ಜಿಲ್ಲಾದ್ಯಂತ ಸಂಭ್ರಮದ ರಂಜಾನ್
ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ •ಪರಸ್ಪರ ಶುಭಾಶಯ ವಿನಿಮಯ
Team Udayavani, Jun 6, 2019, 11:24 AM IST
ಚಿಕ್ಕಮಗಳೂರು: ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮರು ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಚಿಕ್ಕಮಗಳೂರು: ರಂಜಾನ್ ಹಬ್ಬದ ಅಂಗವಾಗಿ ಬುಧವಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಉಪವಾಸ ಕೈಬಿಡುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಿದರು. ನಗರದ ಕೆಂಪನಹಳ್ಳಿಯ ಈದ್ಗಾ ಮೈದಾನ ಮತ್ತು ವಿಜಯಪುರದ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಬಳಿಕ ಧರ್ಮ ಗುರುಗಳು ಮಾತನಾಡಿದರು.
ಸಾಮೂಹಿಕ ಪ್ರಾರ್ಥನೆ ಬಳಿಕ ಪರಸ್ಪರ ಆಲಂಗಿಸುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರೆ ಮಕ್ಕಳು ಹೊಸ ಬಟ್ಟೆ ಧರಿಸಿಕೊಂಡು ಆಗಮಿಸಿದ್ದರು. ಈದ್‌ಗಾ ಮೈದಾನಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಮುಸ್ಲಿಮರಿಗೆ ಹಬ್ಬದ ಶುಭಾಷಯಗಳನ್ನು ಸಲ್ಲಿಸಿದರು. ರಂಜಾನ್ ಒಂದು ಪವಿತ್ರವಾದ ಹಬ್ಬ. ಒಂದು ತಿಂಗಳಿನಿಂದ ಉಪವಾಸ ಆಚರಿಸಿರುವ ನೀವು ಇಂದು ಉಪವಾಸವನ್ನು ಪೂರ್ಣಗೊಳಿಸಿದ್ದೀರಿ. ನಿಮ್ಮ ಎಲ್ಲ ಆಸೆಗಳನ್ನೂ ದೇವರು ಈಡೇರಿಸಲಿ ಎಂದು ಹಾರೈಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಮುಸ್ಲಿಮರಿಗೆ ಶುಭಾಷಯಗಳನ್ನು ಸಲ್ಲಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.