ಉಡುಪಿ ನಗರದಲ್ಲಿ ಮತ್ತೆ ನೀರಿಗಾಗಿ ಹಾಹಾಕಾರ?
Team Udayavani, Jun 7, 2019, 9:58 AM IST
ಉಡುಪಿ: ಸ್ವರ್ಣಾ ನದಿಯಲ್ಲಿ ಪುತ್ತಿಗೆ ಸೇತುವೆ ಕೆಳಭಾಗ, ಪುತ್ತಿಗೆ ಮಠ, ಪುತ್ತಿಗೆ ದೇವಸ್ಥಾನದ ಬಳಿ ನೀರೆತ್ತುವ ಪ್ರಕ್ರಿಯೆ ನಡೆಯುತ್ತಿದ್ದು, ಶುಕ್ರವಾರವೂ ಮುಂದುವರಿಯಲಿದೆ. ಈ ಭಾಗದಲ್ಲೂ ನೀರು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿರುವುದರಿಂದ ಒಂದೆರಡು ದಿನಗಳಲ್ಲಿ ಧಾರಾಕಾರ ಮಳೆ ಸುರಿಯದಿದ್ದರೆ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ.
ಅತ್ತ ಹೂಳೆತ್ತುವ ಕಾಮಗಾರಿಯೂ ಆರಂಭವಾಗುವ ಲಕ್ಷಣ ಗೋಚರಿಸುತ್ತಿಲ್ಲ.
ಇನ್ನೊಂದೆಡೆ ಮಳೆ ಸುರಿಯುವ ಲಕ್ಷಣವೂ ಕಾಣುತ್ತಿಲ್ಲ. ಸದ್ಯಕ್ಕೆ ಕೆಲವು ವಾರ್ಡ್‌ಗಳಿಗೆ ನಗರಸಭೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದು, ಒಂದೆರಡು ದಿನಗಳಲ್ಲಿ ನಿಲುಗಡೆಯಾಗುವ ಸಾಧ್ಯತೆಯೂ ಹೆಚ್ಚಿದೆ.
ತುಂಬೆ ಮಟ್ಟ ತುಸು ಏರಿಕೆ: ರೇಷನಿಂಗ್ ಪರಿಷ್ಕರಣೆ
ಮಂಗಳೂರು: ಬಂಟ್ವಾಳ ಆಸುಪಾಸಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 14 ಸೆಂ.ಮೀ.ನಷ್ಟು ಹೆಚ್ಚಳವಾಗಿದ್ದು, ಸದ್ಯ ಒಟ್ಟು ನೀರಿನ ಮಟ್ಟ 2.34 ಮೀ.ಗೆ ಏರಿದೆ. ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ರೇಷನಿಂಗ್ ವ್ಯವಸ್ಥೆಯನ್ನು ಗುರುವಾರದಿಂದ ಮತ್ತೆ ಪರಿಷ್ಕರಿಸಲಾಗಿದೆ.
ಇದರಂತೆ ಜೂ.6ರಿಂದ ಜೂ.9ರ ವರೆಗೆ ನೀರು ಪೂರೈಕೆ ಸ್ಥಗಿತ ಕೈಬಿಟ್ಟು, ಜೂ.8ರ ಬೆಳಗ್ಗೆ 6ರಿಂದ ಜೂ.12ರ ಬೆಳಗ್ಗೆ 6 ಗಂಟೆಯ ವರೆಗೆ ಒಟ್ಟು 96 ಗಂಟೆ ನೀರು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಜೂ.7ರಂದು ಮಾತ್ರ ನಗರದಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.
ಸದ್ಯ ಮುಂಗಾರು ಮಳೆಯ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಮತ್ತು ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಇನ್ನಷ್ಟು ಏರಿಕೆಯಾದರೆ ರೇಷನಿಂಗ್ ಕೂಡಲೇ ಕೈಬಿಡಲು ನಿರ್ಧರಿಸಲಾಗಿದೆ. ಆದರೆ ನೀರು ಮಿತವಾಗಿ ಬಳಸಿ ಸಾರ್ವಜನಿಕರು ಪಾಲಿಕೆ ಜತೆಗೆ ಕೈಜೋಡಿಸಬೇಕು ಎಂದು ಮನಪಾ ಆಯುಕ್ತರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.