ಬರ ಪರಿಶೀಲನಾ ಪ್ರವಾಸ ಇಂದಿನಿಂದ
Team Udayavani, Jun 7, 2019, 6:00 AM IST
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರದಿಂದ ಮೂರು ದಿನ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನಾ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಯಡಿಯೂರಪ್ಪ ಅವರು ಪ್ರವಾಸ ಕೈಗೊಳ್ಳಲಿದ್ದು, ಸ್ಥಳೀಯ ಜನ, ರೈತರು, ಜನಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದು, ಅಧಿಕಾರಿಗಳೊಂದಿಗೂ ಚರ್ಚಿಸಲಿದ್ದಾರೆ.
ಪ್ರವಾಸ ವಿವರ: ಶುಕ್ರವಾರ ಬೆಳಗ್ಗೆ 11.30ಕ್ಕೆ ಬಾದಾಮಿ ತಾಲೂಕಿನಲ್ಲಿ ಬರ ಪರಿಸ್ಥಿತಿ ಅವಲೋಕಿಸಲಿರುವ ಯಡಿಯೂರಪ್ಪ, ಬಳಿಕ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹುನಗುಂದ ತಾಲೂಕಿನಲ್ಲೂ ಪರಿಶೀಲಿಸಿ, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 10ಕ್ಕೆ ಕೊಪ್ಪಳ, ಸಂಜೆ 4 ಗಂಟೆಗೆ ಲಿಂಗಸುಗೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಭಾನುವಾರ ಬೆಳಗ್ಗೆ ಯಾದಗಿರಿ ತಾಲೂಕಿನಲ್ಲಿ ಬರ ಪರಿಸ್ಥಿತಿ ವೀಕ್ಷಿಸುವರು. ಮಧ್ಯಾಹ್ನ 3ಕ್ಕೆ ಗುರುಮಿಠ್ಕಲ್ ತಾಲೂಕಿನಲ್ಲಿ ಪರಿಶೀಲನೆ ನಡೆಸಿ ರಾತ್ರಿ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.