ಕುತ್ಲೂರು ಸರಕಾರಿ ಶಾಲೆ ಅಭಿವೃದ್ಧಿ ಯಶೋಗಾಥೆ

ದಾಖಲಾತಿ ಏರಿಕೆಗೆ ಶಿಕ್ಷಕರ-ಹೆತ್ತವರ ಸಹಕಾರ

Team Udayavani, Jun 7, 2019, 5:50 AM IST

f-45

ಬೆಳ್ತಂಗಡಿ: ಗಿರಿ ಶಿಖರಗಳ ತಪ್ಪಲಿ ನಂಚಿನಲ್ಲಿರುವ ಕುತ್ಲೂರು ದ.ಕ. ಜಿ.ಪಂ. ಹಿ.ಪ್ರಾ. ಶಾಲೆಗೆ ಮಕ್ಕಳ ಕಲರವದಿಂದ ಕಳೆಬಂದಿದೆ. ಕುತ್ಲೂರು ಪರಿಸರದಲ್ಲಿ ಶಾಲೆಗಳಿಲ್ಲದ ಕಾಲದಲ್ಲಿ ಪಾಂಡೆಪರಗುತ್ತು ಮನೆಯಲ್ಲಿ ವಿದ್ಯಾಭ್ಯಾಸ ನೀಡಲಾಗುತ್ತಿತ್ತು. ಮುಂದೆ 1945ರಲ್ಲಿ ಕುತ್ಲೂರು ದ.ಕ. ಜಿ.ಪಂ. ಕಿ. ಪ್ರಾ. ಶಾಲೆಯಾಗಿ 1ರಿಂದ 5ನೇ ತರಗತಿ ವರೆಗೆ, 2007ರಲ್ಲಿ 1ರಿಂದ 8ನೇ ತರಗತಿವರೆಗೆ ಉನ್ನತೀಕರಿಸಿದ ಶಾಲೆಯಾಗಿ ಮಾರ್ಪಾಡು ಮಾಡಲಾಯಿತು. ಇದೀಗ ಮಕ್ಕಳ ಸಂಖ್ಯೆ ಏರಿಕೆಯಾಗಿದೆ.

ಅವಿರತ ಪರಿಶ್ರಮ
ಶಾಲೆಯ ಉಳಿವಿಗಾಗಿ ಶಿಕ್ಷಕರು ರಜೆ ಮರೆತು ಸ್ಥಳೀಯರೊಡಗೂಡಿ ಮನೆ ಮನೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಇದರ ಫಲವಾಗಿ 2018-19ರ ಸಾಲಿನಲ್ಲಿದ್ದ 46 ಮಕ್ಕಳ ಸಂಖ್ಯೆ ಈ ಬಾರಿ 1ರಿಂದ 8ನೇ ತರಗತಿವರೆಗೆ 70ಕ್ಕೆ ಏರಿಕೆಯಾಗಿದೆ. ಖಾಸಗಿ ಶಾಲೆಗೆ ದಾಖಲಿಸುವ ಇಂಗಿತ ಹೊಂದಿದ್ದ ಹೆಚ್ಚಿನ ಹೆತ್ತವರು ಸರಕಾರಿ ಶಾಲೆ ಉಳಿಸುವ ದೃಷ್ಟಿಯಿಂದ ಮನಸ್ಸು ಬದಲಿಸಿದ್ದಾರೆ. ಇದರಿಂದ ಈ ಬಾರಿ ಒಂದನೇ ತರಗತಿಗೆ 12 ಮಕ್ಕಳು ದಾಖಲಾಗಿದ್ದಾರೆ.

ಪ್ರಸಕ್ತ ವರ್ಷ ಓರ್ವ ಮುಖ್ಯೋಪಾ ಧ್ಯಾಯ, 3 ಸಹ ಶಿಕ್ಷಕರು, 1 ಟಿಜಿಟಿ ಶಿಕ್ಷರು ಸಹಿತ ಶಾಲಾಭಿವೃದ್ಧಿ ಸಮಿತಿಯಿಂದ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ನೆರವಿನಿಂದ 2 ಶಿಕ್ಷಕರನ್ನು ನೇಮಿಸಲಾಗಿದೆ. ಓರ್ವ ಶಿಕ್ಷಕ ಕೊರತೆಯೂ ಇದೆ. ಈಗಾಗಲೇ ನಿವೃತ್ತ ಶಿಕ್ಷಕಿ ಸಂಧ್ಯಾ ಅವರು ಪ್ರತಿ ದಿನ ಮಧ್ಯಾಹ್ನ ಬಳಿಕ ಉಚಿತ ಭೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಜ್ಞಾ ಎಂಬ ಶಿಕ್ಷಕಿಯೂ ವಾರದಲ್ಲಿ ಒಂದು ದಿನ ಇಂಗ್ಲಿಷ್‌ ಗ್ರಾಮರ್‌ ಕಳಿಸುವುದಾಗಿ ಈಗಾಗಲೇ ಎಸ್‌.ಡಿ.ಎಂ.ಸಿ.ಗೆ ತಿಳಿಸಿದ್ದಾರೆ.

ಸಾಧಕ ಮಕ್ಕಳು
ಇಲ್ಲಿನ ವಿದ್ಯಾರ್ಥಿಗಳು ಕ್ಲಸ್ಟರ್‌ ಮಟ್ಟದಲ್ಲಿ 20ಕ್ಕೂ ಹೆಚ್ಚು ಪ್ರತಿಭಾ ಪುರಸ್ಕಾರ ಪಡೆದು ಖಾಸಗಿ ಶಿಕ್ಷಣಕ್ಕೆ ಸೆಡ್ಡು ಹೊಡೆಯುವ ಸಾಧನೆ ತೋರಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿ ಸುನಿತಾ ಎನ್‌ಎಂಎಂಎಸ್‌ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 4 ವರ್ಷಗಳ ಅವಧಿಗೆ ಮಾಸಿಕ 500ರಂತೆ ವಿದ್ಯಾರ್ಥಿವೇತನ ಪಡೆಯುತ್ತಿದ್ದಾಳೆ. ಕಾರ್ತಿಕ್‌ ದೇವಾಡಿಗ ಸ್ವಯಂಚಾಲಿತ ದಾರಿದೀಪ ಅಳವಡಿಸುವ ವಿಧಾನದಲ್ಲಿ ಜಿಲ್ಲಾಮಟ್ಟದ ಇನ್ಸ್‌ಪಯರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದೆಯೇ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಸಾಧನೆ ತೊರುತ್ತಿರುವುದು ಕಲಿಕೆಗೆ ಆಸಕ್ತಿ ಮುಖ್ಯ ಎಂಬುದನ್ನು ರುಜುವಾತುಪಡಿಸಿದ್ದಾರೆ.

ಮಲೆಕುಡಿಯ ಸಮುದಾಯ ದವರೇ ಹೆಚ್ಚಿರುವ ಈ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪತ್ರಕರ್ತರ ಸಂಘವೂ ನೆರವಾಗಿದೆ. ಶಾಲೆಗೆ ಅಗತ್ಯ 5 ಕಂಪ್ಯೂಟರ್‌, ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಕೈತೊಟ ನಿರ್ಮಾಣ, ಗ್ರಂಥಾಲಯ ಕೊಡುಗೆಯಾಗಿ ನೀಡುವ ಭರವಸೆ ನೀಡಿದೆ. ಈಗಾಗಲೇ ಶಾಲೆಗೆ ಓರ್ವ ಆಂಗ್ಲ ಭಾಷಾ ಶಿಕ್ಷಕಿಯನ್ನೂ ನೇಮಿಸಲಾಗಿದೆ.

ಶಾಲೆಗೆ ಅನುದಾನ ಮೀಸಲು
ಶಾಸಕ ಹರೀಶ್‌ ಪೂಂಜ ಅವರ ಅನುದಾನದಲ್ಲಿ ಶಾಲೆ ಮೂಲ ಸೌಕರ್ಯಕ್ಕೆ 4 ಲಕ್ಷ ರೂ. ನೀಡಲಾಗಿದೆ. ಅದರಂತೆ ಕಟ್ಟಡ ದುರಸ್ತಿ, ಶಾಲೆಗೆ ಬಣ್ಣ ಬಳಿಯುವ ಕೆಲಸ ಸಹಿತ ನೆಲ, ಮಹಡಿ ದುರಸ್ತಿ ಕಾರ್ಯ ನಡೆಯುತ್ತಿದೆ. ಸಂಸದರ ನಿಧಿಯಿಂದ ಗ್ರಾಮದ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಮೀಸಲಿರಿಸುವ ಭರವಸೆ ನೀಡಲಾಗಿದೆ.

ಈಗಾಗಲೇ ಶಾಲೆಗೆ ಆವರಣ ಗೋಡೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಆರ್‌. ಗ್ರಾ.ಪಂ. ಅನುದಾನದಿಂದ 5 ಲಕ್ಷ ರೂ. ಮೀಸಲಿರಿಸಿದ್ದಾರೆ.
ನರೇಗಾ ಯೋಜನೆಯಲ್ಲಿ ಶಾಲೆಗೆ ತೆರೆದ ಬಾವಿ ನಿರ್ಮಿಸಲು 3 ಲಕ್ಷ ರೂ. ಮೀಸಲಿರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರು ವಿಧಾನ ಪರಿಷತ್‌ ಸದಸ್ಯರ ಅನುದಾನದ ಮೂಲಕ 5 ಲಕ್ಷ ರೂ. ಅನುದಾನ ಮೀಸಲಿರಿಸುವುದಾಗಿಯೂ ಭರವಸೆ ನೀಡಿದ್ದಾರೆ.

ಸರ್ವರ ಸಹಕಾರ
ಶಾಲೆ ಉಳಿವಿಗೆ ಶಿಕ್ಷಕರು, ಊರವರು ಹಾಗೂ ಹೆತ್ತವರು ಸಹಕಾರ ತೊರಿದ್ದಾರೆ. ನಮ್ಮ ಶಾಲೆ ಅಭಿಮಾನದಿಂದ ಶಾಲೆಗೆ ಮಕ್ಕಳನ್ನು ದಾಖಲಿಸಿದ್ದಾರೆ. ಮಕ್ಕಳ ಅನುಕೂಲಕ್ಕಾಗಿ ರಾಮಚಂದ್ರ ಭಟ್‌ ಹಾಗೂ ಸಂತೋಷ್‌ ವಾಹನದ ವ್ಯವಸ್ಥೆಯನ್ನೂ ಕಲ್ಪಿಸಿದ್ದಾರೆ.
– ಪ್ರಭಾಕರ್‌ ದೇವಾಡಿಗ, ಎಸ್‌ಡಿ.ಎಂ.ಸಿ. ಅಧ್ಯಕ್ಷರು

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

2(1

Belthangady: ಕೃಷಿ, ಕರಕುಶಲ ಕಲೆಗಳ ವೈಭವ

1(1

Madanthyar: ಬಾಲಕಿಯರ ಹಾಸ್ಟೆಲ್‌ ಕಟ್ಟಡ ಅನಾಥ!

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.