡ ಸದ್ಯ ಸಿರಿಯಾದಲ್ಲಿದ್ದಾರೆ.
ಕಾಸರಗೋಡಿನ ಪೀಸ್ ಪಬ್ಲಿಕ್ ಸ್ಕೂಲ್ ಉದ್ಯೋಗಿ ಆಗಿದ್ದ ಫಿರೋಜ್, 2016ರಲ್ಲಿ ಐಸಿಸ್ ಸೇರಲೆಂದು ಕೇರಳವನ್ನು ತೊರೆದಿದ್ದ. ತನ್ನ ಸಹೋದ್ಯೋಗಿ ಅಬ್ದುಲ್ ರಶೀದ್ ನೇತೃತ್ವದಲ್ಲಿ ಕಾಸರಗೋಡಿನ 19 ಸಹಿತ 21 ಜನರ ತಂಡದೊಂದಿಗೆ ಸಿರಿಯಾದತ್ತ ಪ್ರಯಾಣ ಬೆಳೆಸಿದ್ದ. ಕೇರಳದಲ್ಲಿ ಐಸಿಸ್‌ಗೆ ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದ್ದ ಅಬ್ದುಲ್ ರಶೀದ್ ಈಚೆಗೆ ಅಫ್ಘಾನಿಸ್ಥಾನದಲ್ಲಿ ಅಮೆರಿಕದ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದ. ಒಟ್ಟು 13 ಜನ ಸತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಐಸಿಸ್ ಉಗ್ರರನ್ನು ಗುರಿಯಾಗಿಸಿಕೊಂಡು ಸತತ ದಾಳಿ ನಡೆಯುತ್ತಿರುವ ಕಾರಣ, ಫಿರೋಜ್ ಸಹಿತ ಅನೇಕ ಯುವಕರು ಮತ್ತೆ ಸ್ವದೇಶಕ್ಕೆ ಮರಳಲು ಮನಸ್ಸು ಮಾಡಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
MUST WATCH
ಹೊಸ ಸೇರ್ಪಡೆ
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.