ನೇಣಿನ ಕುಣಿಕೆಗೆ ಕೊರಳೊಡ್ಡಿ ಗ್ರಾಮಸ್ಥರ ಪ್ರತಿಭಟನೆ

•ನೀರು ಪೂರೈಕೆಗೆ ಆಗ್ರಹ•ನಾಗರಾಳ ಗ್ರಾಪಂ ಎದುರು ಆಕ್ರೋಶ•ಖಾಲಿ ಕೊಡಗಳ ಪ್ರದರ್ಶನ

Team Udayavani, Jun 6, 2019, 9:33 AM IST

bk-tdy-2..

ಬೀಳಗಿ: ನಾಗರಾಳ ಗ್ರಾಮಸ್ಥರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಪಂ ಎದುರು ನೇಣಿನ ಕುಣಿಕೆಗೆ ಕೊರಳೊಡ್ಡಿ ಪ್ರತಿಭಟನೆ ನಡೆಸಿದರು.

ಬೀಳಗಿ: ಗ್ರಾಮದಲ್ಲಿ ಮೀಟರಯುಕ್ತ ನಲ್ಲಿ ಆಳವಡಿಸಿದ್ದರೂ ಕಳೆದ ಒಂದು ತಿಂಗಳಿನಿಂದ ಕುಡಿಯಲು ಹನಿ ನೀರು ಬರುತ್ತಿಲ್ಲ. ಇದರಿಂದ ಸಮಸ್ಯೆಯಾಗಿದೆ. ಕೂಡಲೇ ನೀರು ಪೂರೈಕೆ ಮಾಡಬೇಕು. ಇಲ್ಲವಾದರೆ ನೇಣು ಹಾಕಬೇಕೆಂದು ತಾಲೂಕಿನ ನಾಗರಾಳ ಗ್ರಾಮಸ್ಥರು ಗ್ರಾಪಂ ಎದುರು ನೇಣಿನ ಕುಣಿಕೆಗೆ ಕೊರಳೊಡ್ಡಿ, ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.

ನಮಗೆ ನೀರು ಕೊಡಿ ಎಂದು ಕೇಳಿದರೆ, ಸ್ನಾನ ಮಾಡಿದ್ದೀರಿ. ನೀರು ಸಹ ಕುಡಿಯುತ್ತಿದ್ದೀರಿ. ಹಾಗಾದರೆ, ನಿಮಗೇಕೆ ನೀರು ಬೇಕು ಎಂದು ಗ್ರಾಪಂ ಪಿಡಿಒ ಉಡಾಫೆ ಮಾತನಾಡುತ್ತಾರೆ. ಗ್ರಾಮಸ್ಥರು ಎಂದರೆ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಬೇರೆ ಕಡೆಯಿಂದ ನೀರು ತಂದು ಜೀವನ ಸಾಗಿಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಣ್ಯರೋಧನವಾದ ಗ್ರಾಮಸ್ಥರ ಕೂಗು: ಗ್ರಾಮದ ವಾಸ್ತವ ಸ್ಥಿತಿ ಇಲ್ಲಿನ ಗ್ರಾಪಂ ಪಿಡಿಒ ಗಮನಕ್ಕೆ ಬಂದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಗ್ರಾಮದ 704ನಲ್ಲಿಗಳಿಗೆ ಮೀಟರ್‌ ಅಳವಡಿಸಿ ವರ್ಷ ಗತಿಸಿದೆ. ಆದರೆ, ನಲ್ಲಿಗಳಿಗೆ ಮೀಟರ್‌ ಆರಂಭಿಸಿಲ್ಲ. ಗ್ರಾಮದ ಪ್ರತಿ ನಲ್ಲಿಗೆ 540ರೂ. ವಾರ್ಷಿಕ ತೆರಿಗೆ ತುಂಬಿಸಿಕೊಳ್ಳುತ್ತಾರೆ. ಗ್ರಾಮದ ಕೆಲವರು ಸಾವಿರಾರು ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ ನಿರ್ಮಿಸಿ ನೀರು ಸಂಗ್ರಹಿಸಿಕೊಂಡು ಮಾರಿಕೊಳ್ಳುತ್ತಾರೆ. ಆದರೆ, ನಲ್ಲಿಯ ತೆರಿಗೆಯನ್ನು ಮಾತ್ರ ಎಲ್ಲರೂ ಒಂದೇ ತೆರನಾಗಿ ಕಟ್ಟಬೇಕಾಗಿದೆ. ಇದು ಯಾವ ನ್ಯಾಯ ಎಂದು ಕೇಳಿದರೆ, ನಮ್ಮ ಕೂಗು ಮಾತ್ರ ಅರಣ್ಯರೋಧನವಾಗಿದೆ ಎಂದು ಅಳಲು ತೋಡಿಕೊಂಡರು.

ಗ್ರಾಪಂನಲ್ಲಿ ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ನಿತ್ಯ ಸಾವಿರಾರು ಲೀಟರ್‌ ನೀರು ದುರ್ಬಳಕೆಯಾಗುತ್ತಿದೆ. ಆದರೆ, ಗ್ರಾಮದ 400ನಲ್ಲಿಗಳ ಕೊಳವೆಯಲ್ಲಿ ಒಂದು ಹನಿ ನೀರು ಕೂಡ ಬಾರದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಐದು ಇಂಚಿನ ಕೊಳವೆ ಮಾರ್ಗವಿರುವ ಗ್ರಾಮದ ಒಂದು ಭಾಗಕ್ಕೆ ನೀರು ಸರಬರಾಜು ಸರಿಯಾಗಿ ಆಗುತ್ತದೆ. ಕೇವಲ ಎರಡೂವರೆ ಇಂಚಿನ ಕೊಳವೆ ಮಾರ್ಗವಿರುವ ಗ್ರಾಮದ ಇನ್ನೊಂದು ಭಾಗಕ್ಕೆ ನೀರೇ ಬರುತ್ತಿಲ್ಲ. ಕೇಳಿದರೆ ಸ್ಪಂದಿಸುವ ಅಧಿಕಾರಿಗಳಿಲ್ಲ. ಹೀಗಾದರೆ, ಗ್ರಾಮಸ್ಥರ ಗತಿಯೇನು. ಅಧಿಕಾರಿಗಳಿಗೆ ಇಚ್ಛಾಶಕ್ತಿಯಿದ್ದರೆ ಅಲ್ಪಸ್ವಲ್ಪ ನೀರು ಕೊಡಬಹುದು. ಕಾಣದ ಕೈಗಳ ಷಡ್ಯಂತ್ರದಿಂದ ನೀರು ಸಿಗದಂತಾಗಿದೆ. ನಮಗೆ ನೀರು ಪೂರೈಸುವ ವರೆಗೆ ಗ್ರಾಮದ ಯಾವ ಭಾಗಕ್ಕೂ ನೀರು ಸರಬರಾಜು ಮಾಡಲು ಬಿಡುವುದಿಲ್ಲವೆಂದು ಪಟ್ಟು ಹಿಡಿದು ಪ್ರತಿಭಟಿಸಿದರು.

ಪಿಡಿಒ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಪಿಡಿಒ ಎಂ.ಎನ್‌.ಬೋರಡ್ಡಿ ಮಾತನಾಡಿ,ಗ್ರಾಮದ ಕೆಲವು ಪ್ರದೇಶಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ಕೊಳವೆ ಮಾರ್ಗ ಬದಲಾಯಿಸಿಯಾದರೂ ಕೂಡಲೇ ಸಮರ್ಪಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಸಂಕಣ್ಣನವರ, ಮಾನವ ಹಕ್ಕುಗಳ ಸಾಮಾಜಿಕ ಹೋರಾಟಗಾರ ಶ್ರೀಶೈಲ ಬರಗುಂಡಿ, ರಾಮಣ್ಣ ಕಳಸದ, ಪಡಿಯಪ್ಪ ಬಾಡಗಂಡಿ, ಸದಾಶಿವಪ್ಪ ಕಡ್ಲಿಮಟ್ಟಿ, ಈರಣ್ಣ ವಾಲಿ, ಮಲ್ಲಪ್ಪ ಹಡಪದ, ಡೋಂಗ್ರಿಸಾಬ ಚಿಮ್ಮಲಗಿ, ಈರಣ್ಣ ಮುಂಡಗನೂರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.