ಬಗರ್‌ಹುಕುಂ ಸಾಗುವಳಿ ಚೀಟಿ ವಿತರಣೆಗೆ ಆಗ್ರಹ0

Team Udayavani, Jun 8, 2019, 3:00 AM IST

bagarhulu

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದಿರುವ ಹಿನ್ನಲೆಯಲ್ಲಿ ಕೂಡಲೇ ಜಿಲ್ಲಾಡಳಿತ ರೈತರಿಗೆ ಬಗರ್‌ಹುಕುಂ ಸಾಗುವಳಿ ಚೀಟಿಗಳ ವಿತರಣೆಗೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಚೇರಿ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌.ಕೃಷ್ಣಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿದ ಪ್ರಾಂತ ರೈತ ಸಂಘದ ಕಾರ್ಯಕರ್ತರು, ಬಗರ್‌ಹುಕುಂ ಸಾಗುವಳಿದಾರರು ಮಂಜೂರಾತಿಗಾಗಿ ಸಲ್ಲಿಸಿರುವ ಫಾರಂ ನಂ. 57, 53 ಮತ್ತು 50ರ ಅರ್ಜಿಗಳನ್ನು ಪರಿಶೀಲಿಸಿ ಸಾಗುವಳಿ ಚೀಟಿ ನೀಡಲು ಭೂ ಮಂಜೂರಾತಿ ಸಮಿತಿಗಳನ್ನು ರಚಿಸಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು.

ಪರಿಹಾರಕ್ಕೆ ಆಗ್ರಹ: ಗೋಮಾಳ ಹಾಗೂ ಅರಣ್ಯ ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಜಿಲ್ಲೆಯಲ್ಲಿ ಬರ ಹಾಗೂ ನೆರೆಯಿಂದ ಹಾನಿಗೀಡಾದ ಬೆಳೆಗಳಿಗೆ ತಕ್ಷಣ ಪರಿಹಾರ ವಿತರಿಸಬೇಕೆಂದ ಪ್ರತಿಭಟನಾನಿರತ ರೈತರು ಆಗ್ರಹಿಸಿದರು.

600 ರೂ. ಕೂಲಿ ನೀಡಲಿ: ಬರಗಾಲದ ಹಿನ್ನಲೆಯಲ್ಲಿ ಪಡಿತರ ಪ್ರಮಾಣವನ್ನು ಹೆಚ್ಚಳ ಮಾಡಿ ಜಿಲ್ಲೆಯ ರೈತರಿಗೆ ಹಾಗೂ ಜಾನುವಾರುಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದರು. ಉದ್ಯೋಗ ಖಾತ್ರಿ ಯೋಜನೆಯಡಿ ಕನಿಷ್ಠ ವರ್ಷಕ್ಕೆ 300 ದಿನ ಕೆಲಸ ಹಾಗೂ ದಿನಕ್ಕೆ 600 ರೂ. ಕೂಲಿ ಹಣ ನೀಡಬೇಕೆಂದು ಒತ್ತಾಯಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಸಾಕಷ್ಟು ಅಕ್ರಮಗಳು ನಡೆದಿದ್ದು, ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆನ್ನರಾಯಪ್ಪ, ಜಿಪಂ ಸದಸ್ಯರಾದ ರವಿಚಂದ್ರರೆಡ್ಡಿ, ಆರ್‌.ಚಂದ್ರಶೇಖರರೆಡ್ಡಿ, ಎ.ಎಂ.ಶ್ರೀರಾಮಪ್ಪ, ಆರ್‌.ಎನ್‌.ರಾಜು, ಎಚ್‌.ಎನ್‌.ಚಂದ್ರಶೇಖರ ರೆಡ್ಡಿ, ಎಲ್‌.ವೆಂಕಟೇಶ್‌, ವೆಂಕಟರೆಡ್ಡಿ, ಹೇಮಚಂದ್ರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ರೈತ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

ಹೋಬಳಿಗೊಂದು ಗೋಶಾಲೆ ತೆರೆಯಿರಿ: ಜಿಲ್ಲೆಯಲ್ಲಿ ಬರಗಾಲದ ಪರಿಣಾಮ ಮೇವು ಸಿಗುತ್ತಿಲ್ಲ. ಹೈನೋದ್ಯಮ ನಂಬಿರುವ ರೈತರಿಗೆ ಸಂಕಷ್ಟು ಎದುರಾಗಿದ್ದು, ಪಶು ಆಹಾರ ಬೆಲೆ ಮಾರುಕಟ್ಟೆಯಲ್ಲಿ ಗಗನಕ್ಕೇರಿದೆ. ಆದ್ದರಿಂದ ಸರ್ಕಾರ ಕೂಡಲೇ ಜಿಲ್ಲೆಗೊಂದು ಗೋಶಾಲೆ ತೆರೆಯಬೇಕು. ಉಚಿತವಾಗಿ ಮೇವು ವಿತರಿಸಬೇಕು. ಪಶು ಆಹಾರವನ್ನು ಕ್ವಿಂಟಲ್‌ಗೆ ಶೇ.50 ರಷ್ಟು ರಿಯಾಯಿತಿ ದರದಲ್ಲಿ ವಿತರಿಸಬೇಕೆಂದು ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.