15 ಸಾವಿರ ಸಸಿ ನೆಡುವ ಗುರಿ
ನ್ಯಾಯಾಧೀಶರಿಂದ ಕಕ್ಷಿದಾರರಿಗೆ ಸಸಿ ವಿತರಣೆ•ಧರ್ಮಸ್ಥಳ ಸಂಸ್ಥೆಯಿಂದ ಬೀಜದುಂಡೆ ನಾಟಿ
Team Udayavani, Jun 7, 2019, 1:21 PM IST
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್ ಕಕ್ಷಿದಾರರಿಗೆ ಸಸಿ ವಿತರಿಸಿದರು.
ಹರಿಹರ: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ನ್ಯಾಯಾಂಗ ಸಂಕೀರ್ಣದ ಆವರಣದಲ್ಲಿ ಗುರುವಾರ ನ್ಯಾಯಾಧೀಶರು ಕಕ್ಷಿದಾರರಿಗೆ ಸಸಿ ವಿತರಿಸಿದರು.
ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈ.ಕೆ.ಬೇನಾಳ್, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನಾದ್ಯಂತ ಈಗಾಗಲೆ ಸಾವಿರಾರು ಸಸಿ ನೆಡಲಾಗಿದೆ. ತಾಲೂಕಿನ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜು, ಹಾಸ್ಟೇಲ್ ಆವರಣದಲ್ಲಿ 10ರಿಂದ 15 ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದರು.
ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಸೇರಿದಂತೆ ಉತ್ತಮ ಪರಿಸರ ಕೊಡುವುದು ನಮ್ಮ ಕರ್ತವ್ಯ. ಕಕ್ಷಿದಾರರು ತಾವು ಪಡೆದಿರುವ ಸಸಿಗಳನ್ನು ತಮ್ಮ ಮನೆ, ಕಣಗಳ ಆವರಣ ಅಥವಾ ಜಮೀನುಗಳಲ್ಲಿ ನೆಟ್ಟು, ಪೋಷಣೆ ಮಾಡಬೇಕು ಎಂದರು.
2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅವಿನಾಶ್ ಚಿಂದು, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಿದ್ದರಾಜು, ವಕೀಲರ ಸಂಘದ ಅಧ್ಯಕ್ಷ ನಾಗರಾಜು ಹಲವಾಗಲು, ಎಪಿಪಿ ಷಂಶೀರ್ ಅಲಿಖಾನ್, ಹಿರಿಯ ವಕೀಲರಾದ ಶ್ರೀನಿವಾಸ ಕಲಾಲ್, ಎಸ್.ಪ್ರಸನ್ನಕುಮಾರ್, ರಾಜಶೇಖರ್, ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.