ಮಳೆಗಾಗಿ ಋಷ್ಯಶೃಂಗನಿಗೆ ಡಿಕೆಶಿ ಪರ್ಜನ್ಯ ಪೂಜೆ; ಪರಮೇಶ್ವರ್ ನಾಯ್ಕ್ ಸಾಥ್
Team Udayavani, Jun 6, 2019, 12:05 PM IST
ಚಿಕ್ಕಮಗಳೂರು: ಮಳೆಗಾಗಿ ಪ್ರಾರ್ಥಿಸಿ ಸರ್ಕಾರದ ವತಿಯಿಂದ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಕಿಗ್ಗಾದ ಋಷ್ಯಶೃಂಗೇಶ್ವರ ದೇಗುಲದಲ್ಲಿ ಗುರುವಾರ ವಿಶೇಷ ಪರ್ಜನ್ಯ ಪೂಜೆ ಸಲ್ಲಿಸಿದರು.
ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರತಿ ವರ್ಷದ ಪ್ರತೀತಿಯಂತೆ ಚಿಕ್ಕಮಗಳೂರಿನ ಕಿಗ್ಗಾದ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಪರ್ಜನ್ಯ ಪೂಜೆ ಸಲ್ಲಿಸಿದೆನು ಎಂದು ಸಚಿವಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಸುಮಾರು 2 ಗಂಟೆಗೂ ಕಾಲ ನಡೆದ ವಿಶೇಷ ಪೂಜೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ನಾಯ್ಕ್ ಅವರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದ್ದು, ಜನ , ಜಾನುವಾರುಗಳು ನೀರು ಸಿಗದೆ ಪರದಾಡುತ್ತಿವೆ,ಇನ್ನೊಂದೆಡೆ ಕೆಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ.
ಜೂನ್ 8 ರಂದು ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.