24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
Team Udayavani, Jun 7, 2019, 6:03 AM IST
ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿರುವ ಮೇಲ್ಮೈ ಸುಳಿಗಾಳಿ ಹಾಗೂ ಗಾಳಿಯ ಒತ್ತಡ ಕಡಿಮೆಯಿದೆ. ಇದರೊಂದಿಗೆ ಮುಂಗಾರು ಪ್ರವೇಶಿಸಲು ಅಗತ್ಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆ ಯಲಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮಳೆಗೆ ನಾಲ್ವರು ಬಲಿ
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಸಹರಾಭಾನು (9) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಬುಧವಾರ ರಾತ್ರಿ ಮನೆಯ ಮಹಡಿ ಮೇಲೆ ಪೋಷಕರ ಜತೆ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು ಎನ್.ಸಿದ್ದಪ್ಪ (30) ಎಂಬುವರು ಮೃತಪಟ್ಟಿದ್ದಾರೆ. ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿ ಸಿಡಿಲು ಬಡಿದು ಬಸಪ್ಪ ಹುಸನಪ್ಪ ಸೀತನ್ನವರ (40) ಮೃತಪಟ್ಟಿದ್ದಾರೆ. ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿಯಿತು. ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಬಿರುಗಾಳಿ ಮಳೆಗೆ ಮನೆ ಗೋಡೆ ಕುಸಿದು ರೈತ ಯಲ್ಲಪ್ಪ ಸತ್ಯಪ್ಪ ಬಡು ಗುರವ (60) ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.