ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚಾದ ಮಾಲಿನ್ಯ


Team Udayavani, Jun 6, 2019, 12:39 PM IST

Udayavani Kannada Newspaper

ಬೆಂಗಳೂರು: ರಾಜ್ಯದ ಬಹುತೇಕ ನದಿಗಳ ನೀರಿನ ಗುಣಮಟ್ಟ ‘ಸಿ’ ವರ್ಗಕ್ಕೆ ಹಾಗೂ ಕೆರೆಗಳ ನೀರಿನ ಗುಣಮಟ್ಟ ‘ಸಿ’ ಮತ್ತು ‘ಇ’ ವರ್ಗಕ್ಕೆ ತಲುಪಿದೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸಿ.ಜಯರಾಂ ಕಳವಳ ವ್ಯಕ್ತಪಡಿಸಿದರು.

ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯಿಂದ ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ 98 ಕೇಂದ್ರಗಳಲ್ಲಿ ನದಿ ನೀರಿನ ಗುಣಮಟ್ಟ ಮಾಪನ ಮಾಡಲಾಗುತ್ತಿದೆ. ಬಹುತೇಕ ಕೇಂದ್ರಗಳಲ್ಲಿ ನೀರಿನ ಗುಣಮಟ್ಟ ಸಿ’ ವರ್ಗಕ್ಕೆ ಒಳಪಟ್ಟಿದ್ದು ಕಂಡು ಬಂದಿದೆ. ನದಿಗಳ ಮಾಲಿನ್ಯ ಮಾಪನಕ್ಕೆ ಸಂಬಂಧಿಸಿದಂತೆ ರಿಯಲ್ ಟೈಮ್‌ ವಾಟರ್‌ ಕ್ವಾಲಿಟಿ ಮಾನಿಟರಿಂಗ್‌ ಮಾಡಲು ಕಾವೇರಿ ನದಿಯ ಸತ್ಯಗಾಲು ಸೇತುವೆ ಹಾಗೂ ಕೃಷ್ಣ ನದಿಯ ರಾಯಚೂರು ಶಕ್ತಿನಗರದ ಬಳಿ 2 ಕೇಂದ್ರ ತೆರೆಯಲಾಗಿದೆ ಎಂದರು.

ರಾಜ್ಯದಲ್ಲಿ 125 ಕೆರೆಗಳ ನೀರಿನ ಗುಣಮಟ್ಟ ‘ಸಿ’ ಮತ್ತು ‘ಇ’ ವರ್ಗಕ್ಕೆ ಇಳಿದಿರುವುದು ಮಾಪನದಿಂದ ದೃಢಪಟ್ಟಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಬಳಸಿದ ನೀರು ಕೆರೆಗೆ ಹೋಗುವುದನ್ನು ತಪ್ಪಿಸಲು 2 ಸಾವಿರ ಚ.ಮೀ ಹಾಗೂ 20 ಮನೆ ಒಳಗೊಂಡ ಅಪಾರ್ಟ್‌ಮೆಂಟ್‌ಗಳಲ್ಲಿ ನೀರು ಸಂಸ್ಕರಣ ಘಟಕ ಸ್ಥಾಪಿಸುವುದನ್ನು ಕಡ್ಡಾಯ ಮಾಡಿದ್ದೇವೆ ಎಂದರು.

ಮಾಲಿನ್ಯ ರೇಖೆ ದಾಟಿದ ನಾಲ್ಕು ನಗರಗಳು: ರಾಜ್ಯದ ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟ ತಿಳಿಯಲು ಬೆಂಗಳೂರಿನಲ್ಲಿ ಏಳು ನಿರಂತರ ವಾಯು ಮಾಪನ ಕೇಂದ್ರ, 14 ಮಾನವ ಚಾಲಿತ ವಾಯು ಮಾಪನ ಕೇಂದ್ರ, ಜಿಲ್ಲೆಗಳಲ್ಲಿ ತಲಾ 22 ನಿರಂತರ ವಾಯು ಮಾಪನ ಕೇಂದ್ರ ಮತ್ತು ಮಾನವ ಚಾಲಿತ ಮಾಪನ ಕೇಂದ್ರ ಸ್ಥಾಪಿಸಲಾಗಿದೆ. ಬೆಂಗಳೂರು, ದಾವಣಗೆರೆ, ಹುಬ್ಬಳಿ-ಧಾರವಾಡ ಹಾಗೂ ಕಲಬುರಗಿ ನಗರಗಳು ವಾಯು ಮಾಲಿನ್ಯ ರೇಖೆ ಮೀರಿವೆ. ಈ 4 ನಗರಗಳ ವಾಯು ಮಾಲಿನ್ಯ ನಿಯಂತ್ರಿಸಲು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ವಾಯು ಗುಣಮಟ್ಟ ಮಾಪನ ಸಮಿತಿ ಹಾಗೂ ಸದಸ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದರು.

ಈ ಮೂರೂ ಸಮಿತಿಗಳಿಗೆ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು 44 ಅಂಶಗಳ ಅಲ್ಪಾವಧಿ ಮತ್ತು ದೀರ್ಘಾವಧಿ ಕಾರ್ಯ ಯೋಜನೆ ಅನುಷ್ಠಾನಕ್ಕೆ ಇಲಾಖೆಗೆ ಸೂಚನೆ ನೀಡಲಾಗಿದೆ. ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಹಾಗೂ ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ 27 ಅಂಶಗಳ ಅಲ್ಪಾವಧಿ, ದೀರ್ಘಾವಧಿ ಯೋಜನೆಗಳ ಅನುಷ್ಠಾನಕ್ಕೆ ಸೂಚನೆ ನೀಡಿದ್ದೇವೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭವಾದ ನಂತರ ಸಾರ್ವಜನಿಕರು ಸ್ವಂತ ವಾಹನ ಬಳಕೆ ಕಡಿಮೆ ಮಾಡಿದ್ದಾರೆ ಮತ್ತು ಆ ಮಾರ್ಗಗಳಲ್ಲಿ ಶೇ.11ರಷ್ಟು ವಾಯು ಮಾಲಿನ್ಯ ಇಳಿಮುಖವಾಗಿದೆ ಎಂದರು.

ಉಪ ಸಭಾಪತಿ ಧರ್ಮೇಗೌಡ, ಸಂಸದ ತೇಜಸ್ವಿ ಸೂರ್ಯ, ಶಾಸಕ ಅಶ್ವಥ್‌ ನಾರಾಯಣ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಅರಣ್ಯ ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸಂಗೀತ ದವೆ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅಜಯ್‌ ಮಿಶ್ರಾ, ಪೋಸ್ಟ್‌ ಮಾಸ್ಟರ್‌ ಜನರಲ್ ಕರ್ನಲ್ ಅರವಿಂದ ವರ್ಮಾ ಉಪಸ್ಥಿತರಿದ್ದರು.

ಸಮಾರಂಭದಲ್ಲಿ 2019ರ ವಿಶ್ವ ಪರಿಸರ ದಿನಾಚರಣೆಯ ಸ್ಮರಣಿಕೆಯಾಗಿ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಿ ಸಾಧಕರಿಗೆ ಪರಿಸರ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಧಿಕಾರಿಗಳ ವಿರುದ್ಧ ಧರ್ಮೇಗೌಡ ಆಕ್ರೋಶ:

ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯದಲ್ಲಿ ಉತ್ತಮ ಮಳೆ ಆಗುವ ಆಗುಂಬೆಯಲ್ಲೂ ಮಳೆ ಕಡಿಮೆಯಾಗಿದೆ. ಭೂಮಿಯ ಸಾರ ಹೀರುವ ನೀಲಗಿರಿ ಮತ್ತು ಅಕೇಶಿಯಾ ಮರಗಳನ್ನು ಅಧಿಕಾರಿಗಳೇ ಬೆಳೆಸುತ್ತಿದ್ದಾರೆ. ಈ ಮೂಲಕ ಇಡೀ ರಾಜ್ಯದಲ್ಲಿ ಬರ ಆವರಿಸಲು ಸಹಕಾರ ಮಾಡುತ್ತಿದ್ದಾರೆ. ಪರಿಸರ ಉಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಇನ್ನಾದರೂ ಆತ್ಮ್ಮಾವಲೋಕನ ಮಾಡಿಕೊಳ್ಳಬೇಕು. ಪರಿಸರ ಉಳಿಸಲು ಕೈಗೊಂಡ ಕಾರ್ಯಕ್ರಮಗಳ ಪ್ರಗತಿಯ ಬಗ್ಗೆ ಅವಲೋಕಿಸಬೇಕು. ಬೆಂಗಳೂರು ನಗರದಲ್ಲಿ ಶೇ.35.1ರಷ್ಟು ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಇದರ ವಿಲೇವಾರಿಯೇ ಸಮಸ್ಯೆಯಾಗಿದೆ. ಇದೆ ಪರಿಸ್ಥಿತಿ ಮುಂದುವರಿದರೆ ಬೆಂಗಳೂರಿನಲ್ಲಿ ಜನಜೀವನ ನಡೆಸಲು ಸಾಧ್ಯವೇ ಎಂದು ಉಪಸಭಾಪತಿ ಧರ್ಮೇಗೌಡ ಪ್ರಶ್ನಿಸಿದರು.

ಟಾಪ್ ನ್ಯೂಸ್

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.