ಜೂನ್ 2ನೇ ವಾರದಲ್ಲಿ ಸಿಎಂ ಸಭೆ : ಮಾಹಿತಿ ನೀಡಲು ಸೂಚನೆ
Team Udayavani, Jun 8, 2019, 6:00 AM IST
ಮಡಿಕೇರಿ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜೂನ್ ಎರಡನೇ ವಾರ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವಿವಿಧ ಇಲಾಖಾ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಸಾಲ ಮನ್ನಾವನ್ನು ಎಷ್ಟು ಜನರಿಗೆ ನೀಡಲಾಗಿದೆ. ಎಷ್ಟು ಕೋಟಿ ಬಿಡುಗಡೆಯಾಗಿದೆ. ಮನಸ್ವಿನಿ, ಮೈತ್ರಿ, ವೃದ್ಧಾಪ್ಯ ವೇತನ ಹೀಗೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳು, ಹಾಸ್ಟೆಲ್‌ಗಳಿಗೆ ನಿವೇಶನ ಒದಗಿಸುವುದು, 94 ಸಿ ಮತ್ತು 94ಸಿಸಿ ರಡಿ ವಿಲೇವಾರಿಗೆ ಬಾಕಿ ಇರುವ ಅರ್ಜಿಗಳು ಮತ್ತಿತರ ಬಗ್ಗೆ ನಮೂನೆ ಮಾದರಿಯಲ್ಲಿ ಮಾಹಿತಿ ಒದಗಿಸುವಂತೆ ಅವರು ತಿಳಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವ ಹಣಾ ಧಿಕಾರಿ ಕೆ.ಲಕ್ಷಿ¾àಪ್ರಿಯ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಸೆಸ್ಕ್ ಇಇ ಸೋಮಶೇಖರ್, ಜಿ.ಪಂ. ಇಇ ಶ್ರೀಕಂಠಯ್ಯ, ರೇವಣ್ಣವರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗುಪ್ತಾಜಿ, ನಗರಾಭಿವೃದ್ದಿ ಯೋಜನಾ ನಿರ್ದೇಶಕ ಗೋಪಾಲಕೃಷ್ಣ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಬಿಸಿಎಂ ಇಲಾಖೆ ಅಧಿಕಾರಿ ಅವಿನ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.