ಗ್ರಾ.ಪಂ. ಸರಕಾರದ ಮಟ್ಟಕ್ಕೆ ಬೆಳೆಯಲಿ
ಬಾಳಿಲ ಗ್ರಾ.ಪಂ. ಕಟ್ಟಡ, ಮಿನಿ ಸಭಾಂಗಣ ಉದ್ಘಾಟನೆಯಲ್ಲಿ ಕೋಟ
Team Udayavani, Jun 7, 2019, 5:50 AM IST
ಬೆಳ್ಳಾರೆ: ಸಮಾಜದ ಬದಲಾವಣೆಯಾಗಬೇಕಾದರೆ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಮತ್ತು ಅವಕಾಶ ಸಿಗುವಂತೆ ಮಾಡುವ ಗ್ರಾ.ಪಂ.ಗಳು ಅಭಿವೃದ್ಧಿಯಾಗಬೇಕು. ಜನರ ಆಶಯ ಗಳನ್ನು ಈಡೇರಿಸುವ ಗ್ರಾ.ಪಂ.ಗಳು ಸ್ಥಳೀಯ ಸರಕಾರದ ಮಟ್ಟಕ್ಕೆ ಬೆಳೆ ದಾಗ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಆರ್.ಜಿ.ಎಸ್.ವೈ. ಅನುದಾನದಿಂದ. ನಿರ್ಮಾಣಗೊಂಡಿರುವ. ಬಾಳಿಲ ಗ್ರಾಮ ಪಂಚಾಯತ್‌ನ ನೂತನ ಮಿನಿ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾ.ಪಂ. ಸದಸ್ಯನ ಮೇಲೆ ಯಾವುದೇ ಸುಳ್ಳು ಆರೋಪದ ಪ್ರಕರಣಗಳು ದಾಖ ಲಾಗುವ ಮೊದಲು ಎಸ್‌ಪಿ ಮಟ್ಟದ ತನಿಖೆಯಾಗಬೇಕು. ಸದಸ್ಯರಿಗೆ ಉಚಿತ ಬಸ್ ಪಾಸ್ ಸಹಿತ ಗ್ರಾ.ಪಂ. ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೋಟ ಹೇಳಿದರು.
ಮನೆಬಾಗಿಲಿಗೆ ಯೋಜನೆ
ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾ ಟಿಸಿ, ನರೇಂದ್ರ ಮೋದಿ ಸರಕಾರ ಬಂದ ಬಳಿಕ ಕೇಂದ್ರ ಸರಕಾರದ ಯೋಜನೆಗಳು ಗ್ರಾ.ಪಂ.ಗಳ ಮೂಲಕ ಜನರ ಮನೆ ಬಾಗಿಲಿಗೆ ತಲುಪಿವೆ. ಗ್ರಾಮ ಸ್ವಾಯತ್ತತೆಗೆ ಮೋದಿ ಸರಕಾರ ವಿಶೇಷ ಯೋಜನೆಗಳನ್ನು ರೂಪಿಸಿದ್ದು, ಉದ್ಯೋಗ ಖಾತರಿ ಯೋಜನೆಯ ಮೊತ್ತವನ್ನು ನೇರವಾಗಿ ಗ್ರಾ.ಪಂ. ಖಾತೆಗೆ ಜಮೆ ಮಾಡುವ ಯೋಜನೆಯನ್ನು ಸರಕಾರ ಮಾಡಿದೆ ಎಂದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾನದಿಂದ ನಿರ್ಮಾಣಗೊಂಡಿರುವ ನೂತನ ಗ್ರಾ.ಪಂ. ಕಟ್ಟಡವನ್ನು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿ, ಶುಭ ಹಾರೈಸಿದರು. ಸುಳ್ಯ ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯರಾದ ಎಸ್.ಎನ್. ಮನ್ಮಥ, ಪುಷ್ಪಾವತಿ ಬಾಳಿಲ, ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್. ರೈ, ತಾ.ಪಂ. ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ. ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಮೂಲೆಮಜಲು,
ಉಪಾಧ್ಯಕ್ಷೆ ಹೇಮಲತಾ ಕಾಯರ, ಸುಳ್ಯ ಪಂಚಾಯತ್‌ರಾಜ್ ಉಪವಿಭಾಗದ ಸಹಾಯಕ ಅಭಿಯಂತರ ಮಣಿಕಂಠನ್, ಕಳಂಜ ಬಾಳಿಲ ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಧಾಕರ ರೈ ಎ.ಎಂ., ಗುತ್ತಿಗೆದಾರ ಶಬೀರ್, ಪಿಜಿಎಸ್‌ಎನ್ ಪ್ರಸಾದ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಕಟ್ಟಡದ ಸ್ಥಳ ದಾನಿ ಕೆದ್ಲ ನರಸಿಂಹ ಭಟ್ ಮತ್ತು ಸಾವಿತ್ರಿ ದಂಪತಿಯನ್ನು ಸಮ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಯು. ರಾಧಾಕೃಷ್ಣ ರಾವ್ ಪ್ರಸ್ತಾವಿಸಿದರು. ರವೀಂದ್ರ ರೈ ಟಪ್ಪಾಲುಕಟ್ಟೆ ಸ್ವಾಗತಿಸಿದರು. ರಮೇಶ್ ರೈ ಅಗಲ್ಪಾಡಿ ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಮತ್ತು ರಾಜೇಶ್ ಅಯ್ಯನಕಟ್ಟೆ ನಿರ್ವಹಿಸಿದರು.
ಒಂದು ಕೋಟಿ ರೂ. ಅನುದಾನ
ಗ್ರಾಮದ ಉತ್ಥಾನಕ್ಕೆ ಆಡಳಿತ ಮತ್ತು ವಿಪಕ್ಷಗಳು ಒಂದಾಗಬೇಕು. ಗ್ರಾಮದ ಅಭಿವೃದ್ಧಿಯಾದಾಗ ಮಾತ್ರ ದೇಶದ ಉದ್ಧಾರ ಸಾಧ್ಯ. ಪ್ರತಿ ಗ್ರಾಮ ಪಂಚಾಯತ್‌ನ ಅಭಿವೃದ್ಧಿಗೆ ಕೇಂದ್ರ ಸರಕಾರ ಒಂದು ಕೋಟಿ ರೂ. ಅನುದಾನ ಒದಗಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.