ರಾಜ್ಯದ 8 ಜಿಲ್ಲೆಗಳಲ್ಲಿ ನಿಫಾ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ರೋಗಲಕ್ಷಣಗಳು ಪತ್ತೆ ಹಿನ್ನೆಲೆ
Team Udayavani, Jun 7, 2019, 9:47 AM IST
ಉಡುಪಿ: ಕೇರಳದಲ್ಲಿ ನಿಫಾ ರೋಗಲಕ್ಷಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಇ ಮೇಲ್ ಮತ್ತು ಎಸ್ಸೆಮ್ಮೆಸ್ ಮೂಲಕ ಪ್ರತೀ ಜಿಲ್ಲೆಯ ಸರಕಾರಿ ಮತ್ತು ಖಾಸಗಿ ವೈದ್ಯರಿಗೆ ಈ ರೋಗಲಕ್ಷಣಗಳ ಬಗ್ಗೆ ಎಚ್ಚರದಿಂದಿರುವಂತೆ ಮಾಹಿತಿ ರವಾನೆಯಾಗಿದೆ.
ಕಾಸರಗೋಡು ಸಮೀಪದ ದಕ್ಷಿಣ ಕನ್ನಡ, ಉಡುಪಿ, ಕೊಡಗಿನಲ್ಲಿ ಎಚ್ಚರಿಕೆ ವಹಿಸಲಾಗಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಆಶಾ ಕಾರ್ಯಕರ್ತರಿಗೆ, ಕಿರಿಯ ಆರೋಗ್ಯ ಸಹಾಯಕರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ಕಳುಹಿಸಲಾಗಿದೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೂ ಸಂದೇಶ ರವಾನೆಯಾಗಿದೆ.
ಕೊಲ್ಲೂರಿನಲ್ಲಿ ಕಟ್ಟೆಚ್ಚರ
ಕೇರಳದಿಂದ ಅತೀ ಹೆಚ್ಚು ಭಕ್ತರು ಭೇಟಿ ನೀಡುವ ಧಾರ್ಮಿಕ ಸ್ಥಳ ಕೊಲ್ಲೂರಿನಲ್ಲೂ ಈ ರೋಗಲಕ್ಷಣಗಳು ಯಾರಲ್ಲಾದರೂ ಕಂಡುಬಂದಲ್ಲಿ ತಿಳಿಸುವಂತೆ ದೇಗುಲದ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ತಿಳಿಸಲಾಗಿದೆ. ಜ್ವರ ಅಥವಾ ಇನ್ನಿತರ ರೋಗಲಕ್ಷಣದಿಂದ ಬಳಲುವ ವ್ಯಕ್ತಿಗಳ ಬಗ್ಗೆ ಮಾಹಿತಿ ಲಭಿಸಿದರೆ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
48 ಗಂಟೆಗಳಲ್ಲಿ ಪತ್ತೆ
ಈ ರೋಗಲಕ್ಷಣ ಕಂಡುಬಂದಲ್ಲಿ ರಕ್ತ ಪರೀಕ್ಷೆಯ ವರದಿಯನ್ನು ಫ್ಯಾಕ್ಸ್ ಮುಖಾಂತರ ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗುತ್ತದೆ. 48 ಗಂಟೆಗಳಲ್ಲಿ ಅಲ್ಲಿಂದ ರೋಗಪತ್ತೆಯ ಬಗ್ಗೆ ಮಾಹಿತಿ ಸಿಗಲಿದೆ. ಶಂಕಿತ ನಿಫಾ ಪೀಡಿತರಿಗೆ ಚಿಕಿತ್ಸೆ ನೀಡಲು ಉಡುಪಿ ಜಿಲ್ಲೆ ಮತ್ತು ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಲಾ 2 ಬೆಡ್‌ಗಳನ್ನು ಮೀಸಲಿರಿಸಲಾಗಿದೆ ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.
ತಡೆಗಟ್ಟುವುದು ಹೇಗೆ?
1 ಸೋಂಕು ಪೀಡಿತ ವ್ಯಕ್ತಿಯಿಂದ ದೂರವಿರಬೇಕು.
2 ರೋಗ ಕಂಡುಬಂದಿರುವ ಪ್ರದೇಶಕ್ಕೆ ಪ್ರಯಾಣ ಒಳ್ಳೆಯದಲ್ಲ.
3 ರೋಗ ಪೀಡಿತ ವ್ಯಕ್ತಿ ಅನ್ಯರ ಸಂಪರ್ಕಕ್ಕೆ ಬಾರದಂತೆ ನೋಡಿಕೊಳ್ಳಬೇಕು.
4 ಜ್ವರ ಬಂದಾಗ ನಿರ್ಲಕ್ಷಿಸದೆ ವೈದ್ಯರ ಬಳಿ ಸೇರಿಸಿ ಚಿಕಿತ್ಸೆ ಪಡೆಯತಕ್ಕದ್ದು.
ಮಾಹಿತಿ ರವಾನೆ
ನಿಫಾ ರೋಗ ಲಕ್ಷಣದ ಬಗ್ಗೆ ಎಚ್ಚರದಿಂದ ಇರುವಂತೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಸುತ್ತೋಲೆ ರವಾನೆಯಾಗಿದೆ.
ಜ್ವರ, ಕೆಮ್ಮು ಮುಂತಾದ ರೋಗಲಕ್ಷಣಗಳು ಕಂಡು ಬಂದರೆ ಶೀಘ್ರದಲ್ಲೇ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
-ಡಾ| ವಾಸುದೇವ್ ಉಪಾಧ್ಯ, ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.